Breaking News

Breaking News

ಪತ್ರಕರ್ತರ ಸೋಗಿನಲ್ಲಿ ಸುಲಿಗೆ; ಬೆಳಗಾವಿಯಲ್ಲಿ ನಾಲ್ವರು ಯೂಟ್ಯೂಬರ್‌ಗಳು ಅರೆಸ್ಟ್!

ಬೆಳಗಾವಿ: ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರಿಗೆ ಮೊದಲು ಗಾಂಜಾ ಪ್ಯಾಕೆಟ್ ನೀಡಿ, ಬಳಿಕ ಪೊಲೀಸರ ಹೆಸರಿನಲ್ಲಿ ಬೆದರಿಕೆ ಹಾಕಿದ ಆರೋಪಿಗಳು, ರಹಸ್ಯವಾಗಿ ಚಿತ್ರೀಕರಿಸಿದ ವಿಡಿಯೋ ತೋರಿಸಿ ಪ್ರಕರಣ ದಾಖಲಿಸದಂತೆ ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. …

Read More »

ತಿರುಪೆ ಶೋಕಿಗಾಗಿ ಲಾಂಗ್ ಹಿಡಿದು ರೀಲ್ಸ್ – ಬಿತ್ತು ಪೊಲೀಸ್ ಕೇಸ್!

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಯದ ವಾತಾವರಣ ಸೃಷ್ಟಿಸಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೆಜೆ ನಗರದ ತೌಸಿಫ್ ಖಾನ್ ಅಲಿಯಾಸ್ ಜಾದೂ (26) ಬಂಧಿತ ಆರೋಪಿ. ಈತ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ವಿಡಿಯೋ ವೈರಲ್ ಆಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು …

Read More »

ಜಮಖಂಡಿಯಲ್ಲಿ ಬಾರ್​​ ಮುಂದೆ ನಿಂತಿದ್ದ ಕಾರು ಸ್ಫೋಟ; ಎದೆ ಝಲ್ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಸಮೀಪದ ಬಾರ್‌ವೊಂದರ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಚದುರಿಹೋಗಿದ್ದು, ಸಮೀಪದ ಮಳಿಗೆಯ ಗೋಡೆಗಳ ಸಿಮೆಂಟ್ ಕಳಚಿ ಬಿದ್ದಿದೆ. ಕೂಲ್‌ಡ್ರಿಂಕ್ಸ್ ಬಾಟಲ್‌ಗಳು ಒಡೆದು ಸಾಕಷ್ಟು ನಷ್ಟ ಉಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಘಟನೆ ನಡೆದ …

Read More »

ಧಾರವಾಡ ಡಿಸಿಸಿ ಅಧ್ಯಕ್ಷರ ಆಯ್ಕೆ: ಅಲ್ತಾಫ್ ಹಳ್ಳೂರಿಗೆ ಮತ್ತೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

ಡಿಸಿಸಿ ಕುರ್ಚಿ ಕದನ: ಅಲ್ತಾಫ್ ಹಳ್ಳೂರುಗೆ ಮತ್ತೊಮ್ಮೆ ಪಟ್ಟಾಭಿಷೇಕವೇ..? ಸೂಕ್ತ ಆಕಾಂಕ್ಷಿಗಳ ಕೊರತೆ…? ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಹೈಕಮಾಂಡ್ ಮತ್ತೊಮ್ಮೆ ಅವಕಾಶವೇ..? ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಅಧ್ಯಕ್ಷ ಅಲ್ತಾಫ್ ಹಳ್ಳೂರನ್ನು ಮತ್ತೊಮ್ಮೆ ಮುಂದುವರಿಸಬೇಕೇ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕೇಳಿಬರುತ್ತಿದೆ… ಒಂದೆಡೆ ಅಲ್ತಾಫ್ ಹಳ್ಳೂರು ಅವರನ್ನು ಮತ್ತೆ ಡಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು …

Read More »

ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ.. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಕೇಂದ್ರದ ಮಹತ್ವದ ನಿರ್ಧಾರ..

ನವದೆಹಲಿ, ಜುಲೈ 25: ಕೇಂದ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ… ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಹೊಸ ಪೂರ್ಣಾವಧಿ ಶಿಕ್ಷಣ ಸಚಿವರ ನೇಮಕವಾಗುವವರೆಗೆ ಪ್ರಹ್ಲಾದ್ ಜೋಶಿ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ… ಪ್ರಹ್ಲಾದ್ ಜೋಶಿ ಅವರು ಪ್ರಸ್ತುತ …

Read More »

ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ರೌಡಿಶೀಟರ್ ಬಂಧನ

ಬೆಂಗಳೂರು : ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಧುಸೂದನ್ (33) ಎಂದು ಗುರುತಿಸಲಾಗಿದೆ. ಸಹಕಾರ ನಗರದ ಜಿಕೆವಿಕೆ ರಸ್ತೆಯ ಬಳಿ ಆರೋಪಿಯು ಕೈಯಲ್ಲಿ ಲಾಂಗ್ ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಬಗ್ಗೆ ಸಿಸಿಬಿಯ ಸಂಘಟಿತ ಅಪರಾಧ ದಳಕ್ಕೆ (ಪೂರ್ವ) ಖಚಿತ ಮಾಹಿತಿ ಲಭಿಸಿತ್ತು.ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ …

Read More »

ಗಾಂಜಾ ಮಾರಲು ಬಂದಿದ್ದ ಕೊ*ಲೆ ಆರೋಪಿ ಅರೆಸ್ಟ್!

ಬೆಳಗಾವಿಯಲ್ಲಿ ಕೊಲೆ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಹಳೇ ಆರೋಪಿ ಆಕಾಶ ದಿಲೀಪ್ ದೊಡಮನಿಯನ್ನು ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹80 ಸಾವಿರ ಮೌಲ್ಯದ ಗಾಂಜಾ, ₹11 ಸಾವಿರ ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆಕಾಶ ವಿರುದ್ಧ ಈ ಹಿಂದೆ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಆತ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ. ಖಚಿತ …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಳಗಟ್ಟ ಗ್ರಾಮದಲ್ಲಿ ನಡೆದಿದೆ. ಗುಳಗಟ್ಟ ಗ್ರಾಮದ ನಿವಾಸಿ ರುದ್ರೇಗೌಡ(57) ಕೊಲೆಯಾದವರು ಎಂದು ಹೇಳಲಾಗಿದೆ. ಕಳೆದ ರಾತ್ರಿ ಅವರನ್ನು ಕೊಲೆ ಮಾಡಲಾಗಿದೆ.ಕೊಲೆ ಮಾಡಿದ ನಂತರ ಮೃತದೇಹದ ಮೇಲೆ ಸ್ಕೂಟಿ ಎಸೆದಿದ್ದಾರೆ. ಟ್ರಾನ್ಸ್ಫಾರ್ಮರ್ ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆಯಾಗಿತ್ತು ಎನ್ನಲಾಗಿದೆ. ಪಕ್ಕದ ಜಮೀನಿನ ಮಾಲೀಕನ ಜೊತೆಗೆ ಗಲಾಟೆ ನಡೆದಿದ್ದು, ಇದೇ ವಿಚಾರಕ್ಕೆ ರುದ್ರೇಗೌಡ ಕೊಲೆಯಾಗಿರುವ …

Read More »

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು, ರೌಡಿಶೀಟರ್‌ಗೆ ಮಚ್ಚಿನಿಂದ ಹಲ್ಲೆ

ಮಂಗಳೂರಿನ ಲಾಲ್‌ಬಾಗ್‌ ಸಿಗ್ನಲ್‌ ಬಳಿ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಕುತ್ತಿಗೆಗೆ ಗಂಭೀರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಆರಂಭಿಸಿದ್ದಾರೆ. ವಿಕ್ಕಿ ಬಪ್ಪಲ್ ವಿರುದ್ಧ ಈ ಹಿಂದೆಯೇ ರೌಡಿಶೀಟ್ ತೆರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಮನೆಯೊಂದರ ಮೇಲೆ …

Read More »

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಜಿರಳೆ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಮಾಹಿತಿಯನ್ನು ದೃಢಪಡಿಸುವ ಅಧಿಕೃತ ಪ್ರಕಟಣೆ ಇಲ್ಲ. ಈ ನಡುವೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಸಿಜೆಪಿ ವಕ್ತಾರರ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಶಿಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು …

Read More »