Breaking News

Breaking News

ಸಿಎಂ ಸಿದ್ದರಾಮಯ್ಯ ಕುರಿತು ಗುಡುಗಿದ ಸಿಟಿ ರವಿ

ಹುಬ್ಬಳ್ಳಿ: ಹೊಸ ಸಿಎಂ, ಹೊಸ ಸರ್ಕಾರನಾ ಅಂದ್ರೆ ಕಾಲ ನಿರ್ಣಯ ಮಾಡುತ್ತದೆ. ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್‌ ಮುಹೂರ್ತ ನಿಗದಿ ಮಾಡಿದೆ. ಹೊರಗಡೆ ಸಿದ್ದರಾಮಯ್ಯ ಅವರ ಹಿಂದೆ ಬಂಡೆಯಂತೆ ನಿಂತಿದ್ದೇವೆ ಅಂತಾರೆ. ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿಟಿ ರವಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಂದು ಡಜನ್‌ಗೂ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ. ಸಿಎಂ ಸಂಗೊಳ್ಳಿ …

Read More »

ಸೆಪ್ಟೆಂಬರ್ 13 ರಂದು ಪ್ರಗತಿ ಪರಿಶೀಲನಾ (ದಿಶಾ) ಸಭೆ

ಧಾರವಾಡ: ದಿಶಾ ಸಮಿತಿ ಅಧ್ಯಕ್ಷರಾದ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ಸೆಪ್ಟೆಂಬರ್ 13 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿದೆ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ …

Read More »

ನಿಯಮ ಉಲ್ಲಂಘಿಸಿದ ಪೋಲಿಸರ್ ಗೆ ದಂಡ

ಹುಬ್ಬಳ್ಳಿ: ಚೆನ್ನಮ್ಮ ವೃತ್ತದ ಬಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಡಿಸಿಪಿ ಸಿ.ಆರ್ ರವೀಶ್ ದಂಡ ವಿಧಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಕಾನ್ಸ್‌ಟೇಬಲ್‌ಗಳನ್ನು ತಡೆದು ದಂಡ ವಿಧಿಸುವಂತೆ ಡಿಸಿಪಿ ಸಿ.ಆ‌ರ್ ರವೀಶ್ ಅವರು ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ಜಾಕ್ಸನ್‌ ಡಿಸೋಜಾ ಅವರಿಗೆ ಸೂಚಿಸಿದ್ದಾರೆ. ಬಳಿಕ ಪಿಐ ಡಿಸೋಜಾ ಅವರು ನಿಯಮ ಉಲ್ಲಂಘಿಸಿದ ಪೊಲೀಸರಿಗೆ ದಂಡ ವಿಧಿಸಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ …

Read More »

ಸಿಎಂ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತೀದ್ದಾರೆ : ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ಸಿದ್ದರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ದರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಗೆಲುವು ಶತಸಿದ್ದ. ಈ ಒಂದು ಪ್ರಕರಣದಿಂದ ಸಿದ್ದರಾಮಯ್ಯನವರ ಗೌರವಯುತವಾಗಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದು ಅವರು ಭರವಸೆ …

Read More »

ಈದ್ಗಾ ಮೃದಾನದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿ ವಿಸರ್ಜನೆ ವಿದ್ಯುಕ್ತವಾಗಿ ಚಾಲನೆ

ಹುಬ್ಬಳ್ಳಿ : ಪಾಲಿಕೆಯಿಂದ ಮೂರು ದಿನಗಳ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿಯನ್ನು ಇಂದು ವಿಸರ್ಜನೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿದಾಯ ಹೇಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ವಿಸರ್ಜನೆ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು, ಸಕಲ ವಾದ್ಯ ವೈಭವದೊಂದಿಗೆ ಮೆರವಣಿಗೆ ಸಾಗಿದೆ. ಗಣಪತಿಯ ವಿಸರ್ಜನೆ ಮೆರವಣಿಗೆಗೆ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ, ಸಿ.ಟಿ.ರವಿ, ಮಹೇಶ ಟೆಂಗಿನಕಾಯಿ, ಶಂಕರಪಾಟೀಲ ಮುನೇನಕೊಪ್ಪ ,ಇನ್ನೂ ಸಾವಿರಾರು ಭಕ್ತರ ಸಮ್ಮುಖದಲ್ಲಿಯೇ ಅದ್ದೂರಿಯಾಗಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಅಲ್ಲದೇ …

Read More »

ಮುಡಾ ಹಗರಣ ಕುರಿತು ಪ್ರತಿಕ್ರಿಯಿಸಿದ ಟೆಂಗಿನಕಾಯಿ

ಹುಬ್ಬಳ್ಳಿ: ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ.ಈಗಾಗಲೇ ಕೋರ್ಟ್ ನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದ ವಾದ ವಿವಾದಗಳು ನಡೆಯುತ್ತಿದೆ. ಆದರೆ ವಿಚಾರಣೆ ನಡೆಯುತ್ತಿರುವಾಗಲೇ ಸಿಎಂ ಕುರ್ಚಿಗೆ ಬಹುತೇಕ ಕಾಂಗ್ರೆಸ್ ನಾಯಕರು ಟವಲ್ ಹಾಕಿರುವುದನ್ನು ನೋಡಿದರೇ …

Read More »

ಭಾರತ ಮತ್ತು ಯುಎಇ ಬಾಂಧವ್ಯ ವೃದ್ಧಿಗಾಗಿ ದ್ವಿಪಕ್ಷೀಯ ಮಾತುಕತೆ

ನವದೆಹಲಿ:‌ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್‌ ಖಾಲೀದ್‌ ಬಿನ್‌ ಝಾಯೆದ್‌ ಅಲ್‌ ನಹ್ಯಾನ್‌ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ. ಅಬು ಧಾಬಿ ಯುವರಾಜ ಶೇಖ್‌ ಖಾಲೀದ್‌ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ. ನವದೆಹಲಿಯಲ್ಲಿನ ಹೈದರಾಬಾದ್‌ ಹೌಸ್‌ ನಲ್ಲಿ ಯುವರಾಜ …

Read More »

ಮೃತ್ಯುಂಜಯ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಕೋನರಡ್ಡಿ ಭಾಗಿ

ನವಲಗುಂದ : ನವಲಗುಂದ ವಿಧಾನಸಭಾ ಮತಕ್ಷೇತ್ರ-69 ಅಣ್ಣಿಗೇರಿ ತಾಲೂಕಿನ ಸುಕ್ಷೇತ್ರ ಮಣಕವಾಡ ಗ್ರಾಮದ ಶ್ರೀ ಅನ್ನದಾನೀಶ್ವರ ಮಠದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮ. ನಿ. ಪ್ರ ಮೃತ್ಯುಂಜಯ ಮಹಾಸ್ವಾಮಿಗಳ 19ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು, ಶ್ರೀ ಮ. ನಿ. ಪ್ರ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಕೇಂದ್ರ ಸಚಿವರು, ಹಾಗೂ ಮಾಜಿ ಸಚಿವರು …

Read More »

ಸೆ.. 10 ರಂದು ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ

ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಜನಸಂಪರ್ಕ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಮತ್ತಿತರು ಆಗಮಿಸಲಿದ್ದಾರೆ. ಸೆ. 10 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.

Read More »

ಗಣೇಶನ ದರ್ಶನ ಪಡೆದ ಶಾಸಕ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕ್ಷೇತ್ರದ ವ್ಯಾಪ್ತಿಯ ವಾರ್ಡ ನಂ. 44 ರ ಆಕಾಶ ಪಾರ್ಕ್ ಗಜಾನನ ಯುವಕ ಮಂಡಳ ವತಿಯಿಂದ ಪ್ರತಿಷ್ಠಾಪಿಸಿದ ಶ್ರೀ ಗಜಮುಖನ ಆಶೀರ್ವಾದ ಪಡೆದರು. ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಮತಿ ಉಮಾ ಮುಕುಂದ, ಪ್ರಮುಖ ವಿನೋದ ಪಟವಾ, ವಿಜಯ ಪೂಜಾರ, ಶ್ರೀನಿವಾಸ ಕಟ್ಟಿಮನಿ ಹಾಗೂ ಯುವಕ ಮಂಡಳದ ಸದಸ್ಯರು ಉಪಸ್ಥಿತರಿದ್ದರು.

Read More »