Breaking News

Breaking News

ಮುನಿರತ್ನ ಬಂಧನ : ಲಾಡ್ ಪ್ರತಿಕ್ರಿಯೆ

ಧಾರವಾಡ: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಮುನಿರತ್ನ ಅವರ ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ. ಜನಪ್ರತಿನಿಧಿ ಆಗಿರಲಿ ಯಾರೇ ಆಗಲಿ ಆ ರೀತಿಯ ಪದ ಬಳಕೆ ಮಾಡಬಾರದು. ಅದು ಮುನಿರತ್ನ ಅವರ ಓರಿಜಿನಲ್‌ ಧ್ವನಿ ಇದೆಯಾ, ನಕಲಿ ಇದೆಯಾ ಎಂಬುದು ಮುಂದೆ …

Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ: ಗಂಭೀರ ಗಾಯ

ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಶಾರದಾ ಭವನ ಕಡೆಯಿಂದ ದೇಸಾಯಿ ಬ್ರಿಡ್ಜ್ ಕಡೆಗೆ ಹೊರಟಿದ್ದ ಕಾರು ಬಾಳಿಗಾ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. …

Read More »

ಸಾವಿನಲ್ಲಿ ಸಾರ್ಥಕತೆ ಮೆರೆದ ASI ನಾಭಿರಾಜ್

ಹುಬ್ಬಳ್ಳಿ: ಹಳೇ ಕೋರ್ಟ್ ಸರ್ಕಲ್ ಬಳಿ ಪ್ರೈಓವ‌ರ್ ಕಾಮಗಾರಿ ವೇಳೆಯಲ್ಲಿ ನಡೆದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ASI ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಅವರ ಕುಟುಂಬಸ್ಥರು ಸಾರ್ಥಕತೆಯನ್ನು ಮೆರೆದಿದ್ದು ನಾಭಿರಾಜ್ ಅವರ ಕಣ್ಣುಗಳನ್ನು ದಾನ ಮಾಡಿ ಮಾದರಿಯಾಗಿದ್ದಾರೆ. ASI ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದ ಹಾಗೆ ಕಿಮ್ಸ್ ಆಸ್ಪತ್ರೆಗೆ ಕಮಿಷನ‌ರ್ ಎನ್ ಶಶಿಕುಮಾರ್ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯವನ್ನು ತುಂಬಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ಆಗಿದ್ದ FIR …

Read More »

ಫೈ ಓವ‌ರ್ ಕಾಮಗಾರಿ ವೇಳೆ ಪ್ರಕರಣ: ವ್ಯಕ್ತಿ ಸಾವು

ಹುಬ್ಬಳ್ಳಿ: ಫೈ ಓವ‌ರ್ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 3:45ಕ್ಕೆ ಸಾವನ್ನಪ್ಪಿದ್ದಾರೆ. ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿ ನಡೆಯುತ್ತಿದ್ದ ಫೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ಅವರ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ …

Read More »

ಕೋತಿಗಳ ಕಾಟದಿಂದ ಬೇಸತ್ತ ರೈತರು: ಬೆಳೆನಷ್ಟ ಉಂಟಾಗುವ ಆಂತಕ

ಅಳವಂಡಿ: ಹೋಬಳಿ ವ್ಯಾಪ್ತಿಯಲ್ಲಿ ಈ ವರ್ಷ ಉತ್ತಮ ಮಳೆಯಿಂದ ಉತ್ತಮ ಫಸಲು ಕಂಡಿರುವ ರೈತರಿಗೆ ವಾನರ ಹಾವಳಿಯಿಂದ ಬೆಳೆ ನಷ್ಟ ಉಂಟಾಗುವ ಆಂತಕ ಎದುರಾಗಿದೆ. ಅಳವಂಡಿ ಹೋಬಳಿ ವ್ಯಾಪ್ತಿಯ ಜಮೀನುಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ, ಅಲಸಂದಿ ಹಾಗೂ ಶೇಂಗಾ ಸೇರಿದಂತೆ ಇತರೆ ಬೆಳೆಗಳಿಗೆ ಮಂಗಗಳ ಕಾಟ ಎದುರುರಾಗಿದ್ದು, ಮೆಕ್ಕೆಜೋಳ ತೆನೆಯನ್ನು ಮುರಿದು ತಿನ್ನುತ್ತಿವೆ. ಶೇಂಗಾ ಹಾಗೂ ಅಲಸಂದಿ ಬೆಳೆಯನ್ನು ಕಿತ್ತು ಹಾಕುತ್ತಿರುವುದರಿಂದ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳ ರೈತರಿಗೆ ಚಿಂತೆಗೀಡು …

Read More »

ವಿಧಾನಸೌಧದ ಆವರಣದಲ್ಲೇ ಭದ್ರತಾ ಲೋಪ ಘಟನೆ

ಬೆಂಗಳೂರು: ವಿಧಾನಸೌಧ ಮುಂದೆಯೇ ಭದ್ರತಾ ವೈಫಲ್ಯ ನಡೆದಿರುವ ಘಟನೆ ಇಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲೇ ಭದ್ರತಾ ಲೋಪ ಎದುರಾಗಿದ್ದು, ಏಕಾಏಕಿ ಯುವಕನೋರ್ವ ಸಿಎಂ ಬಳಿ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಚಿವ ಮಹದೇವಪ್ಪ ಮಾತನಾಡುತ್ತಿದ್ದ ವೇಳೆ ಯುವನೋರ್ವ ಏಕಾಏಕಿ ವೇದಿಕೆ ಮುಂಭಾಗದಿಂದ ಹಾರಿ ವೇದಿಕೆಗೆ ಬಂದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ಯುವಕನನ್ನು ವಶಕ್ಕೆ ಪಡೆದುಕೊಂಡು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ. ಇವತ್ತು ವಿಧಾನಸೌಧದ ಎದುರು ಅಂತಾರಾಷ್ಟ್ರೀಯ …

Read More »

ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಏರಿಕೆ

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆಗೆ 15,095 ಚೀಲ (3,773 ಕ್ವಿಂಟಲ್‌) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಏರಿಕೆಯಾಗಿದೆ. ಡಬ್ಬಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಇಳಿಕೆಯಾಗಿದ್ದು, ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ತುಸು ಏರಿಕೆ ಕಂಡಿದೆ. ಮಂಗಳವಾರ ಮತ್ತು ಶುಕ್ರವಾರ ವಹಿವಾಟು ಜೋರಾಗಿದ್ದು, ಕೋಲ್ಡ್ ಸ್ಟೋರೇಜ್‌ಗಳಲ್ಲಿ ಸಂಗ್ರಹವಿರುವ ಮೆಣಸಿನಕಾಯಿ ಮಾರಾಟ ಮಾತ್ರ ನಡೆಯುತ್ತಿದೆ. ಕಳೆದ ಮಂಗಳವಾರ 11,097 ಚೀಲ (2,774 ಕ್ವಿಂಟಲ್‌) ಆವಕವಾಗಿತ್ತು. ಶುಕ್ರವಾರ 521 ಲಾಟ್‌ ಮೆಣಸಿನಕಾಯಿ ಚೀಲಗಳನ್ನು …

Read More »

ಮನೆ ಮಾಲೀಕರನ್ನು ಕಟ್ಟಿಹಾಕಿ ದುಷ್ಕರ್ಮಿಗಳಿಂದ ಕಳ್ಳತನ

ರಾಯಚೂರು: ಇಲ್ಲಿನ ಲಕ್ಷ್ಮೀ ನರಸಿಂಹ ಬಡಾವಣೆಯಲ್ಲಿ ಭಾನುವಾರ ಬೆಳಗಿನ ಜಾವ ಮನೆ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು ಮನೆ ಮಾಲೀಕರನ್ನು ಕಟ್ಟಿಹಾಕಿ 22 ತೊಲೆ ಬಂಗಾರ, 2 ಕೆ.ಜಿ ಬೆಳ್ಳಿ ಹಾಗೂ ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಕಪ್ಪು ಬಣ್ಣದ ಬಟ್ಟೆ ಧರಿಸಿದ ದರೋಡೆಕೋರರ ಗ್ಯಾಂಗ್ ಮನೆಗೆ ನುಗ್ಗುವ ಮುಂಚೆ ಬಡಾವಣೆಯ ಅಕ್ಕಪಕ್ಕದ ಮನೆಗಳಿಗೆ ಹೊರಗೆ ಬೀಗ ಹಾಕಿದ್ದಾರೆ. ಸುತ್ತಮುತ್ತಲಿನ ಬೀದಿ ದೀಪಗಳನ್ನು ಆಫ್ ಮಾಡಿದ್ದಾರೆ ನಂತರ …

Read More »

ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸಲು ಉದ್ಯಮಿಗಳ ಜತೆ ಚರ್ಚೆ: ಕೇಂದ್ರ ಸಚಿವ ಎಚ್ ಡಿ ಕೆ

ಬೆಂಗಳೂರು: ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಮಡಕಶಿರಾ ಭಾಗದಲ್ಲಿ ಬೃಹತ್ ಕೈಗಾರಿಕಗಳನ್ನು ಸ್ಥಾಪಿಸುವ ಕುರಿತು ಉದ್ದಿಮೆದಾರರ ಜತೆ ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಡಕಶಿರಾ ಶಾಸಕ ಎಂಎಸ್ ರಾಜು ಅವರ ಜತೆ ಮಾತನಾಡಿದ ಕೇಂದ್ರ ಸಚಿವರು ಭರವಸೆ ನೀಡಿದರು. ಮಡಕಶಿರಾದಲ್ಲಿ ಕೈಗಾರಿಕೆಗಳು ಸ್ಥಾಪನೆಯಾದರೆ ಪಾವಗಡ, ಶಿರಾ, ಮಧುಗಿರಿ, ಶಿರಾ, ಹಿರಿಯೂರು ಭಾಗದ ಜನರಿಗೆ ಕೂಡ ಅನುಕೂಲ ಆಗುತ್ತದೆ. ಎಲ್ಲರಿಗೂ ಉದ್ಯೋಗ ಸಿಗುತ್ತದೆ, …

Read More »

ಶಿಗ್ಗಾವಿ ಉಪ ಚುನಾವಣೆ: ಕದನ ಪಟ್ಟಿಯಲ್ಲಿ ಭರತ್ ಬೊಮ್ಮಾಯಿ ಹೆಸರು

ಶಿಗ್ಗಾವಿ: ಮಾಜಿ ಸಿಎಂ ಬೊಮ್ಮಾಯಿ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿಯಲ್ಲಿ 57 ಮಂದಿ ಸ್ಪರ್ಧೆಗೆ ಉತ್ಸುಕತೆ ತೋರಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ರಾಧಾಮೋಹನ ಅಗರವಾಲ್ ನೇತೃ ತ್ವದಲ್ಲಿ ನಡೆದ ಸಭೆಯಲ್ಲಿ ಈ ಪಟ್ಟಿ ವರಿಷ್ಠರಿಗೆ ಸಲ್ಲಿಕೆಯಾಗಿದ್ದು,ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಹೆಸರೂ ಕಾಣಿಸಿಕೊಂಡಿರುವುದು ಪಕ್ಷದ ವಲಯದಲ್ಲಿ ಸಂಚಲನ ಮೂಡಿಸಿದೆ. ಉಪಚುನಾವಣೆಯಲ್ಲಿ ಭರತ್ …

Read More »