BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಇಥೇನಾಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪಬ್ಲಿಕ್ ಗಾರ್ಡನ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ರೈತರು, ಕೂಡಲೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಸರಕಾರದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಪರಿಹರಿಸಬೇಕು ಎಂದು …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ : ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇಷ್ಟು ದಿನ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಾಗೂ ಇನ್ನೂ 5 ಕೆಜಿ ಅಕ್ಕಿಯ ಬದಲು ಡಿಬಿಟಿ ಮೂಲಕ ಮನೆಯಲ್ಲಿ ಎಷ್ಟು ಸದಸ್ಯರು ಇರುತ್ತಾರೆ ಅಷ್ಟು ಮೊತ್ತದ ಹಣ ಸಂದಾಯ ಮಾಡುತ್ತಿತ್ತು. ಆದರೆ ಇದೀಗ ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿಗೆ ಸೂಚಿಸಿದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅಕ್ಕಿ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ …
Read More »
BigTv News
September 17, 2024
Breaking News, ಕೊಪ್ಪಳ
ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಿಡಿಒ ಓರ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ಬಳಿಯ ಇಟಗಿ ಗ್ರಾಮದಲ್ಲಿ ನಡೆದಿದೆ. ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ (32) ಮೃತ ದುರ್ದೈವಿ. ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದ್ವಜಾರೋಹಣದ ನಿಮಿತ್ತ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಹಾಲಿನ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. …
Read More »
BigTv News
September 17, 2024
Breaking News, ಗದಗ
ಗದಗ: ಉದ್ಯೋಗ ಅರಸಿ ದೊಡ್ಡ ನಗರ, ಪಟ್ಟಣಗಳಿಗೆ ಯುವಕರು ದೊಡ್ಡ ಪ್ರಮಾಣದಲ್ಲಿ ವಲಸೆ ಹೋಗುತ್ತಿರುವ ಪರಿಣಾಮ ಗದಗ ಜಿಲ್ಲೆಯ ಕೆಲ ಗ್ರಾಮಗಳು ವೃದ್ಧಾಶ್ರಮಗಳಾಗಿ ಬದಲಾಗುತ್ತಿವೆ. ಈ ಭಾಗಗಳಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ ಇಲ್ಲಿ ಉದ್ಯೋಗ ಸಿಗುವುದು ಕಷ್ಟವಾಗಿದೆ. ಅಲ್ಲದೆ, ಈ ವರ್ಷ ಅತಿವೃಷ್ಟಿ, ಮತ್ತು ಬೆಳೆ ನಷ್ಟದಿಂದಾಗಿ ಯುವಕರು ಜೀವನೋಪಾಯಕ್ಕಾಗಿ ನಗರಗಳತ್ತ ಮುಖ ಮಾಡುವಂತಾಗಿದೆ. ಅಲ್ಲದೆ, ಅತ್ಯಂತ ಕಡಿಮೆ ವೇತನ ಕೂಡ ವಲಸೆಗೆ ಮತ್ತೊಂದು ಕಾರಣವಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ …
Read More »
BigTv News
September 17, 2024
Breaking News
ಗಾಂಧಿನಗರ: ದೇಶದ ಕ್ಷಿಪ್ರ ಪ್ರಗತಿಗಾಗಿ ತಮ್ಮ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಪ್ರತಿಯೊಂದು ವಲಯ ಹಾಗೂ ಅಂಶಗಳಿಗೂ ಸ್ಪಂದಿಸಲು ಯತ್ನಿಸಿದ್ದೇವೆ. ನಮ್ಮ ಸರ್ಕಾರದ ಆದ್ಯತೆಗಳು, ವೇಗ ಹಾಗೂ ಪ್ರಮಾಣವನ್ನು ನೀವು ಗಮನಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ 1000 ವರ್ಷಗಳ ಅಭಿವೃದ್ಧಿಗಾಗಿ ಭಾರತ ಬುನಾದಿಯನ್ನು ಸೃಷ್ಟಿಸುತ್ತಿದೆ. ಮೊದಲ ಸ್ಥಾನಕ್ಕೇರುವುದಷ್ಟೇ ನಮ್ಮ ಆದ್ಯತೆಯಲ್ಲ, ಆ ಪಟ್ಟವನ್ನು ಉಳಿಸಿಕೊಳ್ಳುವುದು ಕೂಡ ಆಗಿದೆ. ಅಯೋಧ್ಯೆ ಹಾಗೂ …
Read More »
BigTv News
September 17, 2024
Breaking News, ಬೆಂಗಳೂರು
ಬೆಂಗಳೂರು: ನೈರುತ್ಯ ಮುಂಗಾರು ಮಳೆಯು ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದ್ದು, ಮುಂಗಾರು ಹಂಗಾಮಿನ ಹಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಅಲ್ಲದೆ, ಭಾಗಶಃ ಮೋಡ ಕವಿದ ವಾತಾವರಣ ಇರುವುದರಿಂದ ಕೀಟ ಬಾಧೆಯೂ ಅಧಿಕವಾಗಿದೆ. ಕಳೆದ ವರ್ಷ ಕೈಕೊಟ್ಟಿದ ಮುಂಗಾರು ಈ ಬಾರಿ …
Read More »
BigTv News
September 17, 2024
Breaking News
ಭುವನೇಶ್ವರ: ಮಹಿಳೆಯರಿಗೆ ಆರ್ಥಿಕ ನೆರವು ಒದಗಿಸುವ ಒಡಿಶಾ ಸರ್ಕಾರದ ಸುಭದ್ರಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. ಈ ಯೋಜನೆಯ ಸೌಲಭ್ಯ ಒಡಿಶಾದ ಸುಮಾರು 1 ಕೋಟಿಗೂ ಹೆಚ್ಚು ಮಹಿಳೆಯರಿಗೆ ದೊರಕಲಿದೆ. ಈ ಯೊಜನೆಯಡಿ 21-60 ವರ್ಷ ಮಹಿಳೆಯರು ಐದು ವರ್ಷಗಳಲ್ಲಿ ₹ 50 ಸಾವಿರ ಪಡೆಯಲಿದ್ದಾರೆ. ಅಂದರೆ ಪ್ರತಿ ವರ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಎರಡು ಕಂತುಗಳಲ್ಲಿ ₹10 ಸಾವಿರ ಜಮಾ ಆಗಲಿದೆ. ಇದೇ ವೇಳೆ …
Read More »
BigTv News
September 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ-ಅಂಕೋಲಾ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ನೇತೃತ್ವದ ನಿಯೋಗ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಬೆಳಗಾವಿಯಲ್ಲಿ ಮನವಿ ಸಲ್ಲಿಸಿತು. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 2000ನೇ ಇಸ್ವಿಯಲ್ಲಿ ಹುಬ್ಬಳ್ಳಿ-ಅಂಕೋಕಾ ರೈಲು ಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿತ್ತು. ಹುಬ್ಬಳ್ಳಿಯಿಂದ 47 ಕಿಮೀವರೆಗೆ ಭೂಮಿ ವಶಪಡಿಸಿಕೊಂಡು, …
Read More »
BigTv News
September 17, 2024
Breaking News, ಕಲಬುರಗಿ
ಕಲಬುರಗಿ: ಕಲಬುರಗಿಯನ್ನು 1685 ಕೋಟಿ ರೂ. ವೆಚ್ಚದ ಯೋಜನೆಯೊಂದಿಗೆ ರಾಜ್ಯ ಸರ್ಕಾರದ ವತಿಯಿಂದಲೇ ಸ್ಮಾರ್ಟ್ ಸಿಟಿಯನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿಯನ್ನು ಸ್ಮಾರ್ಟ್ಸಿಟಿ ಮಾಡುವುದಕ್ಕೆ ಚಿಂತನೆ ನಡೆಸಿದ್ದೇವೆ. ಕಲ್ಯಾಣ ಕರ್ನಾಟಕ ರಸ್ತೆ ಅಭಿವೃದ್ಧಿ ಪಡಿಸಲು ಯೋಜನೆ ಹಾಗೂ ಕಲ್ಯಾಣ ಪಥ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 1 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ …
Read More »
BigTv News
September 17, 2024
Breaking News, ಆಂಧ್ರ ಪ್ರದೇಶ
ಅಮರಾವತಿ: ಮುಂಬೈ ಮೂಲದ ಮಾಡೆಲ್ ಕಮ್ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್ ಗುನ್ನಿ (ಎಸ್‌ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ. ವೈಎಸ್ …
Read More »