BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗಳ ಮೊದಲ ಹಂತದ ಕಾಮಗಾರಿ 2026 ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಮಾಹಿತಿ ನೀಡಿದರು. ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ- ಕಾರಿಡಾರ್-2 ) …
Read More »
BigTv News
September 10, 2024
Breaking News, ಬೀದರ್
ಬೀದರ್: ಕಾಮಗಾರಿಯ ಬಿಲ್ ಗಾಗಿ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದ ಘಟನೆ ಸೆ.10ರ ಮಂಗಳವಾರ ನಡೆದಿದೆ. ತಾಲೂಕಿನ ಕೋಸಂ ಗ್ರಾ.ಪಂ. ಪಿಡಿಒ ರಾಹುಲ್ ದಂಡೆ ಹಾಗೂ ತಾ.ಪಂ. ತಾಂತ್ರಿಕ ಸಹಾಯಕ (ನರೇಗಾ) ಸಿದ್ರಾಮೇಶ್ವರ ಬಂಧಿತರು. ಕೋಸಂ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರ ಸುನೀಲ ಸಕಾರಾಮ ಪಡೆದಿದ್ದರು. ಅನ್ಯ ಕೆಲಸದಲ್ಲಿ ನಿರತರಾಗಿದ್ದರಿಂದ ಸುನೀಲ ಸೂಚನೆ ಮೇರೆಗೆ 15 ಕಾಮಗಾರಿಗಳನ್ನು ಗುತ್ತಿಗೆದಾರ ಅರವಿಂದ ಮಾಧವರಾವ …
Read More »
BigTv News
September 10, 2024
Breaking News
ನವದೆಹಲಿ: ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು. 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ …
Read More »
BigTv News
September 10, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 …
Read More »
BigTv News
September 10, 2024
Breaking News, ಬಾಗಲಕೋಟೆ
ಬಾಗಲಕೋಟೆ: ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಲೀಡ್ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ರೈತರ ಮಕ್ಕಳು …
Read More »
BigTv News
September 10, 2024
Breaking News, ಬೆಳಗಾವಿ
ಹುಕ್ಕೇರಿ: ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜನರ ಅಹವಾಲುಗಳನ್ನು ಆಲಿಸಿದರು. ಗ್ರಾಮದ ಕುರುಬ ಸಮಾಜದವರು ಕುರಿಗಳಿಗೆ ಔಷಧಿ ಅಲಭ್ಯ ಕುರಿತು, ಲಕ್ಷ್ಮಿ ದೇವಿ ಟ್ರಸ್ಟ್ ಕಮಿಟಿಯವರು ಸಮುದಾಯ ಭವನ ನಿರ್ಮಾಣದ ಬಗ್ಗೆ, ರೈತರ ಸೇವಾ ಸಂಘದ ಪತ್ತು ಬಿಡುಗಡೆ ಮಾಡುವ ಕುರಿತು, ಹಾಗೂ ಗ್ರಾಮದ ಎಲ್ಲಮ್ಮದೇವಿ ಮಂದಿರದ ಜಿರ್ಣೋದ್ಧಾರ, ಗ್ರಾಮದ ಬಾವಿಗಳಿಗೆ ತಡೆಗೋಡೆ ನಿರ್ಮಿಸುವ ಕುರಿತು ಸಲ್ಲಿಸಿದ ಮನವಿ ಸ್ವೀಕರಿಸಿದರು. …
Read More »
BigTv News
September 10, 2024
Breaking News, ಮಹಾರಾಷ್ಟ್ರ
ಮಹಾರಾಷ್ಟ್ರ: ನವೆಂಬರ್, ಡಿಸೆಂಬರ್ 2024 ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದು, ಈ ಬಾರಿ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ. ಲೋಕ್ ಪೋಲ್ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ 141 ರಿಂದ 154 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತದೆ ಎಂದು ಅಂದಾಜಿಸಿದೆ, ಇನ್ನು ಆಡಳಿತಾರೂಢ ಎನ್‌ಡಿಎ 115 ರಿಂದ 128 ಸ್ಥಾನಗಳಲ್ಲಿ …
Read More »
Shaikh BigTv
September 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹತ್ತು ವರ್ಷಗಳಲ್ಲಿ ಇವರದ್ದು ಒಂದು ಕಾರ್ಯಕ್ರಮ ಇಲ್ಲ. ಬರೋದು ರಾಜ್ಯ ಸರ್ಕಾರವನ್ನು ಬೈಯ್ಯೋದು. ಮೋದಿ ಸಾಹೇಬರು ಉದ್ಘಾಟನೆ ಮಾಡಿರೋ ಎಲ್ಲ ಬಿಲ್ಡಿಂಗ್ ಸೋರುತ್ತಿವೆ. ರಾಮ ಮಂದಿರವೇ ಸೋರುತ್ತಿದೆ. ಇದರ ಬಗ್ಗೆ ಮಾತನಾಡುತ್ತಾರಾ? ಎಂದು ಸಚಿವ ಸಂತೋಷ ಲಾಡ್ ಟೀಕೆ ಮಾಡಿದ್ದಾರೆ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಫುಡ್ ಸೆಕ್ಯೂರಿಟಿ ಬಿಲ್ ತಂದವರು ಯಾರೂ.? ಮೋದಿ ಅಕ್ಕಿ ಅಕ್ಕಿ ಅಂತಾರೆ ಇದು ಸರಿನಾ? ನೀವು ಇವತ್ತು ಅಕ್ಕಿ ಕೊಡುತ್ತಿದ್ದೀರ. …
Read More »
Shaikh BigTv
September 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ, ಪಾಲಿಕೆ ಆಯುಕ್ತರು, ಮೇಯರ್, ಉಪ ಮೇಯರ್ ಭಾಗಿಯಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ …
Read More »
Shaikh BigTv
September 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆ ಮಾಡಲಾಗಿದೆ. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಕೊಲೆ, ಅತ್ಯಾಚಾರ, ಪೋಕ್ಸ್ …
Read More »