Breaking News

Breaking News

ಗಣೇಶ ಹಬ್ಬ, ಈದ್ ಮಿಲಾದ್ ಗೆ ಡಿಜೆ ಬಳಕೆ ನಿಷೇಧ

ಬೆಂಗಳೂರು: ಈ ಬಾರಿ ಗಣೇಶೋತ್ಸವ ಆಚರಣೆ ಹಾಗೂ ಈದ್ ಮಿಲಾದ್ ವೇಳೆ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಹೀಗಾಗಿ ಅಲ್ಲಲ್ಲಿ ಗಣೇಶನ ಮೂರ್ತಿ ಕೂರಿಸಿ ಜೋರಾಗಿ ಮ್ಯೂಸಿಕ್ ಹಾಕಿ ಜನ ಸಂಭ್ರಮಾಚರಿಸುವುದು ಸಹಜ. ಆದರೆ ಈ ಬಾರಿ ರಾಜ್ಯ ಸರ್ಕಾರ ಕೆಲವೊಂದು ಷರತ್ತು ವಿಧಿಸಿದೆ. ಗಲ್ಲಿ ಗಲ್ಲಿಯಲ್ಲಿ ಗಣೇಶ ಕೂರಿಸುವ ಮೊದಲು ಸ್ಥಳೀಯಾಡಳಿತದ ಒಪ್ಪಿಗೆ ಪಡೆಯಬೇಕು. ಯಾರೂ ರಸ್ತೆ ಅಡ್ಡಗಟ್ಟಿ ಗಣೇಶನ ಮೂರ್ತಿ …

Read More »

ಮೋದಿ ಸರ್ಕಾರದಿಂದ ಏಕೀಕೃತ ಪಿಂಚಣಿ ಯೋಜನೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಏಕೀಕೃತ ಪಿಂಚಣಿ ಯೋಜನೆ ಪರಿಚಯಿಸಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಣಕಾಸಿನ ಆರೋಗ್ಯವನ್ನು ಕಾಪಾಡುವಾಗ ಸರ್ಕಾರಿ ನೌಕರರ ಆರ್ಥಿಕ ಭವಿಷ್ಯವನ್ನು ಭದ್ರಪಡಿಸುವಲ್ಲಿ ಒಂದು ಹೆಗ್ಗುರುತು ಸಾಧನೆಯನ್ನು ಪ್ರತಿನಿಧಿಸುತ್ತದೆ. ಈ ಸುಧಾರಣೆಯು ಪಿಂಚಣಿದಾರರಿಗೆ ವಿಶ್ವಾಸಾರ್ಹ ಸುರಕ್ಷತಾ ಜಾಲವನ್ನು ಒದಗಿಸುವುದಲ್ಲದೆ, ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಈ ತತ್ವವನ್ನು ಮೋದಿ ಆಡಳಿತವು ನಿರಂತರವಾಗಿ ಪ್ರತಿಪಾದಿಸುತ್ತಿದೆ. ನಿವೃತ್ತರು ಕಳೆದ 12 ತಿಂಗಳ ಸೇವೆಯಿಂದ ಪಡೆದ ಸರಾಸರಿ ಮೂಲ ವೇತನದ …

Read More »

ಗಣೇಶ ಮೂರ್ತಿ ಪ್ರತಿಷ್ಠಾಪನೆ: ಹೆಸ್ಕಾಂನಿಂದ ಮಾರ್ಗಸೂಚಿ ಪ್ರಕಟ

ಹುಬ್ಬಳ್ಳಿ: ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿ ಹೊರಡಿಸಿರುವ ಹೆಸ್ಕಾಂ ಕೆಲವು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ಸೂಚನೆ ನೀಡಿದೆ. ಈ ಕುರಿತು ಹೆಸ್ಕಾಂ ಹುಬ್ಬಳ್ಳಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಎಂಜಿನೀಯ‌ರ್ ಕಿರಣ್ ಕುಮಾರ್ ಬಿ ಅವರು, ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನಧಿಕೃತವಾಗಿ ವಿದ್ಯುತ್ ಲೈನ್‌ಗಳಿಗೆ, ಮನೆಗಳಿಂದ ಹುಕ್ ಹಾಕಿ ವಿದ್ಯುತ್ ಸಂಪರ್ಕ ಪಡೆಯಬಾರದು. ಸಂಬಂಧ ಪಟ್ಟ ಹೆಸ್ಕಾಂ ವಿಭಾಗೀಯ ಅಥವಾ …

Read More »

ಸೆಪ್ಟೆಂಬರ್ 7 ರಿಂದ ಟೋಲ್ ಸಂಗ್ರಹ ಸ್ಥಗಿತ

ಹುಬ್ಬಳ್ಳಿ: ಹು-ಧಾ ಬೈಪಾಸ್ ರಸ್ತೆ ನಿರ್ವಹಣೆ ಮತ್ತು ರಸ್ತೆ ಬಳಕೆದಾರರ ಶುಲ್ಕ ಆಕರಣೆ (ಟೋಲ್‌) ಗುತ್ತಿಗೆ ಪಡೆದಿದ್ದ ನಂದಿ ಹೈವೇ ಡೆವಲಪರ್ಸ್ ಲಿಮಿಟೆಡ್ ತನ್ನ ಗುತ್ತಿಗೆ ಅವಧಿ ಮುಗಿದಿರುವುದರಿಂದ ಸೆಪ್ಟೆಂಬರ್ 7 ರಿಂದ ಟೋಲ ಸಂಗ್ರಹ ಸ್ಥಗಿತಗೊಳಿಸಲಿದೆ. ಬೈಪಾಸ್ ನಿರ್ವಹಣೆ ಮತ್ತು ಟೋಲ್ ಸಂಗ್ರಹ ಕಾರ್ಯ ಸ್ಥಗಿತಗೊಳಿಸಲಿದ್ದು, 1998ರಿಂದಲೂ ಈ ಬೈಪಾಸ್‌ ನಿರ್ವಹಣೆ ಮತ್ತು ಟೋಲ್ ಸಂಗ್ರಹಣೆ ಕಾರ್ಯ ನಿರ್ವಹಿಸಿದ್ದ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸುವ ನಿರ್ಧಾರ ಪ್ರಕಟಿಸಿದೆ. ಈ ಕುರಿತು …

Read More »

ಗದಗ ಹಾವೇರಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ: ಬಸವರಾಜ ಬೊಮ್ಮಾಯಿ

ಗದಗ: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಪ್ರಗತಿ‌ ಹಾಗೂ ಅಭಿವೃದ್ದಿ ಕುರಿತಾದ ಸಭೆಯನ್ನು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಭರತ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Read More »

ಪೊರ್ಬಂದರ್ ಕರಾವಳಿಯಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ: ಮೂವರು ಸಿಬ್ಬಂದಿ ನಾಪತ್ತೆ

ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಾಲ್ಕು ಸಿಬ್ಬಂದಿಯೊಂದಿಗೆ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಉಳಿದ ಮೂವರು ಸಿಬ್ಬಂದಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ. ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿದ್ದು, ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಪ್ರಸ್ತುತ, ಐಸಿಜಿ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಕಾರ್ಯಚರಣೆಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ.

Read More »

ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆ

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ಶಹರದ ವಾರ್ಡ ನಂಬರ್ 23ರ ಯಾಲಕ್ಕಿ ಶೆಟ್ಟ‌ರ್ ಕಾಲೋನಿ ಹಾಗೂ ಅಂಬೇಡ್ಕರ ನಗರದಲ್ಲಿ ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ಬಿಜೆಪಿ ಮುಖಂಡ ಸಂಜಯ ಕಪಟಕರ, ಕರಿಯಪ್ಪ ಸುಣ್ಣಗಾರ ಸೇರಿದಂತೆ ಹಲವರು

Read More »

ಗಣೇಶ ಚತುರ್ಥಿ , ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಹಲವು ಗಣ್ಯರು ಭಾಗಿ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ನೇತೃತ್ವದಲ್ಲಿ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿ ಸಭೆ ನಡೆಯುತ್ತು. ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು . ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಣೆಗಾಗಿ ಸಭೆ ನಡೆಸಲಾಯಿತು. ಹಲವು ಗಣೇಶ ಪ್ರತಿಷ್ಠಾಪನಾ ಸಂಘಟನೆ ಭಾಗಿಯಾಗಿದ್ದರು.ಹಬ್ಬದ ವೇಳೆ ಬೇಕಾದ ಮೂಲಭೂತ ಸೌಕರ್ಯ ನೀಡಲು ಮನವಿ ಸಲ್ಲಿಸಲಾಯಿತು. ಚಎರಡೂ ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸಬೇಕು …

Read More »

ಕಾಂಗೋ: ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ 129 ಮಂದಿ ಸಾವು

ಕಿನ್ಶಾಸಾ: ಕಾಂಗೋದರಾಜಧಾನಿ ಕಿನ್ಶಾಸಾದ ಮಕಾಲಾ ಕೇಂದ್ರ ಕಾರಾಗೃಹದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಕನಿಷ್ಠ 129 ಜನ ಮೃತಪಟ್ಟಿದ್ದಾರೆ ಎಂದು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಸರ್ಕಾರ ಹೇಳಿದೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಚಿವ ಶಬಾನಿ ಲುಕೂ ಮಾಹಿತಿ ಹಂಚಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಮಕಾಲಾ ಕೇಂದ್ರ ಕಾರಾಗೃಹದಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಸುಮಾರು 129 ಮಂದಿ ಸಾವಿಗೀಡಾಗಿದ್ದಾರೆ.129 ಮಂದಿಯಲ್ಲಿ 24 ಮಂದಿ …

Read More »

ಜೋಶಿ, ಎಂ. ಆರ್ ಪಾಟೀಲ್ ಗೆ ಸನ್ಮಾನಿಸಿ ಗೌರವ ಸಲ್ಲಿಕೆ

ಕುಂದಗೋಳ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುಂದಗೋಳ ತಾಲೂಕಿನ ಶಾಸಕ ಎಂ. ಆರ್ ಪಾಟೀಲ್ ಅವರನ್ನು ಬಿಜೆಪಿ ಕಾರ್ಯಕರ್ತರು ಸನ್ಮಾನ ಮಾಡಿ ಗೌರವಿಸಿದರು. ನಂತರ ಕುಂದಗೋಳ ತಾಲೂಕಿನ ಅಭಿವೃದ್ಧಿ ಶ್ರಮಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಸೇರಿದಂತೆ ಇತರರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Read More »