Breaking News

Breaking News

ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಏಕೆ: ಸುರಭಿ ಹುದಿಗೇರಿ

ಹುಬ್ಬಳ್ಳಿ: ವಾಲ್ಮೀಕಿ ಹಗರಣದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿದೆ. ಅದರಲ್ಲಿ ಆತಂಕಕಾರಿ ವಿಷಯವನ್ನು ಹೊರಹಾಕಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ವಹಿಸಿರುವುದು ಏಕೆ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹುದಿಗೇರಿ ಪ್ರಶ್ನಿಸಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್‌.ಟಿ ಸಮುದಾಯಕ್ಕೆ ಸೇರಬೇಕಾದ ಹಣ ಚುನಾವಣೆಯಲ್ಲಿ ಬಳಕೆಯಾಗಿರುವ ಆತಂಕಕಾರಿ ಅಂಶ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೌನ ವಹಿಸದೇ ರಾಜ್ಯದ ಜನತೆಗೆ …

Read More »

ಫೈ ಓವ‌ರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಸಾಕಷ್ಟು ನೋವನ್ನುಂಟು ಮಾಡಿದೆ : ಜೋಶಿ

ಹುಬ್ಬಳ್ಳಿ: ಫೈ ಓವ‌ರ್ ಕಾಮಗಾರಿ ವೇಳೆ ನಡೆದಿರುವ ಅವಘಡ ಸಾಕಷ್ಟು ನೋವನ್ನುಂಟು ಮಾಡಿದೆ. ಕಾಮಗಾರಿ ವೇಳೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ವಿಶೇಷ ಗಮನ ಹರಿಸುವ ಮೂಲಕ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಫೈ ಓವ‌ರ್ ಕಾಮಗಾರಿ ಅವಘಡದಲ್ಲಿ ಎಎಸ್‌ಐ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಲ್ಲಿನ ಜನರ ಆಶೀರ್ವಾದದಿಂದ ಕೇಂದ್ರ ಸಚಿವನಾಗಿದ್ದು, …

Read More »

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಗಲಾಟೆ ವಿಷಯಕ್ಕೆ ಮುತಾಲಿಕ್ ಪ್ರತಿಕ್ರಿಯೆ

ಧಾರವಾಡ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಷಯಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ನಾಗಮಂಗಲದಲ್ಲಿ ನಡೆದ ಘಟನೆ ಅತ್ಯಂತ ಅಪರಾಧವಾದದ್ದು. ರಾತ್ರಿ ಮಸೀದಿ ಎದುರು ಗಣೇಶ ಬಂದಾಗ ಕಲ್ಲು ತೂರಾಟ ಹಾಗೂ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಿಂದ ಗಣಪತಿಗೆ ಧಕ್ಕೆಯಾಗಿದೆ. ಮುಸ್ಲಿಂ ಸಮಾಜ ಇದನ್ನು ವಿಚಾರ ಮಾಡಬೇಕು. ಮುಸ್ಲಿಂರು ಅಲ್ಲಾಹುನ್ನು ಪೂಜೆ ಮಾಡುತ್ತಾರೆ. ನಾವು ಯಾವತ್ತೂ …

Read More »

402 ಪಿಎಸ್ಐ ಪರೀಕ್ಷೆ ಮುಂದೂಡಿಕೆ: ಡಾ.ಜಿ.ಪರಮೇಶ್ವರ್

ಚಿಕ್ಕಮಗಳೂರು: ಅಭ್ಯರ್ಥಿಗಳ, ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದ ಕರ್ನಾಟಕ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ದಿನಾಂಕವನ್ನು ನಿಗದಿ ಮಾಡಿತ್ತು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ …

Read More »

ಈರುಳ್ಳಿ ಬೆಳೆ ಕಟಾವು: ಉತ್ತಮ ಲಾಭದ ನಿರೀಕ್ಷೆಯಲ್ಲಿ ರೈತರು

ಹೂವಿನಹಡಗಲಿ: ತಾಲ್ಲೂಕಿನಲ್ಲಿ ಮುಂಗಾರು ಋತುವಿನ ಈರುಳ್ಳಿ ಕಟಾವು ಪ್ರಾರಂಭವಾಗಿದ್ದು, ಮಾರುಕಟ್ಟೆಯಲ್ಲಿ ಎ ಗ್ರೇಡ್ ಈರುಳ್ಳಿಗೆ ಉತ್ತಮ ಬೆಲೆಯಿದ್ದು, ಬೆಳೆಗಾರರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ತಾಲ್ಲೂಕಿನಲ್ಲಿ 1,250 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ, ಇಲ್ಲಿನ ರೈತರು ಬೆಂಗಳೂರು ಮಾರುಕಟ್ಟೆಯನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಇಟ್ಟಿಗಿ ಹೋಬಳಿಯ ಇಟ್ಟಿಗಿ, ಉತ್ತಂಗಿ, ತಳಕಲ್ಲು, ಕೆಂಚಮ್ಮನಹಳ್ಳಿ, ಮಹಾಜನದಹಳ್ಳಿ, ಸೋಗಿ ಗ್ರಾಮ, ಹಡಗಲಿ, ಹಿರೇಹಡಗಲಿ ಹೋಬಳಿಯ ಕೆಲವು ಗ್ರಾಮಗಳಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ, ಐದಾರು ವರ್ಷದಿಂದ …

Read More »

ಸೂಪರ್ ಮಾರುಕಟ್ಟೆಗೆ ಭೇಟಿ ನೀಡಿದ ಸಂತೋಷ ಲಾಡ್

ಧಾರವಾಡ: ಧಾರವಾಡದ ಸೂಪರ್ ಮಾರುಕಟ್ಟೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಮಾರುಕಟ್ಟೆಯಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಇದೇ ವೇಳೆ ಅಲ್ಲಿನ ವ್ಯಾಪಾರಿಗಳಿಂದ ಸಚಿವರು ಅಹವಾಲುಗಳನ್ನು ಸ್ವೀಕರಿಸಿದರು. ಮಾರುಕಟ್ಟೆಯನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಶೆಡ್‌ನ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ವ್ಯಾಪಾರಿಗಳಿಗೆ ಭರವಸೆ ನೀಡಿದರು. ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುವುದು. ಶೌಚಾಲಯವನ್ನೂ ಡಿಸೆಂಬರ್ ಒಳಗೆ ವ್ಯಾಪಾರಿಗಳಿಗೆ ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. …

Read More »

ಯುವನಿಧಿ ಯೋಜನೆಯಲ್ಲಿ ಬೀದರ್ ಕಳಪೆ ಸಾಧನೆ

ಬೀದರ್‌: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯಲ್ಲಿ ಬೀದರ್‌ ಜಿಲ್ಲೆಯ ಸಾಧನೆ ಬಹಳ ಕಳಪೆಯಾಗಿದೆ, ಯುವನಿಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡುತ್ತಿರುವ ಕೆಲಸ ತೃಪ್ತಿ ತಂದಿಲ್ಲ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ‌ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ್‌ …

Read More »

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ನಿಧನ

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಹಾಗೂ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಚನ್ನಬಸಪ್ಪ ಮಸೂತಿ (67) ಅವರು ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವಿದೆ. ಚನ್ನಬಸಪ್ಪ ಮಸೂತಿ ಅವರು ಸಾವಯವ ಕೃಷಿಯಲ್ಲಿ ಹೆಸರು ಮಾಡಿದವರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ್ದರು.

Read More »

11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಣೆ: ಈಶ್ವರ ಖಂಡ್ರೆ

ಬೆಂಗಳೂರು: ಕಳೆದ 18 ತಿಂಗಳಲ್ಲಿ ಅರಣ್ಯ ಇಲಾಖೆ ಸುಮಾರು 11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜತೆಗೆ ಬೆಂಗಳೂರು, ಕೋಲಾರ, ಬೀದರ್‌ ಸೇರಿ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರಳಿ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ …

Read More »

ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಗತ್ತಿನ ಪ್ರತಿಯೊಂದು ಉಪಕರಣದಲ್ಲೂ ಭಾರತ ನಿರ್ವಿುತ ಚಿಪ್ ಹೊಂದಿರಬೇಕು ಎನ್ನುವುದು ನಮ್ಮ ಕನಸಾಗಿದೆ. ಚಿಪ್ ಡಿಸೈನಿಂಗ್​ನಲ್ಲಿ ಶೇಕಡ 20ರಷ್ಟು ಪ್ರತಿಭೆಗಳ ಕೊಡುಗೆ ಭಾರತದಿಂದ ಆಗುತ್ತಿದೆ, ಮುಂಬರುವ ದಿನಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಗ್ರೇಟರ್ ನೋಯ್ಡಾದ ನಾಲೇಜ್ ಪಾರ್ಕ್​ನಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆಮಿಕಂಡಕ್ಟರ್ ತಯಾರಿಕೆಯಲ್ಲಿ 1.5 ಲಕ್ಷ ಕೋಟಿ ರೂ.ಗೂ ಅಧಿಕ ಹೂಡಿಕೆ …

Read More »