Shaikh BigTv
September 18, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲೂಕಿನ ಬೆಳಗಲಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಎಂದಿನಂತೆ ಕೆಲಸಕ್ಕೆ ತೆರಳುವ ಸಮಯದಲ್ಲಿ ಹಿಬಂದಿಯಿಂದ ಬಂದ ಟ್ಯಾಂಕರ್, ಟ್ರ್ಯಾಕ್ಟರ್ ಗೆ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ನ ಟ್ರೇಲರ್ ಬೇರ್ಪಟ್ಟಿದೆ,ಅಪಘಾತದಲ್ಲಿ ಆರು ಜನ ಮಹಿಳೆಯರು ಸೇರಿದಂತೆ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ಇದ್ದ ಶಾಂತವ್ವ, ಕಲಾವತಿ, ಸವಿತಾ ಹಂಚಿನಾಳ, ಲಕ್ಷ್ಮಿ, ಮಹಾದೇವಿ, ಸವಿತಾ ಪಾಟೀಲ್ …
Read More »
Shaikh BigTv
September 18, 2024
Breaking News, ಧಾರವಾಡ
ಕುಂದಗೋಳ: ಗಣೇಶೋತ್ಸವದ 11ನೇ ದಿನದ ಗಣಪತಿ ಮೂರ್ತಿಗಳ ಮೆರವಣಿಗೆಯಲ್ಲಿ ಶಾಸಕ ಎಮ್ ಆರ್ ಪಾಟೀಲ್ ಭಾಗವಹಿಸಿ, ಟ್ರ್ಯಾಕ್ಟರ್ ಚಲಾವಣೆ ಮಾಡಿ ಗಮನ ಸೆಳೆದರು. ಕುಂದಗೋಳ ಪಟ್ಟಣದಲ್ಲಿನ ವಿವಿಧ ಕಡೆಗಳಲ್ಲಿ ಸ್ಥಾಪನೆ ಮಾಡಿದ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗವಹಿಸಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂದಗೋಳ ಪಟ್ಟಣದ ವಿವಿಧ ಗಣೇಶೋತ್ಸವ ಮಂಡಳಿಗಳ ಮುಖಂಡರು ಇದ್ದರು.
Read More »
Shaikh BigTv
September 18, 2024
Breaking News, ಧಾರವಾಡ
ಧಾರವಾಡ: ಸೆಪ್ಟೆಂಬರ್ 22 ರಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ. ಬಿ ಗುಡಿಸಿ ಅಭಿನಂದನಾ ಸಮಾರಂಭ ಹಾಗೂ ಘನಮನಸಂಪನ್ನರು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ವೀರಣ್ಣ ರಾಜೂರ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಗದುಗಿನ ತೋಂಟದಾರ್ಯ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಜಗದೀಶ ಶೆಟ್ಟರ …
Read More »
BigTv News
September 18, 2024
Breaking News
ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎನ್ ಪಿಕೆ ರಸಗೊಬ್ಬರಗಳಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಚಿವ ಸಂಪುಟವು ರೈತರಿಗೆ ಅನುಕೂಲವಾಗುವಂತೆ ಒಂದರ ನಂತರ ಒಂದರಂತೆ ಯೋಜನೆಗಳನ್ನು ಅನುಮೋದಿಸಿದೆ ಎಂದು ಹೇಳಿದರು. ಎನ್‌ಪಿಕೆ ರಸಗೊಬ್ಬರಗಳಿಗೆ (ಸಾರಜನಕ, …
Read More »
Shaikh BigTv
September 18, 2024
Breaking News, ಧಾರವಾಡ
ಧಾರವಾಡ : ಡಿವಿಜನ್ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯು ಒಂದು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ವಿಶೇಷ ಅಂಚೆ ಚೀಟಿ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪೋಸ್ಟ್ ಮಾಸ್ಟರ್ ಜನರಲ್ ಡಾ. ರಾಜೇಂದ್ರ ಕುಮಾರ್ ವಿಶೇಷ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪೋಸ್ಟ್ ಮಾಸ್ಟರ್ ಕುಂಟೋಜಿ, ಶರಣು ಹಂಡಿ ಸೇರಿದಂತೆ ಹಲವರು ಇದ್ದರು.
Read More »
BigTv News
September 18, 2024
Breaking News, ತುಮಕೂರು
ತುಮಕೂರು: ಸಮಾಜದಲ್ಲಿ ಧ್ವನಿ ಇಲ್ಲದ ವಿಶ್ವಕರ್ಮ ಸಮುದಾಯವನ್ನು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಆದ್ಯತೆ ಮೇರೆಗೆ ಪರಿಗಣಿಸುವಂತೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಸ್ಮರಣೀಯ. ವಿಶ್ವದ ಯಾವುದೇ ಕೆತ್ತನೆ, ಕುಸುರಿ, ಆಭರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸ್ಪರ್ಶ ಕಾಣಬಹುದಾಗಿದೆ. ವಿಶ್ವಕರ್ಮರ ಸ್ಪರ್ಶವಿಲ್ಲದ ಗುಡಿ …
Read More »
BigTv News
September 18, 2024
Breaking News
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಒಮರ್ ಅಬ್ದುಲ್ಲಾ ಅವರು ಸರ್ಕಾರವನ್ನು ರಚಿಸಿದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ಉಂಟಾಗುತ್ತದೆ. …
Read More »
BigTv News
September 18, 2024
Breaking News
ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು …
Read More »
BigTv News
September 18, 2024
Breaking News
ದೆಹಲಿ: ಚಂದ್ರಯಾನ ಮಿಷನ್‌ನ ಮೂರನೇ ಹಂತವನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಂತರ ಅದರ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದರೊಂದಿಗೆ, ಇದು ವೀನಸ್ (ಶುಕ್ರ) ಆರ್ಬಿಟರ್ ಮಿಷನ್, ಗಗನ್ಯಾನ್ ಮಿಷನ್‌ನ ಮುಂದಿನ ಕಾರ್ಯ, ಭಾರತೀಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಉಡಾವಣಾ ನೌಕೆ ಅಭಿವೃದ್ಧಿಗೂ ಅನುಮೋದನೆ ನೀಡಿದೆ. ಚಂದ್ರಯಾನ-4 ಎಂದು ಹೆಸರಿಸಲಾದ ಚಂದ್ರನ ಮಿಷನ್, ಚಂದ್ರನ ಮೇಲೆ …
Read More »
BigTv News
September 18, 2024
Breaking News, ವಿಜಯಪುರ
ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ …
Read More »