Breaking News

Breaking News

ರಾಜ್ಯದಲ್ಲಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಕೆಲವು ಷರತ್ತಿಗೆ ಒಳಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕಚೇರಿಯಿಂದ ಮಾರ್ಗದರ್ಶಿ/ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿಯೇ ಕೆಲವು ಜಿಲ್ಲಾ ಉಪನಿರ್ದೇಶಕರುಗಳು ಹುದ್ದೆ ಭರ್ತಿ ಅನುಮತಿ …

Read More »

ಕಲಾವಿದರಿಗೆ ಭದ್ರತೆ ಕಲ್ಪಿಸುವ ಕುರಿತು ಸೆ.16 ರಂದು ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ ಫೈರ್ ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ. …

Read More »

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ ಪ್ರಕರಣ ದೃಢಪಡಿಸಿದ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ನಿನ್ನೆಯಷ್ಟೇ ಭಾರತದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿರುವುದಾಗಿ ತಿಳಿದು ಬಂದಿತ್ತು. ಇಂದು ಭಾರತದಲ್ಲಿ ಮೊದಲ ಎಂಪೋಕ್ಸ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಖಚಿತ ಪಡಿಸಿದೆ. ಎಂಪೋಕ್ಸ್ (ಮಂಕಿಪಾಕ್ಸ್) ಪ್ರಸರಣ ಹೊಂದಿರುವ ದೇಶದಿಂದ ಇತ್ತೀಚೆಗೆ ಹಿಂದಿರುಗಿದ ಯುವ ಪುರುಷ ರೋಗಿಯನ್ನು ವೈರಸ್ನ ಶಂಕಿತ ಪ್ರಕರಣವೆಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು. ರೋಗಿಯನ್ನು ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು …

Read More »

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯಸರ್ಕಾರ

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು, ಈಗಾಗಲೇ ಈ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ …

Read More »

ವರ್ತುಲ ರಸ್ತೆ ನಿರ್ಮಾಣದ ಸ್ಥಳ ಪರಿಶೀಲನೆ

ಹೊಸಪೇಟೆ: ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ನಗರದ ಹೊರವಲಯಕ್ಕೆ ಭೇಟಿ ನೀಡಿ ವರ್ತುಲ ರಸ್ತೆ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರೊಂದಿಗೆ ಸಂಚಾರ ಕೈಗೊಂಡ ಅವರು, ರಾಷ್ಟ್ರೀಯ ಹೆದ್ದಾರಿ 50ರಿಂದ ಹೊಸಪೇಟೆ ನಗರಕ್ಕೆ ಸಂಪರ್ಕಕ್ಕೆ ಅಗತ್ಯವಿರುವ ರಿಂಗ್ ರೋಡ್ ಮಾರ್ಗದ ಬಗ್ಗೆ ಚರ್ಚಿಸಿದರು. ದಿನೇದಿನೆ ಜನ ಸಂಪರ್ಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಅತ್ಯವಿರುವ ಸ್ಥಳ ಗುರುತಿಸುವುದರ ಬಗ್ಗೆ ಜಿಲ್ಲಾಧಿಕಾರಿಗಳು ಶಾಸಕರೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ …

Read More »

ಆಟೋ ಕಾಂಪೋನೆಂಟ್‌ ಸ್ವಾವಲಂಬನೆ ಬೆಳವಣಿಗೆಯನ್ನು ಉತ್ತೇಜಿಸುವುದು ಶ್ಲಾಘನೀಯ: ಕೇಂದ್ರ ಸಚಿವ ಎಚ್ಡಿಕೆ

ನವದೆಹಲಿ: ಆತ್ಮನಿರ್ಭರ್‌ ಭಾರತ ಅಭಿಯಾನದ ಮೂಲಕ ಆಟೋ ಕಾಂಪೋನೆಂಟ್‌ ಕ್ಷೇತ್ರದಲ್ಲಿ ಸ್ವಾವಲಂಬಿಯ ಬೆಳವಣಿಗೆಯನ್ನು ಉತ್ತೇಜಿಸುತ್ತಿರುವುದು ಶ್ಲಾಘನೀಯ ಎಂದು ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಹೆಚ್‌ ಡಿ.ಕುಮಾರಸ್ವಾಮಿ ಹೇಳಿದರು. ವಿಕಸಿತ್‌ ಭಾರತ್‌ ಚಲನಶೀಲ ಘಟಕಗಳಲ್ಲಿ ಸ್ವಾವಲಂಬನೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಪೋಷಿಸುವುದು ಎಂಬ ಶಿರ್ಷಿಕೆಯುಳ್ಳ 64ನೇ ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು, ಇದು ಈಗ ಭಾರತದ ಶೇ.2.7ರಷ್ಟು ಜಿಡಿಪಿ ಮತ್ತು 5 ಮಿಲಿಯನ್‌ ಉದ್ಯೋಗಗಳನ್ನು ಒದಗಿಸುತ್ತವೆ. ಈ ಕ್ಷೇತ್ರವು ಈ ವರ್ಷ …

Read More »

ಬೆಂಗಳೂರು ಉಪ ನಗರ ರೈಲ್ವೆ ಯೋಜನೆ 2026 ಕ್ಕೆ ಪೂರ್ಣ: ವಿ.ಸೋಮಣ್ಣ

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು. ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ …

Read More »

ಶ್ರೀಗಂಧದ ಮರದ ತುಂಡುಗಳ ಸಾಗಾಟ: ಇಬ್ಬರ ಬಂಧನ

ಚಾಮರಾಜನಗರ : ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತುಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ …

Read More »

ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆ ಹೆಚ್ಚಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ …

Read More »

ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಿದ ಇಸ್ರೇಲ್: 14 ಮಂದಿ ಸಾವು

ನವದೆಹಲಿ: ಮಧ್ಯ ಸಿರಿಯಾದಲ್ಲಿ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 14 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಮಾ ಪ್ರಾಂತ್ಯದ ಮಸ್ಯಾಫ್ ಬಳಿ ಈ ದಾಳಿ ನಡೆದಿದೆ ಎಂದು ಸಿರಿಯಾದ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ವ್ಯಾಪಕ ಹಾನಿ ಮತ್ತು ಸಾವುನೋವುಗಳು ವೈಮಾನಿಕ ದಾಳಿಯು ಮಿಲಿಟರಿ ಮತ್ತು ವೈಜ್ಞಾನಿಕ ಸೌಲಭ್ಯಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿತು. ಮೃತರಲ್ಲಿ ಕನಿಷ್ಠ ನಾಲ್ಕು ಸೈನಿಕರು ಮತ್ತು ಮೂವರು ನಾಗರಿಕರು ಸೇರಿದ್ದಾರೆ ಎಂದು …

Read More »