Breaking News

Breaking News

ಪಾಕ್ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ

ಜಮ್ಮು: ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಕೇಶ್‌ ಸಿಂಗ್‌ ಠಾಕೂರ್‌ ಪರ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಸಿಂಗ್‌, ನಾನು ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳಿಗೆ ಒಂದು ಮಾತು ಹೇಳಲು ಬಯಸುತ್ತೇನೆ, ಪಾಕಿಸ್ತಾನ ಸರ್ಕಾರ ನಿಮ್ಮನ್ನು ವಿದೇಶಿಯರೆಂದು …

Read More »

ಚಿರತೆ ಬಾಯಿಗೆ ನಾಯಿ ಬಲಿ ಆಯ್ತಾ?

ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಣಿಸಿಕೊಂಡಿರುವ ಚಿರತೆ ಇಂದು ಬೆಳಗಿನಜಾವ ನಾಯಿಯನ್ನು ಹೊತ್ತೊಯ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕಳೆದ ಎರಡೂರು ದಿನಗಳ ಹಿಂದೆ ಚಿರತೆಯ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಆ ಚಿರತೆ ಸೆರೆಗಾಗಿ ಇದೀಗ ಬೋನು ಇಟ್ಟಿದೆ. ಆದರೆ, ಕವಿವಿಗೆ ಹೊಂದಿಕೊಂಡಿರುವ ರವೀಂದ್ರನಗರದ ಬಸವರಾಜ ತಳವಾರ ಮನೆಯಲ್ಲಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಬಗ್ಗೆ ವರದಿಯಾಗಿದೆ. ಮನೆಯ ಮುಂದೆ ನಾಯಿಯ ರಕ್ತ ಚೆಲ್ಲಾಡಿದೆ. ಅಲ್ಲದೇ …

Read More »

ಕಮಲಾವತಿ ನದಿಯಲ್ಲಿ ಕೊಚ್ಚಿ ಹೋದ ಬಾಲಕ

ಸೇಡಂ: ಬಹಿರ್ದೆಸೆಗೆ ಕಮಲಾವತಿ ನದಿ ಬಳಿಗೆ ತೆರಳಿದ ಬಾಲಕನೊಬ್ಬ ಭಾನುವಾರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆ. ಪಟ್ಟಣದ ದೊಡ್ಡ ಅಗಸಿ ಬಡಾವಣೆಯ ಕೋಲಿವಾಡ ನಿವಾಸಿ ರಾಹುಲ್ ನಾಗಪ್ಪ ಎಳ್ಳಿ (17) ನದಿಯಲ್ಲಿ ಕೊಚ್ಚಿ ಹೋದ ಬಾಲಕ. ನಾನು ಮತ್ತು ರಾಹುಲ್ ಕಮಲಾವತಿ ನದಿ ಬಳಿಗೆ ಬಹಿರ್ದೆಸೆಗೆ ತೆರಳಿದ್ದೆವು. ರಾಹುಲ್ ಬಹಿರ್ದೆಸೆಗೆ ಸ್ವಲ್ಪ ದೂರ ತೆರಳಿ ನೀರಿಗಿಳಿದಿದ್ದ. ನದಿ ನೀರಿನ ಪ್ರವಾಹ ಹೆಚ್ಚಿತು. ರಾಹುಲ್ ನೀರಲ್ಲಿ ಮುಳುಗಿದ. ವಿಷಯವನ್ನು ನದಿ ಸಮೀಪದಲ್ಲಿದ್ದವರ ಗಮನಕ್ಕೆ …

Read More »

ಗ್ರಾಮ ಪಂಚಾಯಿತಿಗಳು ವಿತರಿಸುವ ಇ-ಸ್ವತ್ತು ದಾಖಲೆಗಳ ಲೋಪ ಸರಿಪಡಿಸಲು ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳು ವಿತರಿಸುತ್ತಿರುವ ಇ- ಸ್ವತ್ತು ದಾಖಲೆ ವಿತರಣೆಯಲ್ಲಿ ಸಾಕಷ್ಟು ಲೋಪ ಕಂಡು ಬಂದಿದ್ದು, ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರ ಎನ್‌ಐಸಿ ಸೇವೆ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಇ- ಸ್ವತ್ತು ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ- ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ …

Read More »

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ

ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ …

Read More »

ರಾಜ್ಯದಲ್ಲಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಕೆಲವು ಷರತ್ತಿಗೆ ಒಳಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಈ ಕಚೇರಿಯಿಂದ ಮಾರ್ಗದರ್ಶಿ/ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿಯೇ ಕೆಲವು ಜಿಲ್ಲಾ ಉಪನಿರ್ದೇಶಕರುಗಳು ಹುದ್ದೆ ಭರ್ತಿ ಅನುಮತಿ …

Read More »

ಕಲಾವಿದರಿಗೆ ಭದ್ರತೆ ಕಲ್ಪಿಸುವ ಕುರಿತು ಸೆ.16 ರಂದು ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ. ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ ಫೈರ್ ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ. …

Read More »

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ ಪ್ರಕರಣ ದೃಢಪಡಿಸಿದ ಕೇಂದ್ರ ಆರೋಗ್ಯ ಇಲಾಖೆ

ನವದೆಹಲಿ: ನಿನ್ನೆಯಷ್ಟೇ ಭಾರತದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಕೇಸ್ ಪತ್ತೆಯಾಗಿರುವುದಾಗಿ ತಿಳಿದು ಬಂದಿತ್ತು. ಇಂದು ಭಾರತದಲ್ಲಿ ಮೊದಲ ಎಂಪೋಕ್ಸ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಖಚಿತ ಪಡಿಸಿದೆ. ಎಂಪೋಕ್ಸ್ (ಮಂಕಿಪಾಕ್ಸ್) ಪ್ರಸರಣ ಹೊಂದಿರುವ ದೇಶದಿಂದ ಇತ್ತೀಚೆಗೆ ಹಿಂದಿರುಗಿದ ಯುವ ಪುರುಷ ರೋಗಿಯನ್ನು ವೈರಸ್ನ ಶಂಕಿತ ಪ್ರಕರಣವೆಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿತ್ತು. ರೋಗಿಯನ್ನು ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು …

Read More »

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯಸರ್ಕಾರ

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು, ಈಗಾಗಲೇ ಈ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ …

Read More »

ವರ್ತುಲ ರಸ್ತೆ ನಿರ್ಮಾಣದ ಸ್ಥಳ ಪರಿಶೀಲನೆ

ಹೊಸಪೇಟೆ: ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ನಗರದ ಹೊರವಲಯಕ್ಕೆ ಭೇಟಿ ನೀಡಿ ವರ್ತುಲ ರಸ್ತೆ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರೊಂದಿಗೆ ಸಂಚಾರ ಕೈಗೊಂಡ ಅವರು, ರಾಷ್ಟ್ರೀಯ ಹೆದ್ದಾರಿ 50ರಿಂದ ಹೊಸಪೇಟೆ ನಗರಕ್ಕೆ ಸಂಪರ್ಕಕ್ಕೆ ಅಗತ್ಯವಿರುವ ರಿಂಗ್ ರೋಡ್ ಮಾರ್ಗದ ಬಗ್ಗೆ ಚರ್ಚಿಸಿದರು. ದಿನೇದಿನೆ ಜನ ಸಂಪರ್ಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಅತ್ಯವಿರುವ ಸ್ಥಳ ಗುರುತಿಸುವುದರ ಬಗ್ಗೆ ಜಿಲ್ಲಾಧಿಕಾರಿಗಳು ಶಾಸಕರೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ …

Read More »