BigTv News
August 27, 2024
Breaking News, ಉಡುಪಿ
ಉಡುಪಿ:ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸೋಮವಾರ(ಆ 26) ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ. ಅಭಯ್ ಪ್ರಕರಣದ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ …
Read More »
BigTv News
August 27, 2024
Breaking News
‘ಸ್ತ್ರೀ 2’ ಸಿನಿಮಾ ಪ್ರೇಕ್ಷಕರ ಬಹುನಿರೀಕ್ಷಿತ ಚಿತ್ರವಾಗಿತ್ತು. ರಾಜ್ ಕುಮಾರ್ ರಾವ್ ಶ್ರದ್ದಾಕಪೂರ್ ನಟನೆಯ ‘ಸ್ತ್ರೀ 2’ ಸಿನಿಮಾ ಗೆಲ್ಲುತ್ತದೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ ಸ್ಟಾರ್ ನಟರ ಸಿನಿಮಾಗಳನ್ನೂ ಮೀರಿಸುವ ರೀತಿಯಲ್ಲಿ ಕಲೆಕ್ಷನ್ ಮಾಡಲಿದೆ ಎಂದು ಬಹುತೇಕರು ಊಹಿಸಿರಲಿಲ್ಲ. ‘ಸ್ತ್ರೀ 2’ ಸಿನಿಮಾ ಬಿಡುಗಡೆಯಾಗಿ 12 ದಿನ ಕಳೆದಿದೆ. ಈ ಚಿತ್ರಕ್ಕೆ ವಿಶ್ವಾದ್ಯಂತ ಬರೋಬ್ಬರಿ 560 ಕೋಟಿ ರೂಪಾಯಿ ಕಮಾಯಿ ಆಗಿದೆ. ‘ಸ್ತ್ರೀ ಚಿತ್ರದ ಮೊದಲ ಪಾರ್ಟ್ ಎಲ್ಲರ …
Read More »
BigTv News
August 27, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಬಳೆಕಟ್ಟೆ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಬಳೆಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅಂಬುಲೆನ್ಸ್‌ನಲ್ಲಿದ್ದ …
Read More »
BigTv News
August 27, 2024
Breaking News
ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರು ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದ ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. …
Read More »
BigTv News
August 27, 2024
Breaking News
ಮೈಸೂರು: ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ. ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ಅವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ತೆರವುಗೊಳಿಸಿದ್ದಾರೆ. ಕೇರ್ಗಳ್ಳಿ ಗ್ರಾಮದ ಸ.ನಂ.60ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಮಾತ್ರವಲ್ಲ, ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು. ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡು …
Read More »
BigTv News
August 27, 2024
Breaking News, ಬೆಂಗಳೂರು
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ವರ್ಷಗಳ ಹಿಂದೆ ನಟಿ ಪದ್ಮಜಾ ರಾವ್ ಅವರ ಚೆಕ್ ಬೌನ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರ ಬಳಿಯಿಂದ ಪದ್ಮಜಾ ರಾವ್, 41ಲಕ್ಷ ರೂಪಾಯಿ …
Read More »
BigTv News
August 27, 2024
Breaking News
ಬೆಂಗಳೂರು: ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಇಂದು ನಡೆಯುತ್ತಿದೆ. ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. KAS ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕೆಲವು ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು. ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ಸ್ ಅಸೋಸಿಯೇಷನ್‌ನಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕೆಎಎಸ್ ಆಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದರು. ಈ ಹೋರಾಟಕ್ಕೆ ಕೆಲವು ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಕೊನೆ ಕ್ಷಣದವರೆಗೂ ಪರೀಕ್ಷೆ ಪೋಸ್ಟ್ ಪೋನ್ ಮಾಡಿಸುವ ಯತ್ನ ಮಾಡಲಾಗಿತ್ತು. ರಾಜ್ಯ ಸರ್ಕಾರ ಹಾಗೂ …
Read More »
BigTv News
August 27, 2024
Breaking News
ಕ್ಯಾಲಿಫೋರ್ನಿಯಾ: ವಿಶ್ವದ ಅತ್ಯಂತ ಪ್ರತಿಷ್ಠಿತ ಸ್ಮಾರ್ಟ್‌ಫೋನ್ ಕಂಪನಿಯಾದ ಆ್ಯಪಲ್‌ಗೆ ಚೀಫ್ ಫೈನಾನ್ಸಿಯಲ್ ಆಫೀಸರ್ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ. ಲ್ಯೂಕಾ ಮೇಸ್ಟ್ರಿ ಅವರ ಸ್ಥಾನವನ್ನು ಪರೇಖ್ ತುಂಬಲಿದ್ದಾರೆ. ಲೂಕಾ ಅವರು ಸಿಎಫ್‌ಒ ಸ್ಥಾನದಿಂದ ಹೊರಹೋಗುತ್ತಾರಾದರೂ ಆ್ಯಪಲ್ ಕಂಪನಿಯಲ್ಲಿ ಅವರು ಬೇರೆ ಜವಾಬ್ದಾರಿಗಳೊಂದಿಗೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೇವನ್ ಪರೇಖ್ 10ಕ್ಕೂ ಹೆಚ್ಚು ವರ್ಷಗಳಿಂದ ಆ್ಯಪಲ್ ಕಂಪನಿಯಲ್ಲೇ ಕೆಲಸ ಮಾಡಿದ್ದಾರೆ. ಆ್ಯಪಲ್ ಸೇರುವ ಮುನ್ನ ಅವರು ಥಾಯ್ಸನ್ …
Read More »
BigTv News
August 27, 2024
Breaking News
ಪಂಜಾಬ್: 2002ರಲ್ಲಿ ಸುಖ್‌ಪಾಲ್ ಸಿಂಗ್ ಎಂಬ ವ್ಯಕ್ತಿ ಜಪಾನ್ ಮೂಲದ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಬಹು ಬೇಗನೆ ಆಕೆಯ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಲ್ಲವೂ ಅಂದುಕೊಂಡಂತೆ ನಡೆಯದ ಹಿನ್ನಲೆ ಸುಖ್ಪಾಲ್ ಮತ್ತು ಅವರ ಪತ್ನಿ ಒಪ್ಪಂದದ ಮೇರೆಗೆ ಪರಸ್ಪರ ದೂರವಾದರು. ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ 2 ವರ್ಷದ ಮಗ ತನ್ನ ಹೆತ್ತವರಿಂದ ಅನಾಥನಾಗಿ, ಎಲ್ಲೋ ದೂರದಲ್ಲಿ ಬೆಳೆದು ಇಂದು 19 ವರ್ಷಗಳ ನಂತರ …
Read More »
BigTv News
August 27, 2024
Breaking News
ರಾಜಸ್ಥಾನ: ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ. ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು. ಧಾರ್ಮಿಕ ಸ್ಥಳದ ಮುಂದೆ ಗೋವಿನ ಬಾಲ …
Read More »