Breaking News

Breaking News

ಹುಬ್ಬಳ್ಳಿಯಲ್ಲಿರುವ ಸಾಂಸ್ಕೃತಿಕ ಭವನ ಮರು ಜೀವ

ಹುಬ್ಬಳ್ಳಿ : ನಗರದ ಕಾಟನ್ ಮಾರ್ಕೆಟ್ ನಲ್ಲಿರುವ ಸಾಂಸ್ಕೃತಿಕ ಭವನ ಯಾವುದೇ ರೀತಿಯ ವ್ಯವಸ್ಥೆ ಇಲ್ಲದೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿರುವ ಈ ಭವನ ಪಾಳು ಬಿದ್ದುತ್ತು. ಪಾಲಿಕೆ ಆಯುಕ್ತರು ಸಾಂಸ್ಕೃತಿಕ ಭವನವನ್ನು ನಿರ್ವಹಣೆ ಮಾಡಲು ಮುಂದಾಗಿದ್ದಾರೆ. ಭವನದ ವಾಸ್ತವ ಸತ್ಯವನ್ನು, ಕಲಾವಿದರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನೀರ್ಧಾರ ತೆಗೆದುಕೊಳ್ಳಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಈ ಸಾಂಸ್ಕೃತಿಕ ಭವನವನ್ನು ನಿರ್ಮಾಣ …

Read More »

ಜಮ್ಮುಮತ್ತುಕಾಶ್ಮೀರದಲ್ಲಿ ಗುಂಡಿನ ದಾಳಿ: ಮೂವರು ಜೈಷ್ ಉಗ್ರರ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಶುರುವಾಗಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಸೇನೆ ಬೀಸಿದ ಬಲೆಗೆ ಬಿದ್ದಿದ್ದು, ಯೋಧರು ನಾಲ್ಕು ದಿಕ್ಕಿನಿಂದಲೂ ಅವರನ್ನು ಆವರಿಸಿದ್ದರು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆರುದುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

Read More »

ದೇಶದಲ್ಲಿ ಈ ಬಾರಿ ಚಳಿಯ ತಾಪಮಾನ ಅಧಿಕ: ಹವಾಮಾನ ಇಲಾಖೆ

ನವದೆಹಲಿ: ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟುಮಾಡಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. …

Read More »

ಹದಗೆಟ್ಟ ಭೀಮಾನದಿ ಸೇತುವೆ: ಭಾರೀ ವಾಹನಗಳ ಸಂಚಾರ ನಿಷೇಧ

ವಡಗೇರಾ: ತಾಲ್ಲೂಕಿನ ಗುರುಸುಣಿಗಿ ಕ್ರಾಸ್‌ನಿಂದ ಯಾದಗಿರಿ ನಗರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಭೀಮಾ ನದಿಯ ಹಳೆಯ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಗುರುಸುಣಿಗಿ ಕ್ರಾಸ್‌ನಿಂದ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಹೊಸ ಬ್ರಿಜ್ ಕಂಬ್ಯಾರೇಜು ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ …

Read More »

ಹಳ್ಳದ ಸೇತುವೆಗಿಲ್ಲ ದುರಸ್ತಿ ಭಾಗ್ಯ: ಸ್ಥಳೀಯರ ಆಕ್ರೋಶ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿ-ನಾಗರಹಳ್ಳಿ‌ ಮಾರ್ಗ‌ದ ಸೇತುವೆಯೊಂದರಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಧಿಯಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬೆಣ್ಣೆಹಳ್ಳಿ-ನಾಗರಹಳ್ಳಿ‌ ಮಾರ್ಗದಲ್ಲಿರುವ ಹಳ್ಳವೊಂದಕ್ಕೆ ನಿರ್ಮಿಸಲಾಗಿರುವ ಸೇತುವೆಯಲ್ಲಿ ಕಳೆದ ವಾರವಷ್ಟೇ ಬೈಕ್ ಸವಾರನೊಬ್ಬನನ್ನು ಬಲಿ ಪಡೆದಿತ್ತು, ಇದೀಗ ಸೇತುವೆ ದಾಟುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದಿದೆ. ಮಹೇಶ್ ಹೂಳಕಣ್ಣವರ ಟ್ರ್ಯಾಕ್ಟರ್ ಚಾಲಕ, ನಾಗರಹಳ್ಳಿ ಗ್ರಾಮದಿಂದ ಬೆಣ್ಣೆಹಳ್ಳಿಯತ್ತ ತೆರಳುತ್ತಿದ್ದ ವೇಳೆ ಚಾಲಕನ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಬೆಲ್ದಾಳೆ

ಬೀದರ್: ಕಾರಂಜಾ ನೀರಾವರಿ ಯೋಜನೆ ಪುನರ್ವಸತಿ ಗ್ರಾಮಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ₹20 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. ಬೀದರ್ ತಾಲ್ಲೂಕಿನ ನೆಲವಾಡ ಗ್ರಾಮದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತಾವಕ್ಕೆ ಸರ್ಕಾರದಿಂದ ಆದಷ್ಟು ಬೇಗ ಮಂಜೂರಾತಿ ಪಡೆದು, ಕಾಮಗಾರಿ ಆರಂಭಿಸುವ ದಿಸೆಯಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಬೀದರ್ ದಕ್ಷಿಣ ಕ್ಷೇತ್ರದಲ್ಲಿ …

Read More »

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ: ಅರಣ್ಯ ರಕ್ಷಕರು ಜೀವ ಸಂಕುಲದ ಸಂರಕ್ಷಕರು

ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು, ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ‌ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ‌ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು. …

Read More »

ಕೈಗಾರಿಕಾ ಕ್ಷೇತ್ರಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಎಚ್ ಡಿ ಕೆ

ನವದೆಹಲಿ : ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ಹೊಸದಿಲ್ಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂ.ಬಿ.ಪಾಟೀಲ್, ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕುಮಾರಸ್ವಾಮಿ, …

Read More »

ಭಾರತೀಯ ಸೇನೆಗೆ ಯುದ್ಧ ಸಾಮಗ್ರಿ ಖರೀದಿ: ಕೇಂದ್ರ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ 1,44,716 ಕೋಟಿ ರೂ.ಗಳ 10 ಬಂಡವಾಳ ಸ್ವಾಧೀನ ಪ್ರಸ್ತಾಪಗಳಿಗೆ ಅಗತ್ಯವನ್ನು ಅಂಗೀಕರಿಸಿತು. ವಿಶೇಷವೆಂದರೆ, ಈ ವೆಚ್ಚದ 99% ಅನ್ನು ಖರೀದಿ ಮತ್ತು ಖರೀದಿ ವಿಭಾಗಗಳ ಅಡಿಯಲ್ಲಿ ಸ್ಥಳೀಯ ಮೂಲಗಳಿಗೆ ನಿರ್ದೇಶಿಸಲಾಗಿದೆ. ಈ ಮೂಲಕ ಭಾರತೀಯ ಸೇನೆಗೆ ಭೀಮ ಬಲ ಬಂದಂತೆ ಆಗಿದೆ, ಭಾರತೀಯ ಸೇನೆಯ ಟ್ಯಾಂಕ್ ನೌಕಾಪಡೆಯನ್ನು ಆಧುನೀಕರಿಸಲು, ಭವಿಷ್ಯದ ಸಿದ್ಧ ಯುದ್ಧ ವಾಹನಗಳನ್ನು …

Read More »

ಬಿಜೆಪಿ ಸರ್ಕಾರದ ಹಗರಣದ ತನಿಖೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಬುಧವಾರ ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ …

Read More »