Breaking News

Breaking News

ಪೊರ್ಬಂದರ್ ಕರಾವಳಿಯಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ: ಮೂವರು ಸಿಬ್ಬಂದಿ ನಾಪತ್ತೆ

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಾಲ್ಕು ಸಿಬ್ಬಂದಿಯೊಂದಿಗೆ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಉಳಿದ ಮೂವರು ಸಿಬ್ಬಂದಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ. ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿದ್ದು, ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಸ್ತುತ, ಐಸಿಜಿ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಕಾರ್ಯಚರಣೆಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.

Read More »

ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ ನಂಬರ್ 23ರ ಯಾಲಕ್ಕಿ ಶೆಟ್ಟ‌ರ್ ಕಾಲೋನಿ ಹಾಗೂ ಅಂಬೇಡ್ಕರ ನಗರದಲ್ಲಿ ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಬಿಜೆಪಿ ಮುಖಂಡ ಸಂಜಯ ಕಪಟಕರ, ಕರಿಯಪ್ಪ ಸುಣ್ಣಗಾರ ಸೇರಿದಂತೆ ಹಲವರು

Read More »

ಗಣೇಶ ಚತುರ್ಥಿ , ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಹಲವು ಗಣ್ಯರು ಭಾಗಿ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ ನಡೆಯುತ್ತು. ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು . ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಣೆಗಾಗಿ ಸಭೆ ನಡೆಸಲಾಯಿತು. ಹಲವು ಗಣೇಶ ಪ್ರತಿಷ್ಠಾಪನಾ ಸಂಘಟನೆ ಭಾಗಿಯಾಗಿದ್ದರು.ಹಬ್ಬದ ವೇಳೆ ಬೇಕಾದ ಮೂಲಭೂತ ಸೌಕರ್ಯ ನೀಡಲು ಮನವಿ ಸಲ್ಲಿಸಲಾಯಿತು. ಚಎರಡೂ ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸಬೇಕು …

Read More »

ಕಾಂಗೋ: ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ 129 ಮಂದಿ ಸಾವು

ಕಿನ್ಶಾಸಾ: ಕಾಂಗೋದರಾಜಧಾನಿ ಕಿನ್ಶಾಸಾದ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಕನಿಷ್ಠ 129 ಜನ ಮೃತಪಟ್ಟಿದ್ದಾರೆ ಎಂದು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಸರ್ಕಾರ ಹೇಳಿದೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಚಿವ ಶಬಾನಿ ಲುಕೂ ಮಾಹಿತಿ ಹಂಚಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಸುಮಾರು 129 ಮಂದಿ ಸಾವಿಗೀಡಾಗಿದ್ದಾರೆ.129 ಮಂದಿಯಲ್ಲಿ 24 ಮಂದಿ …

Read More »

ಜೋಶಿ, ಎಂ. ಆರ್ ಪಾಟೀಲ್ ಗೆ ಸನ್ಮಾನಿಸಿ ಗೌರವ ಸಲ್ಲಿಕೆ

ಕುಂದಗೋಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುಂದಗೋಳ ತಾಲೂಕಿನ ಶಾಸಕ ಎಂ. ಆರ್ ಪಾಟೀಲ್ ಅವರನ್ನು ಬಿಜೆಪಿ ಕಾರ್ಯಕರ್ತರು ಸನ್ಮಾನ ಮಾಡಿ ಗೌರವಿಸಿದರು. ನಂತರ ಕುಂದಗೋಳ ತಾಲೂಕಿನ ಅಭಿವೃದ್ಧಿ ಶ್ರಮಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಇತರರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Read More »

ಮಳೆಯಿಂದಾಗಿ ರೈತರ ಬೆಳೆಗಳು : ಪರಿಹಾರ ಕೊಡುವಂತೆ ಪ್ರತಿಭಟನೆ

ಕಲಘಟಗಿ:ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ಕಲಘಟಗಿ ಪಟ್ಟಣದಲ್ಲಿ ನಡೆಸಲಾಯಿತು. ರೈತರು ಬೆಳೆದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ. ಕೂಡಲೇ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Read More »

ಯುದ್ಧ ನೌಕೆ ಯೋಜನೆ: ಭಾರತ ಸರ್ಕಾರ ಅನುಮೋದನೆ

ನವದೆಹಲಿ: ಏಳು ಹೊಸ ಯುದ್ಧನೌಕೆಗಳನ್ನು ನಿರ್ಮಿಸುವ ಭಾರತೀಯ ನೌಕಾಪಡೆಯ 70,000 ಕೋಟಿ ರೂ.ಗಳ ಯೋಜನೆಗಳು ಮತ್ತು ರಷ್ಯಾ ಮೂಲದ ಟಿ -72 ಯುದ್ಧ ಟ್ಯಾಂಕ್ಗಳನ್ನು ಬದಲಾಯಿಸಲು 1,700 ಹೊಸ ಟ್ಯಾಂಕ್ಗಳನ್ನು ಸೇರಿಸುವ ಭಾರತೀಯ ಸೇನೆಯ ಯೋಜನೆ ಸೇರಿದಂತೆ ಮೆಗಾ ಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಲು ಸಜ್ಜಾಗಿದೆ. ಮಂಗಳವಾರ ನಡೆಯಲಿರುವ ಸಭೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ 1.3 ಲಕ್ಷ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದು …

Read More »

ಉಚಿತ ಪಡಿತರ ಯೋಜನೆ: ಅಕ್ಕಿ ಬದಲಿಗೆ ಸಿಗಲಿವೆ 9 ವಸ್ತುಗಳು

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಫಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಭಾರತ ಸರ್ಕಾರದ ಉಚಿತ ಪಡಿತರ …

Read More »

ಜಿಲ್ಲಾಮಟ್ಟದ ತರಬೇತಿದಾರರಿಗೆ ಎರಡು ದಿನಗಳ ತರಬೇತಿ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗ್ರಾಮ ಆರೋಗ್ಯ ಯೋಜನೆಯಡಿ, ಜಿಲ್ಲಾಮಟ್ಟದ ತರಬೇತಿದಾರರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ತರಬೇತಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಸುಜಾತಾ ಹಸವೀಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ ಹಾಗೂ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಇದ್ದರು.

Read More »

ವಕ್ಪ್ ಆಸ್ತಿಯ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಿ: ಸಚಿವ ಜಮೀರ ಅಹ್ಮದ ಸೂಚನೆ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 2453 ವಕ್ಫ ಆಸ್ತಿಗಳಿದ್ದು ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿ ಇವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಪ ಆಸ್ತಿಗಳ ಸಮೀಕ್ಷೆ, ರಕ್ಷಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಎಂದು ವಸತಿ, ವಕ್ಪ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ ಅಹ್ಮದ ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಧಾರವಾಡ ಮತ್ತು ಉತ್ತರ ಕನ್ನಡ …

Read More »