BigTv News
September 3, 2024
Breaking News
ಶ್ರೀನಗರ : ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. ಇದೀಗ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಈ ಬಾರಿ ಬಿಜೆಪಿಗೆ ತೀರ ಮುಖಭಂಗವಾಗುವ ಸಾಧ್ಯತೆ ಇದೆ. ಅಲ್ಲದೇ ಕಾಂಗ್ರೆಸ್ ಎನ್‌ಸಿ ಮೈತ್ರಿಕೂಟ ಪರ ಜನರ ನಿಲುವು ಹೆಚ್ಚಿದೆ ಎಂಬುದು ಬಯಲಾಗಿದೆ.90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆ ಕುರಿತು ಎಲೆಕ್ಷನ್ ಟ್ರ್ಯಾಕರ್ ಮತದಾರರ ಅಭಿಪ್ರಾಯ …
Read More »
BigTv News
September 3, 2024
Breaking News, ತುಮಕೂರು
ತುಮಕೂರು : ನಗರದಲ್ಲಿ ಇಂದು ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿ ಮಡಿಲು ತುಂಬಿದ್ದಾರೆ. ಈ ಸಂದರ್ಭದಲ್ಲಿ ಮಗುವಿನ ಆಗಮನದಲ್ಲಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಕೋರಿದ್ದಾರೆ. ತುಮಕೂರಿನ ಬಾಲಭವನದ ಆವರಣದಲ್ಲಿ ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಪಟಾಕಿ ಸಿಡಿಸಿ ಪೂರ್ಣ …
Read More »
Shaikh BigTv
September 3, 2024
Breaking News, ಧಾರವಾಡ
ಧಾರವಾಡ : ಅಳ್ನಾವರ ತಾಲೂಕಿನ ಐತಿಹಾಸಿಕ ಹುಲಿಕೇರಿ ಇಂದ್ರಮ್ಮ ಕೆರೆಗೆ ಭೇಟಿ ನೀಡಿ, ಬಾಗಿನ ಅರ್ಪಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಕೆರೆ ದುರಸ್ತಿ ಕಾಮಗಾರಿಯನ್ನು ಯುದ್ದೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇಂದು ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದ ಇಂದ್ರಮ್ಮ ಸಣ್ಣ ನೀರಾವರಿ ಕೆರೆ ಪುನರುಜ್ಜೀವನ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಇಂದ್ರಮ್ಮ ಕೆರೆಯ ಕಾಮಗಾರಿಯನ್ನು …
Read More »
Shaikh BigTv
September 3, 2024
Breaking News, ಧಾರವಾಡ
ಧಾರವಾಡ : ಧಾರವಾಡದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ 9 ಕೋಟಿ ರೂ ವೆಚ್ಚದ ತಾರಾಲಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು. ಇಂದು ಧಾರವಾಡದಲ್ಲಿರುವ ಧಾರವಾಡ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಅನುಕೂಲಕ್ಕಾಗಿ ವಿಜ್ಞಾನ ಕೇಂದ್ರಗಳನ್ನು ಹಾಗೂ …
Read More »
Shaikh BigTv
September 3, 2024
Breaking News, ಧಾರವಾಡ
ಹುಬ್ಬಳ್ಳಿ: ಇಲ್ಲಿಯ ವರೂರಿನ ಗ್ರಾಮದಲ್ಲಿ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ಜೈನ ತೀರ್ಥಂಕರರ ಸಮಾಗಮದಲ್ಲಿ 2025ರ ಜನವರಿ 15ರಿಂದ 26ರ ವರೆಗೆ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮಹೋತ್ಸವ ಮುಹೂರ್ತ ಉದ್ಘೋಷ ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭೀಷೇಕದ ದಿನಾಂಕ ನಿಗದಿ ಮಾಡಲಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಮಹಾ ಮಸ್ತಕಾಭೀಷೇಕದ ಅಧ್ಯಕ್ಷರನ್ನಾಗಿ ಕೂಡ ಘೋಷಣೆ ಮಾಡಲಾಯಿತು. ಅಲ್ಲದೇ ಇದೇ ವೇಳೆ ವೀರೇಂದ್ರ ಹೆಗ್ಗಡೆಯವರಿಗೆ ಜವಾಬ್ದಾರಿ ವಹಿಸುವ …
Read More »
BigTv News
September 3, 2024
Breaking News
ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿ …
Read More »
BigTv News
September 3, 2024
Breaking News
ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ. ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ …
Read More »
BigTv News
September 3, 2024
Breaking News, ಮೈಸೂರು
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಭೆಯನ್ನು ನಡೆಸಿದ್ದಾರೆ. ಮೊದಲಿಗೆ ದೇವಿ ದರ್ಶನ ಪಡೆದ ಸಿಎಂ ಆ ಬಳಿಕ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಧಿಕಾರದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಮತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. …
Read More »
BigTv News
September 3, 2024
Breaking News
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ಅತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು ಬೆಳಿಗ್ಗೆ ಮಸೂದೆಯನ್ನು …
Read More »
BigTv News
September 3, 2024
Breaking News, ಚೆನ್ನೈ
ಚೆನೈ: ಚೆನೈನ ಚೆಟ್ಪೇಟೆಯಲ್ಲಿರುವ ಬಯೋ ಸಿಎನ್ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಚೆನ್ನೈ ಮಾದರಿ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು.ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ …
Read More »