Breaking News

Breaking News

ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ

ಕಲಬುರಗಿ: ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Read More »

ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಇಳಿಕೆ: ಕ್ರಸ್ಟ್‌ಗೇಟ್‌ ಬಂದ್

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿರುವ ಕಾರಣ ಮಂಗಳವಾರದಿಂದ ಕ್ರಸ್ಟ್‌ಗೇಟ್‌ಗಳನ್ನು ಸಂಪೂರ್ಣ ಬಂದ್ ಮಾಡಿ ನೀರು ಸಂಗ್ರಹಿಸಿ ಇಟ್ಟುಕೊಳ್ಳುವ ಕಾರ್ಯ ಆರಂಭವಾಗಿದೆ. ಒಳಹರಿವಿನ ಪ್ರಮಾಣ 10,683 ಕ್ಯುಸೆಕ್‌ನಷ್ಟಿದ್ದು, ಕಾಲುವೆಗಳಿಗೆ ಹರಿಯುವ ನೀರಿನ ಪ್ರಮಾಣ 10,696 ಕ್ಯೂಸೆಕ್‌ನಷ್ಟಿದೆ. ಹೀಗಾಗಿ ನದಿಗೆ ನೀರು ಹರಿಸುವುದನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ. ಅಣೆಕಟ್ಟೆಯ ಗರಿಷ್ಠ ಮಟ್ಟ 1,633 ಅಡಿ ಇದ್ದು, ಸದ್ಯ 1,632 ಅಡಿ ಮಟ್ಟದಲ್ಲಿ ನೀರು ನಿಲ್ಲಿಸಲಾಗಿದೆ. 105.78 …

Read More »

ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಎಂ.ಬಿ.ಪಾಟೀಲ ಸಹಾಯಹಸ್ತ

ವಿಜಯಪುರ: ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದಿದ್ದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ. ನಗರ ತಮ್ಮ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಗ್ರಾಮದ ವಿದ್ಯಾರ್ಥಿ ಶ್ರೀಧರ ಬಸವರಾಜ …

Read More »

ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಸರ್ಕಾರ ಆದೇಶ

ರಾಯಚೂರು: ರಾಯಚೂರು ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ. ಇಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ರಾಯಚೂರು ನಗರಸಭೆಯನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಕೂಗು ಹಲವು ವರ್ಷಗಳಿಂದಲೇ ಇತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸಿ ಕಾರ್ಯಯೋಜನೆ ರೂಪಿಸಲಾಗಿತ್ತು. ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಯಚೂರು ನಗರಸಭೆಯನ್ನು ಮಹಾನಗರ …

Read More »

ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ

ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು.

Read More »

ಮಣಿಪುರದಲ್ಲಿ ಶಾಶ್ವತ ಶಾಂತಿ ನೆಲೆಸಲು ಸಮುದಾಯಗಳೊಂದಿಗೆ ಮಾತುಕತೆ: ಅಮಿತ್ ಶಾ

ನವದೆಹಲಿ : ಮಣಿಪುರದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡಲು ಸರಕಾರವು ಮೈತೈ ಮತ್ತು ಕುಕಿ ಸಮುದಾಯದೊಂದಿಗೆ ಮಾತುಕತೆ ನಡೆಸುತ್ತಿದೆ. ಇದರೊಂದಿಗೆ ಗಡಿ ನುಸುಳುವಿಕೆಯನ್ನು ತಡೆಗಟ್ಟಲು ಮ್ಯಾನ್ಮಾರ್ ಗಡಿಯಲ್ಲಿ ಬೇಲಿ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮೋದಿ ಸರಕಾರದ ಮೂರನೆ ಅವಧಿಯ 100 ದಿನಗಳಲ್ಲಿ ಆಗಿರುವ ಸಾಧನೆಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಅಮಿತ್ ಶಾ, ಕಳೆದ ವಾರದಲ್ಲಿನ ಮೂರು ದಿನಗಳ …

Read More »

ಪಿಎಂ ಆವಾಸ್ ಯೋಜನೆಯಡಿ 3923 ಮನೆಗಳು ಮಂಜೂರು: ಶಾಸಕ ಪ್ರಭು ಚವ್ಹಾಣ್

ಬೀದರ್: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ್ ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ್ ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ್ ತಿಳಿಸಿದ್ದಾರೆ. ಔರಾದ್ ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಮನೆಗಳನ್ನು ಕಟ್ಟಿಸಿಕೊಡುವಂತಾಗಲು ಮನೆಗಳನ್ನು ಮಂಜೂರು ಮಾಡಬೇಕೆಂದು ಈ ಹಿಂದೆ ಹಲವಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು …

Read More »

ಭಾರತದಲ್ಲಿ ಶೀಘ್ರದಲ್ಲೇ ಡಿಜಿಟಲ್ ಜನಗಣತಿ: ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಜನಗಣತಿ ವಿಚಾರದಲ್ಲಿ ದೇಶದಲ್ಲಿ ಪ್ರತಿದಿನ ರಾಜಕೀಯ ನಡೆಯುತ್ತಿದೆ, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತದಲ್ಲಿ ಜನಗಣತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ. ಆದರೆ, ಯಾವ ನಡೆಸಲಾಗುತ್ತದೆ ಎಂಬುದಕ್ಕೆ ಸ್ಪಷ್ಟನೆ ನೀಡಿಲ್ಲ. ಇತ್ತೀಚೆಗೆ ದೇಶದಲ್ಲಿ ಜನಗಣತಿಗೆ ಸಿದ್ಧತೆ ನಡೆಯುತ್ತಿದೆ ಎಂಬ ವರದಿಗಳು ಬಂದಿದ್ದವು. ಜನಗಣತಿ ಕುರಿತು ಪ್ರಶ್ನೆಯನ್ನು ಕೇಳಿದಾಗ, ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ ಎಂದು ಶಾ ಹೇಳಿದರು. 2011ರಿಂದ ದೇಶದಲ್ಲಿ ಜನಗಣತಿ ನಡೆದಿಲ್ಲ. ಪ್ರಧಾನಿ …

Read More »

ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ನೀಡಲಾಗಿದೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದ್ದು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲು ನಿರ್ಧರಿಸಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ …

Read More »

ರೈತರ ಪಹಣಿ ಪ್ರತ್ಯೇಕಗೊಳಿಸಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಚಿತ್ರದುರ್ಗ : ರೈತರ ಪಹಣಿ ಪ್ರತ್ಯೇಕ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಿಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ನಡೆದಿದೆ. ಹೌದು ಹಿರಿಯೂರು ಪಟ್ಟಣದಲ್ಲಿ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲಗಲದ್ದಿ ಗ್ರಾಮ ಪಂಚಾಯಿತಿ ಗ್ರಾಮಲೆಕ್ಕಿಗ ನಾಗಪ್ಪ ಲಮಾಣಿ ರೇಡ್ ಹ್ಯಾಂಡ್ ಆಗಿ …

Read More »