Breaking News

Breaking News

ರಾಜ್ಯದಲ್ಲಿ ಇಂದು 169 ಡೆಂಗ್ಯೂ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಡೆಂಗ್ಯೂ ಕೇಸ್ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 169 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 82, ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಮೂರು, ಕೋಲಾರ, ಶಿವಮೊಗ್ಗ, ವಿಜಯನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 2 ಕೇಸ್ ಪತ್ತೆಯಾಗಿರುವುದಾಗಿ ಹೇಳಿದೆ. ಚಿಕ್ಕಬಳ್ಳಾಪುರ 3, ತುಮಕೂರು 8, ಚಿತ್ರದುರ್ಗ, …

Read More »

ಬಸ್ ಗೆ ವ್ಯಾನ್ ಡಿಕ್ಕಿ: 12 ಜನರು ಸಾವು

ಹತ್ರಾಸ್ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 93 ರಲ್ಲಿ ಶುಕ್ರವಾರ ರಸ್ತೆ ಸಾರಿಗೆ ಬಸ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಇತರ ಹದಿನಾರು ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ್ರಾ ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಓವರ್ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ …

Read More »

ಮುಡಾ ಹಗರಣ ಡೈವರ್ಟ್ ಮಾಡೋಕೆ ದರ್ಶನ ಜೈಲು ಪೋಟೋ ವೈರಲ್: ಸಚಿವ ಜೋಶಿ ಕಿಡಿ

ಹುಬ್ಬಳ್ಳಿ: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣವನ್ನು ಡೈವರ್ಟ್ ಮಾಡುವ ಹಾಗೂ ಮಾಧ್ಯಮ ಮುಂದೆ ಮುಡಾ ಹಗರಣದಿಂದ ತಪ್ಪಿಸಿಕೊಳ್ಳುವ ದುರಾಲೋಚನೆಯಿಂದ ದರ್ಶನ ಪೋಟೋ ವೈರಲ್ ಮಾಡುವ ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದ ದರ್ಶನ ಪೋಟೋ ಹೊರಗಡೆ ಬಿಟ್ಟಿರುವುದು ಕೂಡ ರಾಜ್ಯ ಸರ್ಕಾರವೇ. ದರ್ಶನ ಪ್ರಕರಣ ಸಾಕಷ್ಟು ಚರ್ಚೆಗೆ ಬಂದಿದ್ದ …

Read More »

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಚಿರತೆ ಪ್ರತ್ಯಕ್ಷ

ಧಾರವಾಡ : ಧಾರವಾಡದಲ್ಲಿ ಕಾಡಿನಿಂದ ನಾಡಿಗೆ ಆಗಾಗ ಕಾಡು ಪ್ರಾಣಿಗಳು ಬಂದು ಜನರಲ್ಲಿ ಆತಂಕ ಮೂಡಿಸುತ್ತವೆ ಇದೀಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಒಂದು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಹೌದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯು, ನಂತರ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. …

Read More »

ಗಣೇಶನ ಹಬ್ಬಕ್ಕೆ ಧಾರವಾಡದಲ್ಲಿ ಪಟಾಕಿ ವ್ಯಾಪಾರ ಜೋರು

ಧಾರವಾಡ: ಈ ಗಣೇಶನ ಹಬ್ಬಕ್ಕೆ ಧಾರವಾಡದಲ್ಲಿ ಪಟಾಕಿ ವ್ಯಾಪಾರ ಜೋರಾಗಿಯೇ ನಡೆದಿದೆ. ಪ್ರತಿವರ್ಷ ಧಾರವಾಡದ ಕಡಪಾ ಮೈದಾನದಲ್ಲಿ ಪಟಾಕಿ ವ್ಯಾಪಾರಸ್ಥರು ಪಟಾಕಿ ತಂದು ಮಾರಾಟ ಮಾಡುತ್ತಾರೆ. ಪ್ರಸಕ್ತ ವರ್ಷ ಕೂಡ ಸುಮಾರು ಆರೇಳು ಅಂಗಡಿಗಳನ್ನು ತೆರೆಯಲಾಗಿದ್ದು, ಜನ ಪಟಾಕಿ ಖರೀದಿಗೆ ಮುಗಿಬಿದ್ದಿದ್ದಾರೆ. ಗೋವಾ ಪಟಾಕಿ, ಚಟಪಟ ಪಟಾಕಿ, ಕುಡಿಕೆ, ಚಕ್ರ, ಆಟಂಬಾಂಬ್ ಸೇರಿದಂತೆ ಇತ್ಯಾದಿ ಪಟಾಕಿಗಳ ವ್ಯಾಪಾರ ಜೋರಾಗಿ ನಡೆದಿದೆ. ಗಣೇಶನ ಹಬ್ಬದ ಸಂಭ್ರಮ ಜಿಲ್ಲೆಯಾದ್ಯಂತ ಕಳೆಗಟ್ಟಿದೆ.

Read More »

2 ಲಕ್ಷ ಸಬ್ಸಿಡಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿ ಭೂಮಿ ಬೆಂಬಲಿಸಲು ಹೊಸ ಉಪಕ್ರಮ

ನವದೆಹಲಿ: ಸಣ್ಣ ರೈತರಿಗೆ ಗಮನಾರ್ಹ ಪ್ರೋತ್ಸಾಹವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 5 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಕೃಷಿ ಮಾಡುವವರನ್ನು ಬೆಂಬಲಿಸಲು ಹೊಸ ಉಪಕ್ರಮವನ್ನು ಪ್ರಾರಂಭಿಸಿವೆ. ಉದ್ಯೋಗ ಖಾತರಿ ಯೋಜನೆಯ ಭಾಗವಾಗಿ, ರೈತರು ಈಗ 16 ರೀತಿಯ ತೋಟಗಾರಿಕೆ ನೆಡುತೋಪು ಸಸಿಗಳನ್ನು ಉಚಿತವಾಗಿ ಪಡೆಯಲು ಅರ್ಹರಾಗಿರುತ್ತಾರೆ. ವಿಶೇಷವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲವಾಗಲಿದೆ ಈ ಸಸಿಗಳನ್ನು ಯಾವುದೇ ವೆಚ್ಚವಿಲ್ಲದೆ ಒದಗಿಸುವ ಮೂಲಕ, ರೈತರು ಎದುರಿಸುತ್ತಿರುವ …

Read More »

ಜಮ್ಮುಮತ್ತುಕಾಶ್ಮೀರ ಚುನಾವಣೆ: ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದ್ದು, ಇದೀಗ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಶುಕ್ರವಾರ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಪಕ್ಷದ ಇತರ ಮುಖಂಡರು ಕೂಡ ಹಾಜರಿದ್ದರು. ಪ್ರಣಾಳಿಕೆ ಬಿಡುಗಡೆ …

Read More »

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳಲು ವಿಶೇಷ ಬಸ್ ಗಳ ವ್ಯವಸ್ಥೆ

ಬೆಂಗಳೂರು : ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 200 ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ನಲ್ಲಿ ಜನಸಂದಣಿ ಹೆಚ್ಚಾಗಿದೆ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆ ವಿವಿಧ ಜಿಲ್ಲೆಗಳಿಗೆ ತೆರಳಲು …

Read More »

ಕ್ಷಯ ರೋಗದ ಹೊಸ ಚಿಕಿತ್ಸಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ : 2025ರ ವೇಳೆಗೆ ದೇಶವನ್ನ ಕ್ಷಯರೋಗದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರೀಯ ಟಿಬಿ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಬಹು ಔಷಧ ನಿರೋಧಕ ಕ್ಷಯರೋಗಕ್ಕೆ ಹೊಸ ಚಿಕಿತ್ಸೆಯಾದ ಬಿ ಪಾಲ್ಮ್ ನಿಯಮವನ್ನ ಪರಿಚಯಿಸಲು ಅನುಮೋದನೆ ನೀಡಿದೆ. ಈ ನಿಯಮಾವಳಿಯು ಬೆಡಾಕ್ವಿಲಿನ್ ಮತ್ತು ಲಿನೆಜೋಲಿಡ್ ಸಂಯೋಜನೆಯಲ್ಲಿ ಪ್ರೆಟೊಮನಿಡ್ ಎಂಬ ಹೊಸ ಟಿಬಿ ವಿರೋಧಿ ಔಷಧವನ್ನ ಒಳಗೊಂಡಿದೆ. ಪ್ರೆಟೊಮನಿಡ್ ನ್ನು ಈ ಹಿಂದೆ ಭಾರತದಲ್ಲಿ ಬಳಸಲು ಸೆಂಟ್ರಲ್ …

Read More »

ಕಾಂಗ್ರೆಸ್ ಬಗ್ಗೆ ಟೀಕಿಸಿದ ಟೆಂಗಿನಕಾಯಿ

ಹುಬ್ಬಳ್ಳಿ: ರಾಜ್ಯದದಲ್ಲಿ ಅವಧಿಗೆ ಮುನ್ನ ಸರಕಾರ ಬಿಳ್ಳಬಹುದು ಎಂಬ ಪರೋಕ್ಷವಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮನೆವೊಂದು ಮೂರು ಬಾಗಿಲು ಆಗಿದೆ. ಇನ್ನೂ ಮುಖ್ಯಮಂತ್ರಿ ಗಾಧಿ ಖಾಲಿ ಆಗಿಲ್ಲ. ಆದರೆ ಯಾರು ಯಾರು ಟವಲ್ ಹಾಕುವ ಕೆಲಸ ಮಾಡತಾ ಇದ್ದಾರೆ. ಇದು ಸಮಸ್ಯೆಗಳ ಸುರಿಮಾಲೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಸ್ಯೆಗಳನ್ನ ಸರಕಾರ ಎದುರಿಸುತ್ತಿದೆ. ಅವರ ಅವರೇ ಕಚ್ಚಾಡುತ್ತಿದ್ದಾರೆಂದು …

Read More »