Breaking News

Breaking News

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು, ರೌಡಿಶೀಟರ್‌ಗೆ ಮಚ್ಚಿನಿಂದ ಹಲ್ಲೆ

ಮಂಗಳೂರಿನ ಲಾಲ್‌ಬಾಗ್‌ ಸಿಗ್ನಲ್‌ ಬಳಿ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಕುತ್ತಿಗೆಗೆ ಗಂಭೀರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ಆರಂಭಿಸಿದ್ದಾರೆ. ವಿಕ್ಕಿ ಬಪ್ಪಲ್ ವಿರುದ್ಧ ಈ ಹಿಂದೆಯೇ ರೌಡಿಶೀಟ್ ತೆರೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಮನೆಯೊಂದರ ಮೇಲೆ …

Read More »

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಜಿರಳೆ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಮಾಹಿತಿಯನ್ನು ದೃಢಪಡಿಸುವ ಅಧಿಕೃತ ಪ್ರಕಟಣೆ ಇಲ್ಲ. ಈ ನಡುವೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಸಿಜೆಪಿ ವಕ್ತಾರರ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಶಿಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು …

Read More »

ಕರ್ನಾಟಕದಲ್ಲಿ ಬಯಲಾಯ್ತು ಬೃಹತ್ ನಕಲಿ ಪಿಎಚ್‌ಡಿ ಹಗರಣ!

ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಹಾಗೂ ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ 249 ಮಂದಿಯನ್ನು ಕಾಲೇಜು ಶಿಕ್ಷಣ ಇಲಾಖೆ ಸೇವೆಯಿಂದ ವಜಾಗೊಳಿಸಿದೆ. ವಿಶ್ವವಿದ್ಯಾಲಯಗಳ ದಾಖಲೆ ಪರಿಶೀಲನೆಯಲ್ಲಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. 2025–26ನೇ ಶೈಕ್ಷಣಿಕ ವರ್ಷದ ನೇಮಕಾತಿಯ ಬಳಿಕ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳನ್ನು ವಿಶ್ವವಿದ್ಯಾಲಯಗಳಿಗೆ ಪರಿಶೀಲನೆಗಾಗಿ ಕಳುಹಿಸಲಾಗಿತ್ತು. ತನಿಖೆಯಲ್ಲಿ 249 ಪಿಎಚ್‌ಡಿ ಪ್ರಮಾಣಪತ್ರಗಳು ಅಮಾನ್ಯ …

Read More »

1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಬೆಸ್ಕಾಂ ಅಧಿಕಾರಿ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ವಿದ್ಯುತ್‌ ಸಂಪರ್ಕ ನೀಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿರುವ ಆರೋಪದಡಿ ಬೆಸ್ಕಾಂನ ಡೈರೆಕ್ಟರ್‌ ಆಫ್‌ ಟೆಕ್ನಿಕಲ್‌ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಮಾವಳ್ಳಿಪುರ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ಬಡಾವಣೆಗೆ 2021 ಕಿಲೋ ವ್ಯಾಟ್‌ ಸಾಮರ್ಥಯದ ವಿದ್ಯುತ್‌ ಸಂಪರ್ಕ ನೀಡುವಂತೆ ಫೆ.18ರಂದು ದೂರುದಾರರು ಅರ್ಜಿ ಸಲ್ಲಿಸಿದ್ದರು. ಬೆಸ್ಕಾಂ ಎನ್‌-9 ಉಪವಿಭಾಗದ ಎ.ಇ.ಇ ಈ ಅರ್ಜಿ ಸ್ವೀಕರಿಸಿ, ಮುಂದಿನ ಕ್ರಮದ ಸಲುವಾಗಿ ಎ.ಇ ರವರಿಗೆ ಕಳುಹಿಸಿದ್ದರು. …

Read More »

ಸೂಟ್‌ಕೇಸ್‌ನಲ್ಲಿ ವೃದ್ಧೆಯ ಶವವಿಟ್ಟು ರಾತ್ರಿಪೂರ್ತಿ ಮಂಚದ ಕೆಳಗಿಟ್ಟು ಮಲಗಿದ್ದ ಹಂತಕ: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ

ಬೆಂಗಳೂರು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೋಜಿನ ಜೀವನಕ್ಕಾಗಿ ಮಾಡಿಕೊಂಡಿದ್ದ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆಗೈದು, ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟಿದ್ದ ಭೀಕರ ಘಟನೆ ಬೆಳಕಿಗೆ ಬಂದಿದೆ. ಚಲ್ಲಘಟ್ಟ ನಿವಾಸಿ ಜಯಮ್ಮ ಅವರು ಜುಲೈ 15ರಂದು ನಾಪತ್ತೆಯಾಗಿದ್ದು, ಜುಲೈ 21ರಂದು ರಾಮೋಹಳ್ಳಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿತ್ತು. ತನಿಖೆಯಲ್ಲಿ ಆರೋಪಿ ಗಗನ್ ಸಾಲದ ಒತ್ತಡದಿಂದ ಜಯಮ್ಮ ಅವರನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿ, ಅವರ ಚಿನ್ನದ ಕಿವಿಯೋಲೆ ಮತ್ತು ಉಂಗುರ ದೋಚಿದ್ದಾನೆ …

Read More »

SIR ಕರ್ತವ್ಯದ ನಡುವೆ PDOಗಳ ಪಾರ್ಟಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸಿದ್ದರಬೆಟ್ಟದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದ ನಡುವೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಪಾರ್ಟಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಬೇಕಿದ್ದ ಅಧಿಕಾರಿಗಳು ಕರ್ತವ್ಯದ ವೇಳೆಯೇ ಮೋಜು-ಮಸ್ತಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬರಗಾಲದ ಪರಿಸ್ಥಿತಿಯ ನಡುವೆಯೂ ಗುಂಡು-ತುಂಡಿನ ಪಾರ್ಟಿ ನಡೆಸಿದ್ದು, ಸಿದ್ದೇಶ್ವರಸ್ವಾಮಿ ಹೆಸರಿನಲ್ಲಿ …

Read More »

ಮನೆ ಕಟ್ಟಲು 15 ಲಕ್ಷ ಸಾಲ; ಫೈನಾನ್ಸ್‌ನವರ ಕಾಟಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕೋಲಾರ ಜಿಲ್ಲೆಯ ಛತ್ರಕೋಡಿಹಳ್ಳಿ ಸಮೀಪ ಸಾಲದ ಬಾಧೆಯಿಂದ ಮನನೊಂದ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಪ್ರಮೀಳ (40), ಮಗಳು ಸ್ವಪ್ನ (22) ಹಾಗೂ ಮಗ ಚರಣ್ (18) ಮೃತರು. ಕುಟುಂಬವು ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಸುಮಾರು ₹15 ಲಕ್ಷ ಸಾಲ ಮಾಡಿಕೊಂಡಿದ್ದು, ಖಾಸಗಿ ಫೈನಾನ್ಸ್ ಹಾಗೂ ಸಂಘ-ಸಂಸ್ಥೆಗಳ ಸಾಲದ ಒತ್ತಡ ಹೆಚ್ಚಾಗಿತ್ತು. ಇದೇ ವಿಚಾರವಾಗಿ ರಾತ್ರಿ …

Read More »

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ

ಬೆಂಗಳೂರು: ಹೊರವರ್ತುಲ ರಸ್ತೆಯ 500D ಮಾರ್ಗದ ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ನಡೆದಿದೆ. ಹೆದರದ ಯುವತಿ ಗಟ್ಟಿಯಾಗಿ ಧ್ವನಿ ಎತ್ತಿ ಆರೋಪಿಯ ವಿರುದ್ಧ ಪ್ರತಿಭಟಿಸಿದ್ದಾರೆ. ಯುವತಿಯ ಕಿರುಚಾಟ ಕೇಳಿದ ಚಾಲಕ ಪ್ರವೀಣ್ ತಕ್ಷಣ ಬಸ್‌ನ್ನು ನಿಲ್ಲಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ. ಆದರೆ ಆರೋಪಿಯು ಚಾಲಕನ ಮೇಲೆಯೇ ಉಗುಳಿದ ಹಿನ್ನೆಲೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಆರೋಪಿಯನ್ನು ಹಿಡಿದು ನಿಯಂತ್ರಣಕ್ಕೆ ತಂದಿದ್ದಾರೆ. ಯುವತಿಯ ಧೈರ್ಯ ಮತ್ತು ಚಾಲಕ ಪ್ರವೀಣ್ …

Read More »

ವಿದ್ಯುತ್ ಸಂಪರ್ಕದ ವಿಚಾರಕ್ಕೆ ಕಿರಿಕ್ – ಜಮೀನು ಮಾಲಿಕನ ಬರ್ಬರ ಹತ್ಯೆ!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ವಿದ್ಯುತ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಗುಳಘಟ್ಟ ಗ್ರಾಮದ ರುದ್ರೇಗೌಡ ಕೊಲೆಯಾದ ದುರಂತ ವ್ಯಕ್ತಿಯಾಗಿದ್ದಾರೆ. ನೆರೆಯ ಜಮೀನಿನ ಮಾಲೀಕನ ಜೊತೆಗೆ ಟ್ರಾನ್ಸ್‌ಫಾರ್ಮರ್‌ನಿಂದ ವಿದ್ಯುತ್ ತೆಗೆದುಕೊಳ್ಳುವ ವಿಷಯದಲ್ಲಿ ರುದ್ರೇಗೌಡ ಅವರಿಗೆ ಗಲಾಟೆಯಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. …

Read More »

ರಾತ್ರೋ ರಾತ್ರಿ ಅಪರಿಚಿತ ದುಷ್ಕರ್ಮಿಗಳ ದಾಂಧಲೆ – ಮನೆ, ಕಾರು ಧ್ವಂಸ!

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ದಿಣ್ಣೆಪಾಳ್ಯದಲ್ಲಿ ನಾಲ್ವರು ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಮನೆಯೊಂದರ ಮೇಲೆ ದಾಳಿ ನಡೆಸಿ ಭೀತಿ ಸೃಷ್ಟಿಸಿದ್ದಾರೆ. ಮನೆಯ ಮಾಲೀಕ ವಿಶ್ವನಾಥ ರೆಡ್ಡಿ ಹಾಗೂ ಕುಟುಂಬದವರು ಪ್ರಾಣಭಯದಿಂದ ಮನೆಯೊಳಗೆ ಆಶ್ರಯ ಪಡೆದಿದ್ದು, ದುಷ್ಕರ್ಮಿಗಳು ಬಾಗಿಲು ಒಡೆಯಲು ವಿಫಲವಾದ ಬಳಿಕ ಕಿಟಕಿ ಗಾಜುಗಳು, ಕಾರು, ಬೈಕ್ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ದಾಳಿಕೋರರು ಸಮೀಪದ ಅಂಗಡಿ ಹಾಗೂ ಬೈಕ್ ಸವಾರನ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪ್ರಕರಣ …

Read More »