Breaking News

Breaking News

ಪಿಎಂಎವೈ-ಜಿ ಅಡಿಯಲ್ಲಿ 32 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 32,000 ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚುವಲ್ ಮೂಲಕ ಮಂಜೂರಾತಿ ಪತ್ರಗಳನ್ನು ವಿತರಿಸಿದರು ಮತ್ತು ಮನೆಗಳ ನಿರ್ಮಾಣಕ್ಕಾಗಿ ಮೊದಲ ಕಂತಿನ 32 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದರು. ಅವರು ದೇಶಾದ್ಯಂತ ಪಿಎಂಎವೈಜಿಯ 46,000 ಫಲಾನುಭವಿಗಳಿಗೆ ಕೀಲಿಗಳನ್ನು ವರ್ಚುವಲ್ ಆಗಿ ಹಸ್ತಾಂತರಿಸಿದರು. ಪಿಎಂಎವೈಜಿ ಯೋಜನೆಯಡಿ ಜಾರ್ಖಂಡ್ನಲ್ಲಿ ಬಡವರಿಗೆ 1,13,400 ಮನೆಗಳನ್ನು ಕೇಂದ್ರ ಅನುಮೋದಿಸಿದೆ.

Read More »

ರಾಜ್ಯಾದ್ಯಂತ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ: 2500 ಕಿ.ಮಿ. ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವದಾಖಲೆ

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ 2500 ಕಿಲೋಮೀಟರ್ ಮಾನವ ಸರಪಳಿ ನಿರ್ಮಿಸಲಾಗಿದ್ದು, ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಪಾತ್ರವಾಗಿದೆ. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನಿಡಿದ್ದು, ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆಗೆ ಪಾತ್ರವಾಗಿದೆ. ಇದೇ ವೇಳೆ …

Read More »

ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಕೇಂದ್ರ ಜಲಶಕ್ತಿ ತಂಡ

ವಿಜಯಪುರ: ಕೇಂದ್ರ ಜಲ ಶಕ್ತಿ ತಂಡದ ನೋಡಲ್ ಅಧಿಕಾರಿ ವಿಕಾಸ್ ಡೋಗ್ರಾ ಹಾಗೂ ಅನಾಮಿಕ ಐಚ್ ತಾಂತ್ರಿಕ ಅಧಿಕಾರಿಗಳು ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ವಿಜಯಪುರ ತಾಲ್ಲೂಕಿನ ಭೂತನಾಳ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ, ತಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರು ಪೂರೈಕೆಯ ನಳಗಳ ಪರಿಶೀಲನೆ, ಡೋಮನಾಳ ಗ್ರಾಮದ ಗುಡ್ಡದ ಅರಣ್ಯ …

Read More »

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ಬಾಗಲಕೋಟೆ: ದೇವಸ್ಥಾನ ಪ್ರವೇಶಿದ್ದಕ್ಕೆ ದಲಿತ ಯುವಕನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿದೆ. ದ್ಯಾಮವ್ವನ ಗುಡಿ ಪ್ರವೇಶಿದ್ದಕ್ಕೆ ಸವರ್ಣೀಯರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕ ಅರ್ಜುನ್‌ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ ದೇವಸ್ಥಾನದ ಮುಂದಿನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂಬ ಮಾಹಿತಿ …

Read More »

ಪ್ರಧಾನಿ ಮೋದಿಯವರಿಂದ ಆರು ವಂದೇ ಭಾರತ್‌ ರೈಲುಗಳಿಗೆ ಚಾಲನೆ

ನವದೆಹಲಿ: ದೇಶಾದ್ಯಂತ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು ಇಂದು ಏಕಕಾಲಕ್ಕೆ ಆರು ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲುಗಳಿಗೆ ನೀಡಿದರು. ಈ ರೈಲುಗಳು ಟಾಟಾನಗರ-ಪಾಟ್ನಾ, ಭಾಗಲ್ಪುರ್‌-ದುಮ್ಕಾ-ಹೌರಾ, ಬ್ರಹಪುರ-ಟಾಟಾನಗರ, ಗಯಾ-ಹೌರಾ, ದಿಯೋಘರ್‌-ವಾರಾಣಸಿ ಮತ್ತು ರೂರ್ಕೆಲಾ-ಹೌರಾ ಮಾರ್ಗದಲ್ಲಿ ಸಂಚರಿಸಲಿವೆ. ಹೊಸ ಮಾರ್ಗದಲ್ಲಿ ಪರಿಚಯಿಸಲಾಗಿರುವ ವಂದೇ ಭಾರತ್‌ ಎಕ್ಸ್ಪ್ರೆಸ್‌‍ ರೈಲುಗಳು ಸಾಮಾನ್ಯ ಪ್ರಯಾಣಿಕರು, ವೃತ್ತಿಪರರು, ವ್ಯಾಪಾರ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲ ಒದಗಿಸಲಿವೆ. ಈ ರೈಲುಗಳು ದಿಯೋಘರ್‌ (ಜಾರ್ಖಂಡ್‌ನ …

Read More »

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೆಳಗಾವಿಯಲ್ಲಿ 145 ಕಿ. ಮೀ. ಮಾನವ ಸರಪಳಿ

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗಿತ್ತು. ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ‌.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗಿತ್ತು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

Read More »

ರಾಜ್ಯದಲ್ಲಿ ಮುಂದಿನ ನಾಲ್ಕು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಎಲ್ಲಾ ಭಾಗಗಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಮಲೆನಾಡು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಐಎಂಡಿ ಮೂಲಗಳ ಪ್ರಕಾರ ಜೂನ್ 1ರಿಂದ ಆಗಸ್ಟ್ 16, 2024 ರವರೆಗೆ ರಾಜ್ಯದಲ್ಲಿ ಸಾಮಾನ್ಯ 580.2 ಎಂಎಂಗೆ …

Read More »

ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ: ಉಗ್ರ ಸಂಘಟನೆಯ ಕಮಾಂಡರ್ ಬಲೆಗೆ

ಜಮ್ಮು ಮತ್ತು ಕಾಶ್ಮೀರ: ಪೂಂಚ್ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಗ್ರಾಮದಲ್ಲಿ ಸಿಕ್ಕಿಬಿದ್ದ ಮೂವರು ಭಯೋತ್ಪಾದಕರಲ್ಲಿ ಉನ್ನತ ಭಯೋತ್ಪಾದಕ ಗುಂಪಿನ ಕಮಾಂಡರ್ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗಿದೆ. ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಪರಿಚಿತ ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ …

Read More »

ಕೇಂದ್ರ ಸರ್ಕಾರದಿಂದ 3 ಲಕ್ಷ ಕೋಟಿ ರೂ. ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಮೂರನೇ ಅವಧಿಯ ಮೊದಲ 100 ದಿನಗಳನ್ನ ಪೂರೈಸಿದೆ. ಈ 100 ದಿನಗಳಲ್ಲಿ, ಮೋದಿ ಸರ್ಕಾರವು ಮೂಲಸೌಕರ್ಯಗಳ ಮೇಲೆ ತನ್ನ ಗಮನವನ್ನ ಉಳಿಸಿಕೊಂಡಿದೆ. ಈ ಅವಧಿಯಲ್ಲಿ ಮೋದಿ ಸರಕಾರವು 3 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಸಂಬಂಧಿತ ಯೋಜನೆಗಳಿಗೆ ಅನುಮೋದನೆ ನೀಡಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ 3 ಲಕ್ಷ ರೂಪಾಯಿ ಕೋಟಿ ಮೌಲ್ಯದ …

Read More »

ನೆಲಮಂಗಲ ಬಳಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಎನ್ನುವ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಡಾಬಸ್‌ಪೇಟೆ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ, ವಸಂತನರಸಾಪುರ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಹೆಸರು ಕೇಳಿಬಂದಿತ್ತು. ಇದೀಗ ನೆಲಮಂಗಲದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬಹುತೇಕ ಖಚಿತವಾಗಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ 11ನೇ ಸುತ್ತಿನ ಸಭೆ ನಡೆದಿದೆ. ಐಡೆಕ್‌ ಸಂಸ್ಥೆ …

Read More »