Breaking News

Breaking News

ಮುಂಬೈ ಬೆಂಗಳೂರು ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್‌‍ ವೇ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಪುಣೆ: ಮುಂಬೈ ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದು, ಇನ್ನು ಆರು ತಿಂಗಳಲ್ಲಿ ಕಾಮಗಾರಿ ಶುರುವಾಗಲಿದೆ ಎಂದು ತಿಳಿಸಿದ್ದಾರೆ. ಮುಂಬೈನ ಅಟಲ್ ಸೇತುವೆಯಿಂದ ಈ ಹೊಸ ರಸ್ತೆ ಶುರುವಾಗಲಿದೆ, ಪುಣೆ ರಿಂಗ್ ರಸ್ತೆಯ …

Read More »

ದಣಿವರಿಯದ ಕೆಲಸ ಪರಿಶ್ರಮದ ಮೂಲಕ ಭಾರತದ ಪ್ರತಿಷ್ಠೆ ಹೆಚ್ಚಿಸಿದ ಮೋದಿಜಿ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನದಿನದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಅವರು ತಮ್ಮ ದಣಿವರಿಯದ ಕೆಲಸ, ಪರಿಶ್ರಮ ಮತ್ತು ದೂರದಷ್ಟಿಯ ಮೂಲಕ ಜನರ ಜೀವನದಲ್ಲಿ ಸಕಾರಾತಕ ಬದಲಾವಣೆಗಳನ್ನು ತಂದಿದ್ದಾರೆ ಮತ್ತು ಜಗತ್ತಿನಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು. 74 ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ, ತಮ್ಮ ದಶಕಗಳ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಕ್ಕಾಗಿ ತ್ಯಾಗ ಮತ್ತು ಸಮರ್ಪಣೆಯ ಹೊಸ …

Read More »

ಆರು ತಿಂಗಳಲ್ಲಿ ವ್ಯಾಜ್ಯ ವಿಲೇವಾರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ವ್ಯಾಜ್ಯಾ ಬಾಕಿ ಇರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಮುಂದಿನ 6 ತಿಂಗಳಲ್ಲಿ ವ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಅರೆ ನ್ಯಾಯಿಕ ಪ್ರಾಧಿಕಾರಗಳಾದ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರುಗಳ ನ್ಯಾಯಾಲಯಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ದಾಖಲಾಗುವ ಅರ್ಜಿಗಳು ಮತ್ತು ಮೇಲ್ಮನವಿಯಂತಹ ಅರೆ ನ್ಯಾಯಿಕ ಪ್ರಕರಣಗಳಲ್ಲಿ ಶಾಸನಬದ್ಧ …

Read More »

ಸಿದ್ದಸಿರಿ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಇಥೇನಾಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪಬ್ಲಿಕ್ ಗಾರ್ಡನ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ರೈತರು, ಕೂಡಲೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಸರಕಾರದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಪರಿಹರಿಸಬೇಕು ಎಂದು …

Read More »

ಬಿಪಿಎಲ್ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಣೆ: ಸಚಿವ ಮುನಿಯಪ್ಪ

ಕಲಬುರಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ …

Read More »

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಪಿಡಿಒ ಭೀಕರ ಅಪಘಾತದಲ್ಲಿ ಸಾವು

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಿಡಿಒ ಓರ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ಬಳಿಯ ಇಟಗಿ ಗ್ರಾಮದಲ್ಲಿ ನಡೆದಿದೆ. ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ (32) ಮೃತ ದುರ್ದೈವಿ. ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದ್ವಜಾರೋಹಣದ ನಿಮಿತ್ತ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಹಾಲಿನ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. …

Read More »

ಹೆಚ್ಚಾಗುತ್ತಿರುವ ನಿರುದ್ಯೋಗ ಸಮಸ್ಯೆ: ವಲಸೆ ಹೊರಟ ಯುವಕರು

ಗದಗ: ಉದ್ಯೋಗ ಅರಸಿ ದೊಡ್ಡ ನಗರ, ಪಟ್ಟಣಗಳಿಗೆ ಯುವಕರು ದೊಡ್ಡ ಪ್ರಮಾಣದಲ್ಲಿ ವಲಸೆ ಹೋಗುತ್ತಿರುವ ಪರಿಣಾಮ ಗದಗ ಜಿಲ್ಲೆಯ ಕೆಲ ಗ್ರಾಮಗಳು ವೃದ್ಧಾಶ್ರಮಗಳಾಗಿ ಬದಲಾಗುತ್ತಿವೆ. ಈ ಭಾಗಗಳಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ ಇಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಅಲ್ಲದೆ, ಈ ವರ್ಷ ಅತಿವೃಷ್ಟಿ, ಮತ್ತು ಬೆಳೆ ನಷ್ಟದಿಂದಾಗಿ ಯುವಕರು ಜೀವನೋಪಾಯಕ್ಕಾಗಿ ನಗರಗಳತ್ತ ಮುಖ ಮಾಡುವಂತಾಗಿದೆ. ಅಲ್ಲದೆ, ಅತ್ಯಂತ ಕಡಿಮೆ ವೇತನ ಕೂಡ ವಲಸೆಗೆ ಮತ್ತೊಂದು ಕಾರಣವಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ …

Read More »

1000 ವರ್ಷಗಳ ಅಭಿವೃದ್ಧಿಗಾಗಿ ಭಾರತ ಭದ್ರಬುನಾದಿ ಸೃಷ್ಟಿ: ಪ್ರಧಾನಿ ಮೋದಿ

ಗಾಂಧಿನಗರ: ದೇಶದ ಕ್ಷಿಪ್ರ ಪ್ರಗತಿಗಾಗಿ ತಮ್ಮ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಪ್ರತಿಯೊಂದು ವಲಯ ಹಾಗೂ ಅಂಶಗಳಿಗೂ ಸ್ಪಂದಿಸಲು ಯತ್ನಿಸಿದ್ದೇವೆ. ನಮ್ಮ ಸರ್ಕಾರದ ಆದ್ಯತೆಗಳು, ವೇಗ ಹಾಗೂ ಪ್ರಮಾಣವನ್ನು ನೀವು ಗಮನಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ 1000 ವರ್ಷಗಳ ಅಭಿವೃದ್ಧಿಗಾಗಿ ಭಾರತ ಬುನಾದಿಯನ್ನು ಸೃಷ್ಟಿಸುತ್ತಿದೆ. ಮೊದಲ ಸ್ಥಾನಕ್ಕೇರುವುದಷ್ಟೇ ನಮ್ಮ ಆದ್ಯತೆಯಲ್ಲ, ಆ ಪಟ್ಟವನ್ನು ಉಳಿಸಿಕೊಳ್ಳುವುದು ಕೂಡ ಆಗಿದೆ. ಅಯೋಧ್ಯೆ ಹಾಗೂ …

Read More »

ಕೈಕೊಟ್ಟ ಮಳೆ, ಒಣಗುತ್ತಿರುವ ಬೆಳೆ

ಬೆಂಗಳೂರು: ನೈರುತ್ಯ ಮುಂಗಾರು ಮಳೆಯು ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದ್ದು, ಮುಂಗಾರು ಹಂಗಾಮಿನ ಹಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಅಲ್ಲದೆ, ಭಾಗಶಃ ಮೋಡ ಕವಿದ ವಾತಾವರಣ ಇರುವುದರಿಂದ ಕೀಟ ಬಾಧೆಯೂ ಅಧಿಕವಾಗಿದೆ. ಕಳೆದ ವರ್ಷ ಕೈಕೊಟ್ಟಿದ ಮುಂಗಾರು ಈ ಬಾರಿ …

Read More »

ಒಡಿಶಾದಲ್ಲಿ ಸುಭದ್ರಾ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ ಸುಭದ್ರಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. ಈ ಯೋಜನೆಯ ಸೌಲಭ್ಯ ಒಡಿಶಾದ ಸುಮಾರು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ದೊರಕಲಿದೆ. ಈ ಯೊಜನೆಯಡಿ 21-60 ವರ್ಷ ಮಹಿಳೆಯರು ಐದು ವರ್ಷಗಳಲ್ಲಿ ₹ 50 ಸಾವಿರ ಪಡೆಯಲಿದ್ದಾರೆ. ಅಂದರೆ ಪ್ರತಿ ವರ್ಷ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಎರಡು ಕಂತುಗಳಲ್ಲಿ ₹10 ಸಾವಿರ ಜಮಾ ಆಗಲಿದೆ. ಇದೇ ವೇಳೆ …

Read More »