Shaikh BigTv
September 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಐತಿಹಾಸಿಕ ರಾಣಿ ಚನ್ನಮ್ಮ ಮೈದಾನದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿರುವ ಶ್ರೀ ಗಣೇಶ ಹಬ್ಬದ ಅಂಗವಾಗಿ, ಇಂದು ರಾಣಿ ಚನ್ನಮ್ಮ ಮೈದಾನ ಗಜಾನನ ಮಹಾಮಂಡಳದಿಂದ ಹಾಲಗಂಬ ಪೂಜೆಯನ್ನು ನೆರವೇರಿಸಲಾಯಿತು. ರಾಣಿ ಚನ್ನಮ್ಮ ಮೈದಾನದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಠಾಪಿಸಲ್ಪಡುವ ಗಣೇಶನಿಗೆ ವಿಶೇಷ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಶಾಸಕ ಮಹೇಶ್ ಟೆಂಗಿನಕಾಯಿ, ರಾಣಿ ಚನ್ನಮ್ಮ ಮೈದಾನ ಗಜಾನನ ಮಹಾಮಂಡಳದ ಅಧ್ಯಕ್ಷ ಸಂಜೀವ್ ಬಡಸ್ಕರ್, ಸ್ವಾಗತ …
Read More »
BigTv News
September 6, 2024
Breaking News
ಬೆಂಗಳೂರು: ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು …
Read More »
bigtvnews22
September 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಹದಾಯಿ ಯೋಜನೆ ಜಾರಿಯಲ್ಲಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುವ ವಿಚಾರ, ಮಹದಾಯಿ ಯೋಜನೆ ಜಾರಿಯಲ್ಲಿ ಯಾರ ಪಾತ್ರ ಎಷ್ಟು ಇದೆ ಅಂತಾ ಗೊತ್ತು. ಮಹದಾಯಿ ಯೋಜನೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದು ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರಕಾರ. ಕರ್ನಾಟಕದಲ್ಲಿ ಪ್ರಲ್ಹಾದ್ ಜೋಶಿ ಅವರು ಬಹಳ ಪ್ರಯತ್ನ ಮಾಡಿದ್ದಾರೆ. ಒಂದು ತಾರ್ಕಿಕ ಅಂತ್ಯ ಹಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಇವತ್ತು …
Read More »
BigTv News
September 6, 2024
Breaking News
ಬೆಂಗಳೂರು: ಸುಮಾರು ಮೂರು ರಾಜ್ಯಗಳಲ್ಲಿ ಅವಾಂತರಗಳ ಸೃಷ್ಟಿಗೆ ಕಾರಣವಾದ ಬಂಗಾಳಕೊಲ್ಲಿಯಲ್ಲಿನ ಆಸ್ನಾ ಚಂಡಮಾರುತದ ತೀವ್ರತೆ ಮುಂದಿನ 48 ಗಂಟೆಗಳವರೆಗೂ ಮುಂದುವರೆಯಲಿದೆ. ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಣೆ ಆಗಿದ್ದು ಇದರ ಪ್ರಭಾವದಿಂದ ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತು ಪರಿಣಾಮ ಕರ್ನಾಟಕದಲ್ಲಿ ಮುಂದಿನ ಮೂರು ದಿನ ಜೋರು ಮಳೆ ಆಗಲಿದೆ ಒಟ್ಟು ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ …
Read More »
BigTv News
September 6, 2024
Breaking News
ಬಾಗಲಕೋಟೆ : ಕಳೆದ ಕೆಲವು ತಿಂಗಳುಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಮಹಿಳೆ ಒಬ್ಬಳು ಗರ್ಭಪಾತದಿಂದ ಸಾವನ್ನಪ್ಪಿದ್ದ ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೆ ಮಹಾಲಿಂಗಪುರದಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದ್ದು, ಹೆಣ್ಣು ಮಗುವೆಂದು ಗರ್ಭಪಾತ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರದ ಮಹಿಳೆ ಸಾವು ಕೇಸ್ ಪ್ರಕರಣ ಮಾಸುವ ಮುನ್ನವೇ …
Read More »
BigTv News
September 6, 2024
Breaking News
ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಎಂಥದ್ದೆ ಆತಂಕ ಎದುರಾದರೂ ಅದನ್ನು ಎದುರಿಸಿ ನಿಲ್ಲುವ ಮೂಲಕ ಪ್ರಜಾಪ್ರಭುತ್ವ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸೆ.15ರಂದು ವಿಶ್ವಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬೀದರ್ ನಿಂದ ಚಾಮರಾಜನಗರದ ತನಕ 2500 ಕಿ.ಮೀ. ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮಾಚರಣೆ ಯಶಸ್ವಿಯಾಗಲಿ ಎಂದರು. ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ ಅವರು ಕಡಿಮೆ …
Read More »
BigTv News
September 6, 2024
Breaking News
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆವು. ಅದಕ್ಕೆ ಮುಖ್ಯಮಂತ್ರಿಗಳು ಮತ್ತು ಸಚಿವರು ಸ್ಪಂದಿಸಿದ್ದು, ಮುಂದಿನ …
Read More »
BigTv News
September 6, 2024
Breaking News
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸಿದ್ದು, ಆದೇಶ ಪಡೆದ ಅಭ್ಯರ್ಥಿಗಳಿಗೆ ಇನ್ನೂ ಹದಿನೈದು ದಿನಗಳ ಒಳಗಾಗಿ ವರದಿ ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸರಕಾರವು ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ …
Read More »
BigTv News
September 6, 2024
Breaking News
ಬೆಂಗಳೂರು: ಸೆ. 7 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿ. 7 ರ ಶನಿವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Read More »
BigTv News
September 6, 2024
Breaking News
ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ …
Read More »