Breaking News

Breaking News

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಿ ಆರ್ ಪಿ ಎಫ್ ಬೆಟಾಲಿಯನ್ ಗಳ ನಿಯೋಜನೆ

ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕೇಂದ್ರದ ನಿರ್ದೇಶನದಂತೆ ಅಸ್ಸಾಂ ರೈಫಲ್ಸ್ ಘಟಕಗಳ ಜಾಗಕ್ಕೆ ತಲಾ 1,000 ಸಿಬ್ಬಂದಿಯನ್ನೊಳಗೊಂಡ ಸಿ ಆರ್ ಪಿ ಎಫ್ ಎರಡು ಹೊಸ ಬೆಟಾಲಿಯನ್‌ಗಳನ್ನು ನಿಯೋಜಿಸಲಾಗಿದೆ. ತೆಲಂಗಾಣದ ವಾರಂಗಲ್‌ನಿಂದ ಬೆಟಾಲಿಯನ್ ಸಂಖ್ಯೆ 58 ಮತ್ತು ಜಾರ್ಖಂಡ್‌ನ ಲತೇಹರ್‌ನಿಂದ ಬೆಟಾಲಿಯನ್ ಸಂಖ್ಯೆ 112 ಅನ್ನು ಸ್ಥಳಾಂತರಿಸಲಾಗುತ್ತದೆ. ಮೊದಲ ಘಟಕವು ಮಣಿಪುರದ ಕಾಂಗ್ವೈ (ಚುರಾಚಂದಪುರ) ದಲ್ಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ ಮತ್ತು ಎರಡನೇ ಘಟಕವು ಇಂಫಾಲ್ ಸುತ್ತಲೂ …

Read More »

ಹೆಸರು ಖರೀದಿಗೆ ನೋಂದಣಿ ದಿನಾಂಕ ವಿಸ್ತರಿಸಲು ರೈತ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ

ಕಲಬುರಗಿ: ರೈತರು, ರೈತ ಸಂಘಟನೆಗಳ ಒತ್ತಾಯದ ಬಳಿಕ ಹೆಸರು ಕಾಳು ಖರೀದಿಗೆ ಸರ್ಕಾರ ಮುಂದಾಗಿದೆ. ಆದರೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವಿಧಿಸಿರುವ ನಿಯಮದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ಮಾರಾಟ ನೋಂದಣಿ ಮಾಡಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸಾವಿರಾರು ರೈತರು ತಾವು ಬೆಳೆದ ಹೆಸರು ಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡುವ ಬದಲು ಅಗ್ಗದ ಬೆಲೆಗೆ ಅಡತಿ ಅಂಗಡಿಗಳಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ 55,444 …

Read More »

ನಾಗಾವಿ ಐತಿಹಾಸಿಕ ಸ್ಥಳ ಅಭಿವೃದ್ದಿಪಡಿಸಲು ಕಾರ್ಯ ಯೋಜನೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಯೋಜನೆ ಪರಿಶೀಲಿಸಿದ ಅವರು, ನಾಗಾವಿಯಲ್ಲಿ 10-13 ಶತಮಾನಗಳ ನಡುವೆ ಘಟಿಕಾಸ್ಥಾನವಿದ್ದು 400ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪಾಠ-ಪ್ರವಚನಗಳಲ್ಲಿ ನಿರತರಾಗಿದ್ದರು, ಅವರಿಗೆ ಉಳಿದುಕೊಳ್ಳಲು ವಸತಿ ನಿಲಯಗಳ ವ್ಯವಸ್ಥೆಯಿದ್ದು, …

Read More »

ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸೂಚನೆ

ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ …

Read More »
Featured Video Play Icon

ಸ್ಮಾರ್ಟ್ ಸಿಟಿ ಅವಾಂತರ, ಎಎಸ್ ಐ ಸ್ಥಿತಿ ಚಿಂತಾಜನಕ.!!

ಹುಬ್ಬಳ್ಳಿಯಲ್ಲಿ ಸಂಚರಿಸುವ ಮೊದಲು ವಿಚಾರಿಸಿ ಮುಂದೆ ಸಾಗಿ!!! ಆರಕ್ಷಕನ ಹೆಲ್ಮೆಟ್ ಒಡೆದು ಮೆದಳಿಗೆ ಪೆಟ್ಟು!! ಕ್ರೇನ್ ಆಪರೇಟರ್ ಎಸ್ಕೇಪ್… ಸ್ಮಾರ್ಟ್ ಸಿಟಿಗೆ ಇನ್ನೇಷ್ಟು ಬಲಿ ಬೇಕು..??

Read More »

ಬೆಂಗಳೂರು ಉಪ ನಗರ ರೈಲು ಯೋಜನೆ: ಮೊದಲ ಹಂತದ ಕಾಮಗಾರಿ 2026 ಕ್ಕೆ ಪೂರ್ಣ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಗಳ ಮೊದಲ ಹಂತದ ಕಾಮಗಾರಿ 2026 ಡಿಸೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಮಾಹಿತಿ ನೀಡಿದರು. ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (25 ಕಿ.ಮೀ- ಕಾರಿಡಾರ್‌-2 ) …

Read More »

ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೀದರ್: ಕಾಮಗಾರಿಯ ಬಿಲ್ ಗಾಗಿ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದ ಘಟನೆ ಸೆ.10ರ ಮಂಗಳವಾರ ನಡೆದಿದೆ. ತಾಲೂಕಿನ ಕೋಸಂ ಗ್ರಾ.ಪಂ. ಪಿಡಿಒ ರಾಹುಲ್ ದಂಡೆ ಹಾಗೂ ತಾ.ಪಂ. ತಾಂತ್ರಿಕ ಸಹಾಯಕ (ನರೇಗಾ) ಸಿದ್ರಾಮೇಶ್ವರ ಬಂಧಿತರು. ಕೋಸಂ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರ ಸುನೀಲ ಸಕಾರಾಮ ಪಡೆದಿದ್ದರು. ಅನ್ಯ ಕೆಲಸದಲ್ಲಿ ನಿರತರಾಗಿದ್ದರಿಂದ ಸುನೀಲ ಸೂಚನೆ ಮೇರೆಗೆ 15 ಕಾಮಗಾರಿಗಳನ್ನು ಗುತ್ತಿಗೆದಾರ ಅರವಿಂದ ಮಾಧವರಾವ …

Read More »

ರಾಜ್ಯದ ಬೇಡಿಕೆಗಳ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ

ನವದೆಹಲಿ: ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು. 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ …

Read More »

ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 …

Read More »

ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ಪಿ.ಸಿ.ಗದ್ದಿಗೌಡರ ಸೂಚನೆ

ಬಾಗಲಕೋಟೆ: ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಲೀಡ್ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ರೈತರ ಮಕ್ಕಳು …

Read More »