BigTv News
July 26, 2026
Breaking News
ಬೆಂಗಳೂರು: ಮದುವೆಯಾಗಿ ಎರಡು ವರ್ಷವೂ ಕಳೆದಿರದ ಯುವತಿ, ಏಳು ತಿಂಗಳ ಹಸುಗೂಸನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪರಪ್ಪನ ಅಗ್ರಹಾರದ ರಾಯಸಂದ್ರದಲ್ಲಿ ನಡೆದಿದೆ. ಸಾನಿಕ ಗೌಡ ಮೃತ ದುರ್ದೈವಿ. ಬಾಣಂತನಕ್ಕಾಗಿ ತವರು ಮನೆಗೆ ಬಂದಿದ್ದ ಸಾನಿಕ, ಪತಿ ಶರಣ್ ಗೌಡನಿಗೆ ವಿಡಿಯೋ ಕರೆ ಮಾಡಿದ ಬಳಿಕ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಮಾತನಾಡಿದ್ದ ಆಡಿಯೋ ಕ್ಲಿಪ್ ಅನ್ನು ಸಾನಿಕಗೆ ಕಳುಹಿಸಿದ್ದರಿಂದ …
Read More »
BigTv News
July 26, 2026
Breaking News
ತುಮಕೂರು: ತವರು ಮನೆಯ ಆಸ್ತಿ ವಿವಾದದ ಹಿನ್ನೆಲೆ ಸಂಬಂಧಿಕರೇ ತಂದೆ ಹಾಗೂ ಮಗಳ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಉಪ್ಪಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮಹಾಲಿಂಗಯ್ಯ ಮತ್ತು ಅವರ ಮಗಳು ಕಲಾವತಿ ತವರು ಮನೆಯ ಆಸ್ತಿ ಹಕ್ಕಿಗಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದರು. ಪ್ರಕರಣದಲ್ಲಿ ತೀರ್ಪು ತಮ್ಮ ವಿರುದ್ಧ ಬರುವ ಭೀತಿಯಿಂದ ಆರೋಪಿಗಳು ಕಲ್ಲೇಶ, ಮಂಜುನಾಥ, ನಾಗರಾಜು, ಪುಷ್ಪಾವತಿ, ಭಾಗ್ಯಮ್ಮ ಹಾಗೂ ರಶ್ಮಿ ಅವರು ದಾಳಿ …
Read More »
BigTv News
July 26, 2026
Breaking News
ಬೆಳಗಾವಿ: ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ಅವರಿಗೆ ಮೊದಲು ಗಾಂಜಾ ಪ್ಯಾಕೆಟ್ ನೀಡಿ, ಬಳಿಕ ಪೊಲೀಸರ ಹೆಸರಿನಲ್ಲಿ ಬೆದರಿಕೆ ಹಾಕಿದ ಆರೋಪಿಗಳು, ರಹಸ್ಯವಾಗಿ ಚಿತ್ರೀಕರಿಸಿದ ವಿಡಿಯೋ ತೋರಿಸಿ ಪ್ರಕರಣ ದಾಖಲಿಸದಂತೆ ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. …
Read More »
BigTv News
July 26, 2026
Breaking News
ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಯದ ವಾತಾವರಣ ಸೃಷ್ಟಿಸಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೆಜೆ ನಗರದ ತೌಸಿಫ್ ಖಾನ್ ಅಲಿಯಾಸ್ ಜಾದೂ (26) ಬಂಧಿತ ಆರೋಪಿ. ಈತ ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದನು. ವಿಡಿಯೋ ವೈರಲ್ ಆಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು …
Read More »
BigTv News
July 26, 2026
Breaking News
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಸಮೀಪದ ಬಾರ್‌ವೊಂದರ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರಿನ ಬಿಡಿಭಾಗಗಳು ಚದುರಿಹೋಗಿದ್ದು, ಸಮೀಪದ ಮಳಿಗೆಯ ಗೋಡೆಗಳ ಸಿಮೆಂಟ್ ಕಳಚಿ ಬಿದ್ದಿದೆ. ಕೂಲ್‌ಡ್ರಿಂಕ್ಸ್ ಬಾಟಲ್‌ಗಳು ಒಡೆದು ಸಾಕಷ್ಟು ನಷ್ಟ ಉಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಘಟನೆ ನಡೆದ …
Read More »
Shaikh BigTv
July 25, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಡಿಸಿಸಿ ಕುರ್ಚಿ ಕದನ: ಅಲ್ತಾಫ್ ಹಳ್ಳೂರುಗೆ ಮತ್ತೊಮ್ಮೆ ಪಟ್ಟಾಭಿಷೇಕವೇ..? ಸೂಕ್ತ ಆಕಾಂಕ್ಷಿಗಳ ಕೊರತೆ…? ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಹೈಕಮಾಂಡ್ ಮತ್ತೊಮ್ಮೆ ಅವಕಾಶವೇ..? ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಅಧ್ಯಕ್ಷ ಅಲ್ತಾಫ್ ಹಳ್ಳೂರನ್ನು ಮತ್ತೊಮ್ಮೆ ಮುಂದುವರಿಸಬೇಕೇ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕೇಳಿಬರುತ್ತಿದೆ… ಒಂದೆಡೆ ಅಲ್ತಾಫ್ ಹಳ್ಳೂರು ಅವರನ್ನು ಮತ್ತೆ ಡಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು …
Read More »
Shaikh BigTv
July 25, 2026
Breaking News, ರಾಜಕೀಯ ಸುದ್ದಿ
ನವದೆಹಲಿ, ಜುಲೈ 25: ಕೇಂದ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ… ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಹೊಸ ಪೂರ್ಣಾವಧಿ ಶಿಕ್ಷಣ ಸಚಿವರ ನೇಮಕವಾಗುವವರೆಗೆ ಪ್ರಹ್ಲಾದ್ ಜೋಶಿ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ… ಪ್ರಹ್ಲಾದ್ ಜೋಶಿ ಅವರು ಪ್ರಸ್ತುತ …
Read More »
BigTv News
July 25, 2026
Breaking News
ಬೆಂಗಳೂರು : ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಧುಸೂದನ್ (33) ಎಂದು ಗುರುತಿಸಲಾಗಿದೆ. ಸಹಕಾರ ನಗರದ ಜಿಕೆವಿಕೆ ರಸ್ತೆಯ ಬಳಿ ಆರೋಪಿಯು ಕೈಯಲ್ಲಿ ಲಾಂಗ್ ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಬಗ್ಗೆ ಸಿಸಿಬಿಯ ಸಂಘಟಿತ ಅಪರಾಧ ದಳಕ್ಕೆ (ಪೂರ್ವ) ಖಚಿತ ಮಾಹಿತಿ ಲಭಿಸಿತ್ತು.ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ …
Read More »
BigTv News
July 25, 2026
Breaking News
ಬೆಳಗಾವಿಯಲ್ಲಿ ಕೊಲೆ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಹಳೇ ಆರೋಪಿ ಆಕಾಶ ದಿಲೀಪ್ ದೊಡಮನಿಯನ್ನು ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹80 ಸಾವಿರ ಮೌಲ್ಯದ ಗಾಂಜಾ, ₹11 ಸಾವಿರ ನಗದು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆಕಾಶ ವಿರುದ್ಧ ಈ ಹಿಂದೆ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿದ್ದು, ಆತ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ. ಖಚಿತ …
Read More »
BigTv News
July 25, 2026
Breaking News
ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗುಳಗಟ್ಟ ಗ್ರಾಮದಲ್ಲಿ ನಡೆದಿದೆ. ಗುಳಗಟ್ಟ ಗ್ರಾಮದ ನಿವಾಸಿ ರುದ್ರೇಗೌಡ(57) ಕೊಲೆಯಾದವರು ಎಂದು ಹೇಳಲಾಗಿದೆ. ಕಳೆದ ರಾತ್ರಿ ಅವರನ್ನು ಕೊಲೆ ಮಾಡಲಾಗಿದೆ.ಕೊಲೆ ಮಾಡಿದ ನಂತರ ಮೃತದೇಹದ ಮೇಲೆ ಸ್ಕೂಟಿ ಎಸೆದಿದ್ದಾರೆ. ಟ್ರಾನ್ಸ್ಫಾರ್ಮರ್ ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆಯಾಗಿತ್ತು ಎನ್ನಲಾಗಿದೆ. ಪಕ್ಕದ ಜಮೀನಿನ ಮಾಲೀಕನ ಜೊತೆಗೆ ಗಲಾಟೆ ನಡೆದಿದ್ದು, ಇದೇ ವಿಚಾರಕ್ಕೆ ರುದ್ರೇಗೌಡ ಕೊಲೆಯಾಗಿರುವ …
Read More »