BigTv News
September 16, 2024
Breaking News, ರಾಯಚೂರು
ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ. ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ …
Read More »
BigTv News
September 16, 2024
Breaking News, ಧಾರವಾಡ
ಧಾರವಾಡ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದ ವರೆಗೆ ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ರಚಿಸಲಾಯಿತು. ಜಿಲ್ಲೆಯ ಧಾರವಾಡ ತಾಲೂಕಿನ ತೇಗೂರದಿಂದ ಮಾವಿನಕೊಪ್ಪ ಗ್ರಾಮದ ವರಗೆ ಅಂದಾಜು 55 ಕಿಲೋ ಮೀಟರ್ ಉದ್ಧದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು. ಇದರಲ್ಲಿ ಪ್ರತಿ ಮೀಟರಗೆ ಒಬ್ಬರಂತೆ ಸುಮಾರು 60 ಸಾವಿರ ಜನ ಹಾಗೂ ರಾಷ್ಟ್ರೀಯ ಹೆದ್ದಾರಿ, ನಗರ ಪ್ರದೇಶದಲ್ಲಿ ಡಬಲ್ ಲೈನ್ ಮಾಡಲಾಗಿತ್ತು. ಮಾನವ ಸರಪಳಿ …
Read More »
BigTv News
September 16, 2024
Breaking News
ನವದೆಹಲಿ: ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಹೇಳಿದ ತಕ್ಷಣವೇ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯನ್ನು ನವೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಜೊತೆಯೇ ನಡೆಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಮಾಡಿಕೊಂಡಿದ್ದ ಮನವಿಯನ್ನು ಪರೋಕ್ಷವಾಗಿ ತಿರಸ್ಕರಿಸಿದೆ. ಚುನಾವಣೆ ನಡೆಸುವುದು ಆಯೋಗದ ಮೂಲಭೂತ ಕರ್ತವ್ಯ. ಆದರೆ ರಾಜಕೀಯ ಪಕ್ಷಗಳು ಇಲ್ಲವೇ ಸರ್ಕಾರ ಹೇಳಿದ ತಕ್ಷಣ ಚುನಾವಣೆ ನಡೆಸಲು ಸಾಧ್ಯವಿಲ್ಲ. …
Read More »
BigTv News
September 16, 2024
Breaking News, ಕಲಬುರಗಿ
ಕಲಬುರಗಿ: ನಾಳೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ, ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ್ಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು …
Read More »
BigTv News
September 16, 2024
Breaking News, ಧಾರವಾಡ
ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹವಾಮಾನ ವೈಪರೀತ್ಯ ನಿವ೯ಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಶೀರ್ಷಿಕೆಯಡಿಯಲ್ಲಿ ಸೆಪ್ಟೆಂಬರ್ 21 ರಿಂದ 24 ರವರೆಗೆ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಈ ಬಾರಿ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮುಖ್ಯ ಉದ್ದೇಶವಾಗಿದ್ದು, ಮೇಳದಲ್ಲಿ ಸುಮಾರು 14-16 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ. ನೋಂದಣಿ ಮಾಡುವ ವ್ಯವಸ್ಥೆಯನ್ನು ಈ ಕೃಷಿ ಮೇಳದಲ್ಲಿ ಕಲ್ಪಿಸಲಾಗಿದೆ. ಮೇಳದಲ್ಲಿ …
Read More »
BigTv News
September 16, 2024
Breaking News, ಬೆಳಗಾವಿ
ಬೆಳಗಾವಿ: ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಆಧುನಿಕ ಸೌಲಭ್ಯ ಒಳಗೊಂಡ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಮತೀರ್ಥ ನಗರದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಆವರಣ ಗೋಡೆ ನಿರ್ಮಾಣ, ನೆಲ ಸಮತಟ್ಟುಗೊಳಿಸುವುದು ಸೇರಿದಂತೆ ಮೊದಲ ಹಂತದ ಕಾಮಗಾರಿಗಳು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿವೆ ಎಂದರು. ಸದ್ಯ ಇರುವ ಜಿಲ್ಲಾ ಕ್ರೀಡಾಂಗಣದ ಲೀಸ್ …
Read More »
BigTv News
September 16, 2024
Breaking News
ಮುದ್ದೇಬಿಹಾಳ: ತಾಲೂಕಿನ ಚಟ್ಟಿಹಾಳ ಗ್ರಾಮದ ಯುವತಿ ಬಾಲವ್ವ ಕಮರಿ ಕೃಷ್ಣಾ ನದಿಗೆ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ ಎಂದು ವರದಿ ತಿಳಿಸಿದೆ. ಆಕೆಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ತಂಡ ಹಾಗೂ ನುರಿತ ಈಜುಗಾರರೊಂದಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 14 ರಂದೇ ಯುವತಿ ನದಿಗೆ ಹಾರಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …
Read More »
BigTv News
September 16, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. ಉದ್ಯೋಗಿನಿ ಯೋಜನೆಯು …
Read More »
Shaikh BigTv
September 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮುನಿರತ್ನ, ಪ್ರಕರಣಗಳ ಬೆಂಬಲಿಸೋ ಮನಸ್ಥಿತಿ ಇವರಿಗೆ ಹೇಗೆ ಬರುತ್ತೋ ಗೊತ್ತಿಲ್ಲ ಎಚ್. ಕೆ. ಪಾಟೀಲ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ಸಚಿವ ತಿರುಗೇಟು ನೀಡಿದ್ದು ಅವರು, ಜಿಗಜಿಣಗಿ ಅವರು ಏನ್ ಹೇಳಿದರು ಅಂತಾ ಶೆಟ್ಟರ ಕೇಳಲಿ. ಹೆಣ್ಣು ಮಕ್ಕಳನ್ನು ಕನಿಷ್ಠವಾಗಿ ನೋಡುವ ವ್ಯಕ್ತಿಗೆ ಇವರ ಬೆಂಬಲ ಎಷ್ಟು ಸರಿ..? ಬಿಜೆಪಿಯವರೇ ಮುನಿರತ್ನವರಿಗೆ ಸೋಕಾಸ್ ನೋಟಿಸ್ ನೀಡಿದ್ದಾರೆ.ಮುನಿರತ್ನ ತಪ್ಪೇ ಮಾಡಿಲ್ಲ ಅಂದ್ರೆ ನೋಟಿಸ್ …
Read More »
Shaikh BigTv
September 16, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟಿಕರಣ ಮಿತಿಮೀರಿದೆ. ಸರ್ಕಾರದ ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಹೆಚ್ಚು ಗಲಭೆ ಗಲಾಟೆಗಳು ನಡೆಯುತ್ತಿವೆ ಎಂದು ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತುಷ್ಟಿಕರಣದ ನೀತಿಯಿಂದ ಸರ್ಕಾರವೇ ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಸಂದರ್ಭದಲ್ಲಿ ಗಲಭೆಗಳು ನಡೆಯುತ್ತವೆ ಎಂದರು. ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಮೆರವಣಿಗೆ ವಿಷಯಕ್ಕೆ ಸವಾಲ್ …
Read More »