Breaking News

Breaking News

ಮುಂಬೈ ದೆಹಲಿಯಲ್ಲಿ ಈರುಳ್ಳಿ ದರದಲ್ಲಿ ಇಳಿಕೆ

ನವದೆಹಲಿ: ರಿಯಾಯಿತಿ ದರದಡಿ ಈರುಳ್ಳಿ ಮಾರಾಟಕ್ಕೆ ಚಾಲನೆ ನೀಡಿರುವುದರಿಂದ ದೇಶದ ಪ್ರಮುಖ ನಗರಗಳ ವ್ಯಾಪ್ತಿಯ ಚಿಲ್ಲರೆ ಮಾರುಕಟ್ಟೆಯಲ್ಲಿ ಧಾರಣೆ ಇಳಿಕೆಯಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್‌ 5ರಂದು ದೆಹಲಿ ಮತ್ತು ಮುಂಬೈನಲ್ಲಿ ಪ್ರತಿ ಕೆ.ಜಿಗೆ ₹35 ದರದಲ್ಲಿ ಸಂಚಾರ ವಾಹನಗಳು, ಎನ್‌ಸಿಸಿಎಫ್‌ ಮತ್ತು ನಾಫೆಡ್‌ ಮೂಲಕ ಮಾರಾಟಕ್ಕೆ ಚಾಲನೆ ನೀಡಿತ್ತು. ಎರಡನೇ ಹಂತದಲ್ಲಿ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಆರಂಭಿಸುವುದಾಗಿ …

Read More »

ಗಣೇಶ ವಿಸರ್ಜನೆ :ಎನ್ ಶಶಿಕುಮಾರ್ ಭೇಟಿ

ಹುಬ್ಬಳ್ಳಿ: ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ IPS ರವರು ಗಣೇಶ ವಿಸರ್ಜನೆ ಕಾಲಕ್ಕೆ ಖುದ್ದು ಭೇಟಿ ನೀಡಿ, ಪೊಲೀಸ್ ಇಲಾಖೆಯಿಂದ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು. ಇದೇ ಸಮಯದಲ್ಲಿ ಸಾರ್ವಜನಿಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಸಂವಹನ ನಡೆಸಿದರು. ಗಣೇಶ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Read More »

ಪ್ರಧಾನಿ ಮೋದಿಯವರಿಂದ ಜಮ್ಮುಕಾಶ್ಮೀರ ಹಾಗೂ ಹರಿಯಾಣದಲ್ಲಿ ಚುನಾವಣಾ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೊದಲು ದೋಡಾಗೆ ತೆರಳುವ ಅವರು ನಂತರ ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಸಾಮಾಜಿಕ ಜಾಲ ತಾಣ ಎಕ್ಸನಲ್ಲಿ ವಿವರಗಳನ್ನು ಹಂಚಿಕೊಂಡಿದೆ. ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇದಾದ ಬಳಿಕ ಹರಿಯಾಣದ ಕುರುಕ್ಷೇತ್ರದಲ್ಲಿ ರ್ರ್ಯಾಲಿಯಲ್ಲಿ …

Read More »

ಕೇಂದ್ರ ಸರ್ಕಾರದ ಎನ್ ಪಿ ಎಸ್ ವಾತ್ಸಲ್ಯ ಯೋಜನೆಗೆ ನಿರ್ಮಲಾ ಸೀತಾರಾಮನ್ ರವರಿಂದ ಚಾಲನೆ

ನವದೆಹಲಿ: ಕೇಂದ್ರ ಸರ್ಕಾರದ ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಈ ತಿಂಗಳ 18 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಜೆ.ಸಿ. ರಸ್ತೆಯ ಕೆನರಾ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗುವ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

Read More »

ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸಿದ್ಧತೆ: ಜಗದೀಶ ಶೆಟ್ಟರ್‌

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯ ಸಿದ್ಧಪಡಿಸಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ಕುರಿತಾಗಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಭಾರತೀಯ ವಾಯುಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಕಾಮಗಾರಿ …

Read More »

ಲಕ್ಕಿ ಡ್ರಾ ಸ್ಟೀಮ್ ಕಾರ್ಯಕ್ರಮಕ್ಕೆ ಚಾಲನೆ

ಹುಬ್ಬಳ್ಳಿ : ಖಾಸಗಿ ಹೋಟೆಲ್ ನಲ್ಲಿ ಜೆ. ಕೆ ಸಿಮೆಂಟ್ ಎಲ್. ಟಿಡಿ ವತಿಯಿಂದ ಹಮ್ಮಿಕೊಂಡಿದ್ದ 2nd ಲಕ್ಕಿ ಡ್ರಾ ಸ್ಕಿಮ್ ಕಾರ್ಯಕ್ರಮಕ್ಕೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಚಾಲನೆ ನೀಡಿದರು. ನಂತರ ಲಕ್ಕಿ ಡ್ರಾ ಪಡೆದವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಮೇಶ್ ಪಾಟೀಲ, ಮಹೇಶ್ ಮದನಬಾವಿ, ಪವನ್, ಜಿ. ದೀಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More »

ಧಾರ್ಮಿಕ ದತ್ತಿ ಇಲಾಖೆಯಿಂದ ದ್ವಾರಕಾ ಯಾತ್ರೆಗೆ 15 ಸಾವಿರ ರೂ. ಸಹಾಯಧನ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ ಎಂದು ದತ್ತಿ ಇಲಾಖೆ ತಿಳಿಸಿದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. …

Read More »

ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ನಾರಾಯಣ ಕಿರೆಸೂರ

ಹುಬ್ಬಳ್ಳಿ: ಅವಳಿ ನಗರದಲ್ಲಿರುವ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಕಾರ್ಯಕರ್ತರು ಅನ್ನೋನ್ಯತೆಯಿಂದ ಇದ್ದೇವೆ. ಪ್ರಹ್ಲಾದ್ ಜೋಶಿ ಹಾಗೂ ಮಹೇಶ್ ಟೆಂಗಿನಕಾಯಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ನಾರಾಯಣ ಕಿರೆಸೂರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅವಳಿ ನಗರದ ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ. ಜಗದೀಶ್ ಶೆಟ್ಟ‌ರ್ ಕಾಂಗ್ರೆಸ್‌ ತೊರೆದು ಮರಳಿ ಬಿಜೆಪಿಗೆ ಬಂದಿದ್ದು ಆನೆ ಬಲವನ್ನು ತಂದಿದೆ. ಎಲ್ಲರೂ ಅದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.ಶಾಸಕ ಮಹೇಶ …

Read More »

ಲಂಬ ಉಡ್ಡಯನದ ಕ್ಷಿಪಣಿ ಪರೀಕ್ಷೆ ಯಶಸ್ವಿ

ಒಡಿಶಾ: ಲಂಬ ಉಡ್ಡಯನದ ಕಡಿಮೆ ವ್ಯಾಪ್ತಿಯ, ನೆಲದಿಂದ ಆಗಸದ ಗುರಿಗೆ ದಾಳಿ ನಡೆಸುವ(ವಿಎಲ್‌-ಎಸ್‌ಆರ್‌ಎಸ್‌ಎಎಂ) ಕ್ಷಿಪಣಿಯ ಪರೀಕ್ಷೆಯು ಒಡಿಶಾ ಕರಾವಳಿಯ ಚಂಡೀಪುರದಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದಿದೆ. ಎರಡೂ ಪರೀಕ್ಷೆಗಳು ಯಶಸ್ಸು ಕಂಡಿವೆ ಎಂಬುದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಪ್ರಕಟಣೆಯು ತಿಳಿಸಿದೆ. ಎರಡೂ ಪರೀಕ್ಷೆಗಳಲ್ಲಿ ಈ ಕ್ಷಿಪಣಿಯು, ಸಮುದ್ರದ ಮಟ್ಟಕ್ಕೆ ಬಹಳ ಸನಿಹದಲ್ಲಿ ತೀವ್ರ ವೇಗದಿಂದ ಸಾಗುತ್ತಿದ್ದ ಗುರಿಯೊಂದನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದೆ ಎಂದು ತಿಳಿಸಲಾಗಿದೆ. ನಿಖರವಾಗಿ ದಾಳಿ …

Read More »

ಪಠ್ಯಕ್ರಮಗಳಲ್ಲಿ ಹಿಂದಿ ಭಾಷೆ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಪ್ರತಿಭಟನೆ

ಧಾರವಾಡ: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರ್ನಾಟಕದದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಶಾಲಾ ಪಠ್ಯಕ್ರಮಗಳಲ್ಲಿ ಹಿಂದಿ ಭಾಷೆ ಹೇರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂವಿಧಾನದ 343 ರಿಂದ 351ನೇ ವಿಧಿ ರದ್ದುಪಡಿಸಿ ಎಲ್ಲ ಭಾಷೆಗಳಿಗೆ ಒಕ್ಕೂಟದ ದೃಷ್ಟಿಯಿಂದ ಸಮಾನ ಎಂದು ಸಾರಬೇಕು. ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು, ಪತ್ರ ವ್ಯವಹಾರ …

Read More »