Breaking News

Breaking News

ಮೀಸಲಾತಿ ರದ್ದು ಕುರಿತು ರಾಹುಲ್ ಗಾಂಧಿ ಹೇಳಿಕೆ ವಿವಾದ: ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ

ಬೆಂಗಳೂರು: ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿಗಳಿಗೆ ಗೌರವ ಕೊಡಬೇಕು, ಅವರಿಗೆ ರಕ್ಷಣೆ ಕೊಡಬೇಕೆಂಬ …

Read More »

ಅರಣ್ಯ ಇಲಾಖೆ ಸಿಬ್ಬಂದಿಯೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್ ಕ್ಯಾಂಟೀನ್ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಸಮರ್ಪಿಸಿದ ಬಳಿಕ ಮಾತನಾಡಿದ ಅವರು, ಕಾಡ್ಗಿಚ್ಚು …

Read More »

ಸಂಡೂರು ಉಪ ಚುನಾವಣೆ ಕುರಿತು ಬಿಜೆಪಿ ಮಹತ್ವದ ಘೋಷಣೆ

ಬಳ್ಳಾರಿ: ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ 2023ರ ಚುನಾವಣೆಯಲ್ಲಿ ಜಯಗಳಿಸಿದ್ದ ಕಾಂಗ್ರೆಸ್‌ ನಾಯಕ ಇ.ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ಸಂಡೂರು ಉಪ ಚುನಾವಣೆ ದಿನಾಂಕ ಘೋಷಣೆ ಮಾಡಬಹುದು. ಕರ್ನಾಟಕ ಬಿಜೆಪಿ ಸಂಡೂರು ಉಪ ಚುನಾವಣೆ …

Read More »

ಹುಬ್ಬಳ್ಳಿ-ಪುಣೆ ನಡುವೆ “ವಂದೇ ಭಾರತ್‌’ ರೈಲು ಸಂಚಾರಕ್ಕೆ ಎಲ್ಲ ಸಿದ್ಧತೆ

ಹುಬ್ಬಳ್ಳಿ : ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ನಡುವೆ “ವಂದೇ ಭಾರತ್‌’ ರೈಲು ಸಂಚಾರಕ್ಕೆ ಎಲ್ಲ ಸಿದ್ಧತೆ ಪೂರ್ಣಗೊಂಡಿದೆ. ಸೆಪ್ಟೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್ 13 ಅಥವಾ 14ರಂದು ಪ್ರಾಯೋಗಿಕ ಸಂಚಾರ ನಡೆಯಲಿದೆ. ರೈಲು 558 ಕಿ.ಮೀ ದೂರವನ್ನು 9 ಗಂಟೆ 15 ನಿಮಿಷಗಳಲ್ಲಿ ಕ್ರಮಿಸಲಿದೆ. ಬೆಳಿಗ್ಗೆ 5ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮಧ್ಯಾಹ್ನ 2.10ಕ್ಕೆ ಪುಣೆ ತಲುಪಲಿದೆ. ಅದೇ ರೀತಿ ಮಧ್ಯಾಹ್ನ 2.40ಕ್ಕೆ …

Read More »

ಮುನೇನಕೊಪ್ಪ ಅವರ ಆರೋಪಕ್ಕೆ ಲಾಡ್ ಪ್ರತಿಕ್ರಿಯೆ

ಧಾರವಾಡ: ನವಲಗುಂದ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಚಕ್ಕಡಿ ರಸ್ತೆ ನಿರ್ಮಾಣ ಮಾಡುವುದರ ಜೊತೆಗೆ ಪಾರಂಪರಿಕ ಗುಡ್ಡದ ಮಣ್ಣಿನಲ್ಲಿ ಅವ್ಯವಹಾರ ನಡೆಸಲಾಗುತ್ತಿದೆ ಎಂದು ಆರೋಪ ಮಾಡಿರುವ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಆರೋಪಕ್ಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಶಂಕರ ಪಾಟೀಲ ಮುನೇನಕೊಪ್ಪ ಅವರು ನನ್ನ ಸ್ನೇಹಿತರು. ರಾಜಕಾರಣದಲ್ಲಿ ಈ ರೀತಿ ಆರೋಪ ಮಾಡುವುದು ಸಹಜ. ಈ ಬಗ್ಗೆ ತನಿಖೆ …

Read More »

ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ತಮಟೆ ಚಳುವಳಿ

ಚಿತ್ರದುರ್ಗ : ಸುಪ್ರೀಂಕೋರ್ಟ್ ನ ಮಹತ್ವದ ತೀರ್ಪಿನನ್ವಯ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ನೇತೃತ್ವದಲ್ಲಿ ಸೆ.12 ರಂದು ಬೆಳಿಗ್ಗೆ 11 ಕ್ಕೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಮಟೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಸಂವಿಧಾನಬದ್ದವಾದ ಒಳ ಮೀಸಲಾತಿಯನ್ನು ಜಾರಿಗೆ ತರುವ ಅಧಿಕಾರ ಆಯಾ ರಾಜ್ಯಗಳಿಗಿದೆಯೆಂದು ಸುಪ್ರೀಂಕೋರ್ಟ್ …

Read More »

ಕೆಲಸ ಬಿಟ್ಟು ಸಂಘಟನೆಯಲ್ಲಿ ತೊಡಗಿಕೊಂಡ ಶಿಕ್ಷಕರಿಗೆ ಗೇಟ್ ಪಾಸ್: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲೆಗೆ ವಿದ್ಯಾರ್ಥಿಗಳು ಚಕ್ಕರ್‌ ಹಾಕುವುದು ಸಹಜ, ಆದರೆ ಕೆಲವು ಕಡೆ ಶಿಕ್ಷಕರು ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ ಅಂತಹ ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಪಾಠ ಮಾಡಬೇಕು, ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು, ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ …

Read More »

ಜಮ್ಮು ಗಡಿಯಲ್ಲಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ

ಕನಚಕ್: ಗಡಿ ಆಚೆಯಿಂದ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡಿರುವ ಘಟನೆ ಅಖ್ನೂರ್‌ನಲ್ಲಿರುವ ಕನಾಚಕ್‌ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬುಧವಾರ ಮುಂಜಾನೆ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದಲ್ಲಿರುವ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಈ ಅವಘಡದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಗಿನ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್‌ಎಫ್ ಪಡೆಗಳು ಪ್ರತಿದಾಳಿ …

Read More »

ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು. ಸೆಪ್ಟೆಂಬರ್ 13ರವರೆಗೆ ಮೂರು …

Read More »

ಕೇಂದ್ರ ಸರ್ಕಾರದಿಂದ ಜಾನುವಾರು ಸಾಕಾಣಿಕೆಗೆ ಉದ್ಯಮಿ ಮಿತ್ರ ಯೋಜನೆ ಜಾರಿಗೆ

ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾನುವಾರು ಸಾಕಣೆದಾರರ ಜೀವನೋಪಾಯವನ್ನು ಸುಧಾರಿಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಉದ್ಯಮಿ ಮಿತ್ರ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಕುರಿ, ಕೋಳಿ, ಹಂದಿ ಸಾಕಣೆಗೆ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯು ಹಿತ್ತಲಿನಲ್ಲಿ ಕೋಳಿ, ಕುರಿ, ಮೇಕೆ, ಹಂದಿ ಸಾಕಣೆ, ಮೇವು ಮತ್ತು ಮೇವಿನ ಬೆಳೆ ದಾಸ್ತಾನುಗಳನ್ನು ಸುಧಾರಿಸುವ ಗುರಿಯನ್ನು …

Read More »