Breaking News

Breaking News

ಎಪಿಎಂಸಿ ಕಾಯ್ದೆ ಮರುಸ್ಥಾಪನೆ: 4 ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ

ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಸೆ.5ರ ಗುರುವಾರದಂದು …

Read More »

ಗಣೇಶೋತ್ಸವ: ಕರಿಗಡಬಿನಲ್ಲಿ ಅರಳಿದ ಗಣೇಶ

ಕೋಲಾರ : ಭಾರತದ ಜನಪ್ರಿಯ ಹಬ್ಬಗಳಲ್ಲಿ ಗಣೇಶ ಚತುರ್ಥಿಯೂ ಒಂದು. ಸಂಪತ್ತು ಮತ್ತು ಬುದ್ದಿವಂತಿಕೆಯ ದೇವರು ಗಣೇಶನನ್ನು ಸ್ತುತಿಸುವ ಹಬ್ಬ. ದೇಶದೆಲ್ಲೆಡೆ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ. ಹಾಗೆ ಕೋಲಾರದಲ್ಲಿ ಸಂಕಷ್ಟಹರ ಗಣಪತಿ ದೇವಾಲಯದಲ್ಲಿ ಕರಿಗಡಬು ಗಣೇಶ, 10001 ಕರಿಗಡುಬು ಬಳಸಿ‌ ಗಣೇಶ ತಯಾರಿ ಸುಮಾರು 15 ಅಡಿ ಎತ್ತರದ ಕರಿಗಡಬು ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ, ಗಣೇಶನನ್ನು ನೋಡಲು ಭಕ್ತರ ದಂಡು, ವಿಶೇಷವಾಗಿ ನಿರ್ಮಾಣ ಮಾಡಿರುವ ಗಣೇಶ ಗಣೇಶ ಹಬ್ಬದ …

Read More »

ಮ್ಯಾನ್ಮಾರ್ ನಲ್ಲಿ ವೈಮಾನಿಕ ದಾಳಿ: 11 ನಾಗರಿಕರು ಸಾವು

ಯಾಂಗಾನ್ : ಉತ್ತರದ ಶಾನ್ ರಾಜ್ಯದಲ್ಲಿ ಮ್ಯಾನ್ಯಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 11 ನಾಗರಿಕರು ಸಾವನ್ನಪ್ಪಿದ್ದು ಇತರ 11 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಶಾನ್ ರಾಜ್ಯದ ನಮ್ಕಾಮ್ ನಗರದ ಎರಡು ಪ್ರದೇಶಗಳ ಮೇಲೆ ಸೇನೆಯ ವಿಮಾನಗಳು ಬಾಂಬ್ ದಾಳಿ ನಡೆಸಿವೆ ಎಂದು ಸೇನಾಡಳಿತದ ವಿರುದ್ಧ ಹೋರಾಡುತ್ತಿರುವ ಜನಾಂಗೀಯ ಅಲ್ಪಸಂಖ್ಯಾತ ಸಶಸ್ತ್ರ ಹೋರಾಟಗಾರರ ಗುಂಪು ತಾಂಗ್ ನ್ಯಾಷನಲ್ ಲಿಬರೇಷನ್ ಆರ್ಮಿ ವಕ್ತಾರೆ …

Read More »

ಹರಿಯಾಣ ಚುನಾವಣೆ: ಜುಲಾನಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ವಿನೇಶ್ ಫೋಗಟ್ ಗೆ ಟಿಕೆಟ್

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಗೆ 32 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗಡಿ ಸಂಪ್ಲಾ ಕಿಲೋಯ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಅವರನ್ನು ಹೊಡಲ್ ಹಾಗೂ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಜುಲಾನಾ ಕ್ಷೇತ್ರದಿಂದ ಉಮೇದುವಾರರನ್ನಾಗಿ ಮಾಡಿದೆ, ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ …

Read More »

ಗಣೇಶನ ಸ್ವಾಗತಕ್ಕೆ ಸಿದ್ಧತೆಗಳು ಜೋರು: ಮಾರುಕಟ್ಟೆಯಲ್ಲಿ ಸಂಭ್ರಮ

ಕೊಪ್ಪಳ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಪ್ರಮುಖ ರಸ್ತೆಗಳಲ್ಲಿ ಹಾಗೂ ಬಡಾವಣೆಗಳಲ್ಲಿ ತರಹೇವಾರಿ ಬಣ್ಣಗಳ ವಿದ್ಯುತ್‌ ದೀಪಗಳ ಹೊಳಪು ಕಂಡುಬರುತ್ತಿದೆ. ಎಲ್ಲೆಡೆಯೂ ಗಣೇಶ ಮೂರ್ತಿಗಳ ಮಾರಾಟ ಹಾಗೂ ಖರೀದಿಯ ಉತ್ಸಾಹವೂ ಇದೆ. ಶ್ರಾವಣ ಮಾಸ ಮುಗಿದ ತಕ್ಷಣವೇ ಬರುವ ಮೊದಲ ಹಬ್ಬ ಗೌರಿ ಹಾಗೂ ಗಣೇಶನ ಪ್ರತಿಷ್ಠಾಪನೆ ಜನರಲ್ಲಿ ಹುಮ್ಮಸ್ಸು ಮೂಡಿಸಿದೆ, ಅದರಲ್ಲಿಯೂ ವಿಶೇಷವಾಗಿ ಯುವಜನತೆಯಲ್ಲಿ ಗಣಪತಿ ಹಬ್ಬ ಹಬ್ಬದ ಹುಮಸ್ಸು ನೂರ್ಮಡಿಯಾಗಿದೆ. ಹಬ್ಬದ ತಿಂಗಳು ಮೊದಲೇ ಸಾರ್ವಜನಿಕರಿಂದ ಹಾಗೂ ಬಡಾವಣೆಯ …

Read More »

ಸಿಡ್ನಿಯ ವಾಯುವ್ಯ ಭಾಗದಲ್ಲಿ ಭೂಕಂಪ

ಸಿಡ್ನಿ: ಸಿಡ್ನಿಯ ವಾಯುವ್ಯ ಭಾಗದಲ್ಲಿ ಶನಿವಾರ ಬೆಳಿಗ್ಗೆ 4.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸಾವಿರಾರು ಜನರು ವಿದ್ಯುತ್ ಕಡಿತ ಅನುಭವಿಸಿದ್ದಾರೆ. ನ್ಯೂ ಸೌತ್ ವೇಲ್ಸ್ ರಾಜ್ಯದ ಅಪ್ಪರ್ ಹಂಟರ್ ಪ್ರದೇಶದ ಸಿಡ್ನಿಯಿಂದ ವಾಯುವ್ಯಕ್ಕೆ ಸುಮಾರು 170 ಕಿ.ಮೀ ದೂರದಲ್ಲಿರುವ ಮಸ್ವೆಲ್ಬ್ರೂಕ್ ಪಟ್ಟಣದ ಬಳಿ ಸ್ಥಳೀಯ ಸಮಯ ಬೆಳಿಗ್ಗೆ 5: 58 ಕ್ಕೆ ಭೂಕಂಪನ ಸಂಭವಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐದು ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ …

Read More »

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣ: 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, …

Read More »

ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಅನುಷಾ ಗಂಭೀರವಾಗಿ ಗಾಯಗೊಂಡಿದ್ದರು ಆದರೆ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ, ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Read More »

ಗಣೇಶ, ಈದಮಿಲಾದ್ ಹಬ್ಬದ ನಿಮಿತ್ತ ಆದೇಶ ಹೊರಡಿಸಿದ ಧಾರವಾಡ ಜಿಲ್ಲಾಧಿಕಾರಿ

ಧಾರವಾಡ : ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಗಣೇಶ ಹಬ್ಬ ಮತ್ತು ಈದ್-ಮಿಲಾದ್ ಹಬ್ಬದ ಮುನ್ನೆಚ್ಚರಿಕೆ ಕ್ರಮಗಳು, ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾ ದಂಡಾಧಿಕಾರಿಗಳಾದ ದಿವ್ಯ ಪ್ರಭು (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಈ ಆದೇಶ ನೀಡಿದವರು, ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಸೆ. 10 ರಂದು ರಾತ್ರಿ 11.59 ರಿಂದ. …

Read More »

ಮಣಿಪುರದಲ್ಲಿ ಕುಕಿ ಮತ್ತು ಮೈಟಿ ಗುಂಪುಗಳ ನಡುವೆ ಗುಂಡಿನ ದಾಳಿ: ಐವರು ಸಾವು

ನವದೆಹಲಿ: ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರದ ಮಧ್ಯೆ ಜಿರಿಬಾಮ್ ಜಿಲ್ಲೆಯ ಕುಕಿ ಮತ್ತು ಮೈಟಿ ಗುಂಪುಗಳ ನಡುವೆ ಶನಿವಾರ ಮುಂಜಾನೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ನಿದ್ರೆಯಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ನಂತರದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಶಸ್ತ್ರ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ನಿರ್ಜನ ಪ್ರದೇಶದಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಉಗ್ರರು …

Read More »