Breaking News

Breaking News

ಸೆ.. 10 ರಂದು ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ

ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಜನಸಂಪರ್ಕ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಮತ್ತಿತರು ಆಗಮಿಸಲಿದ್ದಾರೆ. ಸೆ. 10 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

Read More »

ಗಣೇಶನ ದರ್ಶನ ಪಡೆದ ಶಾಸಕ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ. 44 ರ ಆಕಾಶ ಪಾರ್ಕ್ ಗಜಾನನ ಯುವಕ ಮಂಡಳ ವತಿಯಿಂದ ಪ್ರತಿಷ್ಠಾಪಿಸಿದ ಶ್ರೀ ಗಜಮುಖನ ಆಶೀರ್ವಾದ ಪಡೆದರು. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ ಉಮಾ ಮುಕುಂದ, ಪ್ರಮುಖ ವಿನೋದ ಪಟವಾ, ವಿಜಯ ಪೂಜಾರ, ಶ್ರೀನಿವಾಸ ಕಟ್ಟಿಮನಿ ಹಾಗೂ ಯುವಕ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Read More »

ಧಾರವಾಡ ಶಿವಾಜಿ ವೃತ್ತದ ಸಾರ್ವಜನಿಕ ಗಣೇಶ ಮೂರ್ತಿಗೆ ವಿಶೇಷ ಪೂಜೆ

ಧಾರವಾಡ:ಗಣೇಶೋತ್ಸವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರು ಧಾರವಾಡ ಶಿವಾಜಿ ವೃತ್ತದ ಸಾರ್ವಜನಿಕ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಧಾರವಾಡ ನಗರದಾದ್ಯಂತ ಪಥಸಂಚಲನ ನಡೆಸಿದರು. ಭಾನುವಾರ ನಡೆದ ಆಕರ್ಷಕ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿ ನಗರದಾದ್ಯಂತ ಸಂಚರಿಸಿದ್ದು, ದಾರಿಯುದ್ದಕ್ಕೂ ಜನರು ಪಥಸಂಚಲನವನ್ನು ಭಾರತ ಮಾತೆಗೆ ಜಯವಾಗಲಿ ಎಂದು ಜಯಘೋಷ ಹಾಕಿ ಸ್ವಾಗತಿಸಿದರು.

Read More »

ಪತ್ರಿಕಾ ವಿತರಕರಿಗೆ ಸೌಲಭ್ಯ ನೀಡಲು ಸರ್ಕಾರ ಬದ್ಧ: ಸಚಿವ ಡಿ‌.ಸುಧಾಕರ್‌

ಚಿತ್ರದುರ್ಗ: ಚಳಿ, ಮಳೆ, ಬಿಸಿಲನ್ನು ಲೆಕ್ಕಿಸದೇ ಮನೆಮನೆಗೆ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರಿಗೆ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸೂರ್ಯ ಹುಟ್ಟುವುದಕ್ಕೂ ಮೊದಲೇ ಮನೆಮನೆಗೆ ಪತ್ರಿಕೆ ತಲುಪಿಸುವ ಅವರ ಸೇವೆ ಅನನ್ಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದರು. ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ಕಾರ್ಯನಿತರ ಪತ್ರಿಕಾ ವಿತರಕರ ಸಂಘದ ವತಿಯಿಂದ ಇಲ್ಲಿನ ಮುರುಘಾಮಠದ ಅನುಭವ ಮಂಟಪದಲ್ಲಿ ಭಾನುವಾರ ನಡೆದ ಪತ್ರಿಕಾ ವಿತರಕರ 4ನೇ ರಾಜ್ಯ …

Read More »

ಭಾರೀ ಮಳೆ: ಸಿಡಿಲು ಬಡಿದು 7 ಜನರು ಸಾವು

ಬಲೋದಬಜಾರ್: ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್ ಭಟಪರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳು ಸಿಡಿಲು ಬಡಿದಾಗ ಭಾರಿ ಮಳೆಯ ನಡುವೆ ತಮ್ಮ ಹೊಲದ ಬಳಿಯ ಕೆರೆಯಂಚಿನಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡ …

Read More »

ಹಣಕಾಸು ಸಚಿವರ ನೇತೃತ್ವದಲ್ಲಿ ಜಿಎಸ್‌ಟಿ ಮಂಡಳಿ ಸಭೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ 54ನೇ ಸಭೆ ಸೋಮವಾರ ನಡೆಯಲಿದೆ. ಈ ಸಭೆಯು ರಾಜ್ಯಗಳ ಹಣಕಾಸು ಸಚಿವರನ್ನು ಒಳಗೊಂಡಿರಲಿದೆ. ವಿಮಾ ಕಂತುಗಳ ಮೇಲಿನ ತೆರಿಗೆ, ಜಿಎಸ್‌ಟಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಸಲಹೆಗಳ ಬಗ್ಗೆ ಮತ್ತು ಆನ್‌ಲೈನ್ ಗೇಮಿಂಗ್ ಕುರಿತ ವಾಸ್ತವಿಕ ವರದಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ನಿರೀಕ್ಷೆ ಇದೆ, ಕೇಂದ್ರ ಮತ್ತು …

Read More »

ಕೃಷಿ ಇಲಾಖೆ: ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯ

ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ …

Read More »

ಕೃಷಿ ಭಾಗ್ಯ ಯೋಜನೆ: ರೈತರಿಗೆ ಸಹಾಯಧನ ಸೌಲಭ್ಯ

ಹೊಸಪೇಟೆ: ಪ್ರಸ್ತುತ ವರ್ಷದಲ್ಲಿ ಜಿಲ್ಲೆಯ ಒಟ್ಟು 6 ತಾಲ್ಲೂಕುಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ಸಾಮಾನ್ಯ ವರ್ಗದ ರೈತರಿಗೆ 80 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ 90 ರಷ್ಟು ಸಹಾಯಧನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕ್ಷೇತ್ರ ಬದು ನಿರ್ಮಾಣದಲ್ಲಿ ಸಾಮಾನ್ಯರಿಗೆ 80 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು. ನೀರು ಸಂಗ್ರಹಣಾ ರಚನೆಗೆ ಸಾಮಾನ್ಯರಿಗೆ 80 ರಷ್ಟು, …

Read More »

ನಕಲಿ ಆಧಾರ್ ಕಾರ್ಡ್ ಬಳಕೆ: ಅಕ್ರಮವಾಗಿ ಬೇರೊಬ್ಬರಿಗೆ ಜಮೀನು ನೋಂದಣಿ

ಹಾಸನ: ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ ನಡೆದಿದೆ. ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿ ಜಿಟ್ಟೇನಹಳ್ಳಿ ಗ್ರಾಮದ ಸರ್ವೆ ನಂಬರ್ 32/6, 32/35ರಲ್ಲಿ ತಲಾ 8.8 ಗುಂಟೆ ಭೂಮಿ ಶ್ರೀನಿವಾಸ ಬಿನ್ ಜವರೇಗೌಡ, ರೇವಣ್ಣ ಬಿನ್ ಜವರೇಗೌಡ ಸಹೋದರರಿಗೆ ಪಿತ್ರಾರ್ಜಿತ ಆಸ್ತಿಯಾಗಿ ಬಂದಿದೆ. ಈ ಜಮೀನನ್ನು ಅವರಿಗೆ ತಿಳಿಯದಂತೆ ಕೊಣನೂರು …

Read More »

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲಿಯೂ ಹಲವು ಕಡೆ ಗಣೇಶೋತ್ಸವ ಆಚರಣೆ ಮಾಡುವ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿವೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಬೆಳಗಾವಿಯಲ್ಲಿಯೂ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ‌ ದೇವಸ್ಥಾನದಲ್ಲಿ …

Read More »