Breaking News

Breaking News

ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಬರುವ ಸೆಪ್ಟೆಂಬರ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರಕಾರಿ ನೌಕರ ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. ಅವರು, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ, ಸೆಪ್ಟೆಂಬರ 15 ರ ಅಂತರಾಷ್ಟ್ರೀಯ …

Read More »

51 ಕಿಲೋಮೀಟರ್ ಮಾನವ ಸರಪಳಿ, 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಜಿಲ್ಲೆಯಲ್ಲಿ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 51 ಕಿಲೋಮೀಟರ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಸುಮಾರು 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ …

Read More »

ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ

ಕಲಬುರಗಿ: ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು. ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಆಶಾ ಕಾರ್ಯಕರ್ತೆಯರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸ್ಟೇಶನ್ ರಸ್ತೆ, ಎಸ್.ಎಂ. ಪಂಡಿತ್ …

Read More »

ಜಮ್ಮುಮತ್ತುಕಾಶ್ಮೀರ: ದೋಡಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶನಿವಾರ ಬಿಗಿ ಭದ್ರತೆ ನಡುವೆ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಕಳೆದ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿದ್ದಾರೆ.ದೋಡಾದ ಸ್ಟೇಡಿಯಂನಲ್ಲಿ ನಡೆಯಲಿರುವ ಚುನಾವಣಾ ರ‍್ಯಾಲಿಯನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ದೋಡಾ ಮತ್ತು ಕಿಶ್ತ್ವಾರ್ ಜಿಲ್ಲೆಗಳಾದ್ಯಂತ ಬಿಗಿಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ ಮೋದಿ …

Read More »

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ

ಹೊಸಪೇಟೆ: ಸೆ.17ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಇ.ಬಾಲಕೃಷ್ಣಪ್ಪ ಅವರು ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಗೂಗಲ್ ಮೀಟ್ ಮೂಲಕ ಅಧಿಕಾರಿಗಳೊಂದಿಗೆ ಸಭೆಯ ಸಭೆ ನಡೆಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಉತ್ಸವವು ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯ ಪಾಲ್ಗೊಳ್ಳಬೇಕು. …

Read More »

ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ಸಚಿವರೊಂದಿಗೆ ಚರ್ಚೆ

ರಾಯಚೂರು: ವಿಮಾನ ನಿಲ್ದಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಕೇಂದ್ರ ವಿಮಾನಯಾನ ಸಚಿವರೊಂದಿಗೆ ರಾಯಚೂರು ಲೋಕಸಭಾ ಸದಸ್ಯರಾದ ಜಿ ಕುಮಾರ್ ನಾಯಕ್ ಹಾಗೂ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಸುಧೀರ್ಘವಾಗಿ ಚರ್ಚಿಸಿದರು. ನವದೆಹಲಿಯಲ್ಲಿ ವಿಮಾನಯಾನ ಸಚಿವರನ್ನು ಭೇಟಿಯಾಗಿ ರಾಯಚೂರು ವಿಮಾನ ನಿಲ್ದಾಣದ ಕುರಿತು ಮಾತನಾಡಿ,ರಾಯಚೂರಿನಲ್ಲಿ ವಿಮಾನ ನಿಲ್ದಾಣ ತ್ವರಿತಗತಿಯಲ್ಲಿ ಕಾಮಗಾರಿ ಪ್ರಾರಂಬಿಸುವ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ನೀಡಲು ಅಗತ್ಯ …

Read More »

ಲಘು ಯುದ್ಧ ಟ್ಯಾಂಕರ್ ಜೋರಾವರ್ ಯಶಸ್ವಿ ಪ್ರಯೋಗ

ನವದೆಹಲಿ: ಹೆಲಿಕಾಫ್ಟರ್ ನಲ್ಲಿ ಹೊತ್ತೊಯ್ಯಬಹುದಾದ ವೈವಿದ್ಯಮಯ ಲಘು ಯುದ್ಧ ಟ್ಯಾಂಕರ್ ಜೋರಾವರ್ ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದ್ದು, ಶೀಘ್ರದಲ್ಲೇ ಗಡಿ ಪ್ರದೇಶಗಳಲ್ಲಿ ನಿಯೋಜನೆಗೊಳ್ಳಲಿದ್ದು, ಭಾರತದ ಬಲ ಹೆಚ್ಚಿಸಲಿದೆ. ಭಾರತೀಯ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ಮರುಭೂಮಿಯಲ್ಲಿ ಜೋರಾವರ್ ಹಗುರ ಯುದ್ಧ ಟ್ಯಾಂಕರ್ ಗಳನ್ನು ಪ್ರಯೋಗಕ್ಕೆ ಒಳಪಡಿಸಲಾಗಿದ್ದು, ಹಲವು ಉದ್ದೇಶಿತ ಗುರಿಗಳನ್ನು ಯಶಸ್ವಿಯಾಗಿ ತಲುಪಿದ್ದೂ ಅಲ್ಲದೇ ನಿರೀಕ್ಷೆಗೂ ಮೀರಿದ ಕಾರ್ಯಕ್ಷಮತೆ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಕಡಿದಾದ ಪ್ರದೇಶಗಳಲ್ಲಿ, ಪರ್ವತಗಳ ನಡುವೆ ನಿರಾಯಸವಾಗಿ …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ಕೇಂದ್ರ ಸಚಿವ ವಿ.ಸೋಮಣ್ಣಗೆ ರೈತರ ಹಕ್ಕು ಒತ್ತಾಯ ಪತ್ರ ಸಲ್ಲಿಕೆ

ಮೈಸೂರು: ಅಕ್ರಮ ಸಕ್ರಮ ಯೋಜನೆ ಮರು ಜಾರಿ ಆಗಬೇಕು, ಕೇಂದ್ರ ಸರ್ಕಾರ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ರೈತರು ಹಕ್ಕು ಒತ್ತಾಯ ಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ …

Read More »

ಕಲಬುರಗಿಯಲ್ಲಿ ಹಾಡಹಗಲೇ ಗ್ರಾ.ಪಂ. ಮಾಜಿ ಅಧ್ಯಕ್ಷನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಲಬುರಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾದಂತಹ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ವಿಶ್ವನಾಥ ಜಮಾದಾರ್ (50) ಎಂಬುವರನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಬಾರಿ ಗುಂಡಿನ ದಾಳಿಯಿಂದಾಗಿ ವಿಶ್ವನಾಥ ಅವರು ಸ್ಥಳದಲ್ಲೇ …

Read More »

ನೀರು ಸರಬರಾಜು ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ವಿಶ್ವಬ್ಯಾಂಕ್ ಪ್ರತಿನಿಧಿಗಳು

ಬೆಳಗಾವಿ: ನಗರ ಮಹಾನಗರ ಪಾಲಿಕೆ ಮತ್ತು ಕೆಯುಐಡಿಎಫ್‌ಸಿ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿಯನ್ನು ವಿಶ್ವಬ್ಯಾಂಕ್ ತಂಡದ ಹಿರಿಯ ಸಾಮಾಜಿಕ ಅಭಿವೃದ್ಧಿ ಪರಿಣಿತರಾದ ಆರ್. ಆರ್. ಮೋಹನ್‌ರವರು ಬೆಳಗಾವಿ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶಿಲಿಸಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆದರು. ಮುತ್ಯಾನಟ್ಟಿಯಲ್ಲಿ ಪಾಲಿಕೆಯಿಂದ ನೀರು ಸರಬರಾಜು ವ್ಯತ್ಯಯವಾಗಿದ್ದರಿಂದ ಅದರ ಬದಲಾಗಿ ಇಂಡಾಲ್ ಕಂಪನಿಯು ತನ್ನ ಸಾಮಾಜಿಕ ಜವಾಬ್ದಾರಿಯಿಂದ ಸರಬರಾಜು ಮಾಡುತ್ತಿದೆ. ಹೊಸ …

Read More »