Breaking News

Breaking News

ಜಿಲ್ಲಾ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುದ್ರಪ್ಪ ಬಸಟ್ಟೆಪ್ಪ ಮೂಲಿಮನಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ ಅವರ ಆದೇಶದ ಮೇರೆಗೆ ಧಾರವಾಡ ಜಿಲ್ಲಾ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅವರನ್ನು ಹುಬ್ಬಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅನಿಲ್‌ ಕುಮಾ‌ರ್ ಪಾಟೀಲ್ ಆದೇಶ ಪಾತ್ರವನ್ನು ಅವರಿಗೆ ನೀಡಿ ಅವರನ್ನು ಗೌರವಿಸಿದರು.

Read More »

ವಸಂತ ನಾಡಿಗೇರ ನಿಧನ; ಕವಿವಿಯಲ್ಲಿ ಸಂತಾಪ ಸಭೆ

ಧಾರವಾಡ:ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ವಸಂತ ನಾಡಿಗೇರ ತೀವ್ರ ಹೃದಯಾಘಾತದಿಂದ ವಿಧಿವಶರಾದ ಹಿನ್ನೆಲೆಯಲ್ಲಿ ಮೃತರ ಆತ್ಮಕ್ಕೆ ಶಾಂತಿಸಿಗಲೆಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸಂಜಯಕುಮಾರ ಮಾಲಗತ್ತಿ, ವಿಭಾಗದ ಪ್ರಾಧ್ಯಾಪಕ ಡಾ. ಜೆ. ಎಂ. ಚಂದುನವರ ಸೇರಿದಂತೆ ಹಲವರು ಇದ್ದರು.

Read More »

ಅರಣ್ಯ ಭೂಮಿ ಒತ್ತುವರಿಗೊಳಿಸಲು ಸಂಸದ ಮಲ್ಲೇಶ್ ಬಾಬು ಸೂಚನೆ

ಕೋಲಾರ: ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾಗುವ ಅಧಿಕಾರಿಗಳು ಒತ್ತುವರಿ ತೆರವಿಗು ಮುಂಚೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಮಾಡಿ ನಂತರ ಒತ್ತುವರಿ ತೆರವುಗೊಳಿಸಲು ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದ ಮಲ್ಲೇಶ್ ಬಾಬು ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಿಶಾ ಸಭೆಯಲ್ಲಿ ಅಧ್ಯಕ್ಷತೆ ವಹಿತಿ ಮಾತನಾಡಿ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪುವಂತೆ ಕ್ರಮ …

Read More »

ಪಿಎಂ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಗೆ ಚಾಲನೆ: ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್

ನವದೆಹಲಿ: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರು ನವದೆಹಲಿಯಲ್ಲಿಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೀನುಗಾರಿಕಾ ವಲಯದಲ್ಲಿ ಉತ್ಪಾದನೆ ಮತ್ತು ಸಂಸ್ಕರಣಾ ಕ್ಲಸ್ಟರ್‌ಗಳ ಮೇಲೆ ಪ್ರಮಾಣಿತ ಕಾರ್ಯಾಚರಣೆಯ ವಿಧಾನವನ್ನು ಅವರು ಇದೇ ವೇಳೆ ಬಿಡುಗಡೆ ಮಾಡಲಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ರಾಷ್ಟ್ರೀಯ ಆದ್ಯತೆಯ ಯೋಜನೆಗಳಿಗೆ ಇದು …

Read More »

ಪಿಎಂ ಆವಾಸ್ ಯೋಜನೆ: ಸೆ.15 ಕ್ಕೆ 26 ಲಕ್ಷ ಫಲಾನುಭವಿಗಳ ಗೃಹಪ್ರವೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಪ್ರದೇಶದ ಲಕ್ಷಾಂತರ ಫಲಾನುಭವಿಗಳಿಗೆ ಪಿಎಂ ಆವಾಸ್ ಯೋಜನೆಯ ಮೊದಲ ಕಂತುಗಳನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು 26 ಲಕ್ಷ ಫಲಾನುಭವಿಗಳ ಗೃಹ ಪ್ರವೇಶ ಸೆಪ್ಟೆಂಬರ್ 15 ರಂದು ಜೆಮ್ಶೆಡ್ಪುರದಲ್ಲಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಪ್ರಕಟಿಸಿದ್ದಾರೆ. ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಆನ್ಲೈನ್ ಸಭೆಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷಾಂತರ ಪಿಎಂ ಆವಾಸ್ ಯೋಜನೆ …

Read More »

ಬೈಕ್ ಸರಿಯಾಗಿ ದುರಸ್ತಿ ಮಾಡಿಲ್ಲ ಎಂದು ಶೋರೂಂಗೆ ಬೆಂಕಿ ಹಚ್ಚಿದ ವ್ಯಕ್ತಿ

ಕಲಬುರಗಿ: ತನ್ನ ಬೈಕ್‌ ಸರಿಯಾಗಿ ದುರಸ್ತಿ ಮಾಡಿಲ್ಲ ಎಂಬ ಕೋಪದಲ್ಲಿ ವ್ಯಕ್ತಿಯೊಬ್ಬರು ಹುಮನಾಬಾದ್ ಮುಖ್ಯರಸ್ತೆಯಲ್ಲಿನ ಓಲಾ ಎಲೆಕ್ಟ್ರಿಕ್‌ ವಾಹನದ ಶೋರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ನಗರದ ನಿವಾಸಿ ಮಹಮದ್ ನದೀಮ್ ಬೆಂಕಿ ಹಚ್ಚಿದ ಆರೋಪಿ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಿಗ್ಗೆ 10ರ ಸುಮಾರಿಗೆ ಶೋರೂಂಗೆ ಬಂದ ನದೀಮ್, ತನ್ನ ಎಲೆಕ್ಟ್ರಿಕ್ ಬೈಕ್ ದುರಸ್ತಿಯ ಬಗ್ಗೆ ಶೋರೂಂ ಸಿಬ್ಬಂದಿ ಜತೆಗೆ …

Read More »

ಛಬ್ಬಿ ಗಣೇಶನ ದರ್ಶನ ಪಡೆದ ಶಾಸಕ

ಧಾರವಾಡ : ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ಕೆಂಪು ಗಣೇಶನ ದರ್ಶನವನ್ನು ಶಾಸಕ ಮಹೇಶ ಟೆಂಗಿನಕಾಯಿ ಪಡೆದುಕೊಂಡರು. ಭಯ ಭಕ್ತಿ ಭಾವದಿಂದ ಕೆಂಪು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಮಹೇಶ ಟೆಂಗಿನಕಾಯಿ ಭಕ್ತಿ ಸೇವೆ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ರಮೇಶ ಮಹಾದೇವಪ್ಪನವರ, ಕಲ್ಲಪ್ಪ ಮೊರಬದ, ಮಹೇಶ ಶೆರೆಗಾರ ಸೇರಿದಂತೆ ಹಲವರು ಇದ್ದರು.

Read More »

ಸೆ. 12 ರಂದು ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ

ಧಾರವಾಡ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸಹಯೋಗದಲ್ಲಿ ಪದ್ಮವಿಭೂಷಣ ಡಾ.ಮಲ್ಲಿಕಾರ್ಜುನ ಮಸಸೂರ ಅವರ 32 ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 12, 2024 ರಂದು ಬೆಳಿಗ್ಗೆ 9.30 ಗಂಟೆಗೆ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಸದಸ್ಯ ಹಾಗೂ ಖ್ಯಾತ …

Read More »

ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ: ಕುಪೇಂದ್ರ ಆಯನೂರು

ಹುಬ್ಬಳ್ಳಿ:ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಅಪಘಾತ ವಿಮೆ ಜಾರಿಗೆ ತಂದಿರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಅಸಂಘಟಿತ ಕಾರ್ಮಿಕ ಸಂಘದ ರಾಜ್ಯ ಗೌರವಾಧ್ಯಕ್ಷ ಕುಪೇಂದ್ರ ಆಯನೂರು ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಸಂಘವು ಹೋರಾಟ ಮಾಡುತ್ತಲೇ ಬಂದಿದೆ. ಕಾರ್ಮಿಕ ಸಚಿವ ಸಂತೋಷ ಲಾಡ್ ನಮ್ಮ ಹೋರಾಟಕ್ಕೆ ಸ್ಪಂದಿಸಿದ್ದಾರೆ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

Read More »

ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಶುರುವಾಗಿದೆ: ಮುತಾಲಿಕ್

ಧಾರವಾಡ: ವಕ್ಷ ಬೋರ್ಡ್ ಕಾಯ್ದೆ ತಿದ್ದುಪಡಿ ವಿಚಾರವಾಗಿ ಪರ-ವಿರೋಧ ಎರಡೂ ಶುರುವಾಗಿದೆ. ಇದಕ್ಕೆ ಇಡೀ ದೇಶದಲ್ಲಿ ಮುಸ್ಲಿಂರು ದೊಡ್ಡ ಪ್ರಮಾಣದಲ್ಲಿ ವಿರೋಧ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ವಕ್ಸ್ ಬೋರ್ಡ್ ಕಾಯ್ದೆ ತಿದ್ದುಪಡಿ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ತಿದ್ದುಪಡಿ ಸಂಬಂಧ ಸಂಸತ್ ಸಮಿತಿ ರಚಿಸಿದೆ, ಈ ಸಮಿತಿಗೆ ಮನೆ ಮನೆಯಿಂದ ಪತ್ರ ಕಳುಹಿಸಿ ಎಂದು ಮುಲ್ಲಾ, ಮೌಲ್ವಿಗಳು …

Read More »