Breaking News

Breaking News

ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಪಾಸ್ ದುರುಪಯೋಗ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಾರು ಚಾಲಕನೋರ್ವ ಪಾಸ್ ದುರುಪಯೋಗ ಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದಾನೆ. ಈ ಹಿಂದೆ ವಿಧಾನಪರಿಷತ್ ಶಾಸಕರಾಗಿದ್ದ ಅವಧಿಯಲ್ಲಿನ ಸ್ಟಿಕರ್ ಬಳಸಿರುವ ಚಾಲಕ. ‘ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ’ ಎಂಬ ಪಾಸ್ ಅಳವಡಿಕೊಂಡು ಹಲವು ದಿನಗಳಿಂದ ಸ್ಕೋಡಾ ಕಾರಿನ ಮುಂಭಾಗದಲ್ಲಿ ಸ್ಟಿಕರ್ ಅಂಟಿಸಿ ತಿರುಗಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದವರಿಂದ ದುರುಪಯೋಗ ಆಗಿರುವ ಶಂಕೆಯಿದೆ. …

Read More »

ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ದಾವಣಗೆರೆ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ. ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ (60) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ. ಕಲುಷಿತ ನೀರು ಸೇವಿಸಿ ತೀವ್ರ ಆಸ್ಪಸ್ಥರಾಗಿದ್ದ ಚಂದ್ರಮ್ಮ ಅವರನ್ನು ಆಗಸ್ಟ್ 21ರಂದು ಮೆಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆಗಸ್ಟ್ …

Read More »

ಆರ್.ಜಿ ಕರ್ ವೈದ್ಯಕೀಯ ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ‌ ಜಾರಿ

ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂಬಂಧಿಸಿದಂತೆ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸುತ್ತ ಮುತ್ತ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಆಗಸ್ಟ್ 18ರಂದು ನಿಷೇಧಾಜ್ಞೆ ಹೇರಲಾಗಿತ್ತು. ಆಸ್ಪತ್ರೆ ಪರಿಸರದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸಭೆ ಸೇರುವುದನ್ನು ನಿರ್ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 163(2) ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸುವ ಕುರಿತು ಕೋಲ್ಕತ್ತ ಪೊಲೀಸ್ ಕಮಿಷನ‌ರ್ ವಿನೀತ್ …

Read More »

ಸಿಆರ್‌ಪಿಎಫ್ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಸ್ಥಾಪಿಸಲಾಗಿದ್ದ ಚೆಕ್‌ ಪೋಸ್ಟ್‌ನಲ್ಲಿ ಸಿಆರ್‌ಪಿಎಫ್ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಪೋರ್‌ನ ವಾಟರ್‌ಗಾಮ್ ಪ್ರದೇಶದ ಪಶುವೈದ್ಯಕೀಯ ಆಸ್ಪತ್ರೆಯ ಸಮೀಪ ಶನಿವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ಸಿಆರ್‌ಪಿಎಫ್‌ನ 92ನೇ ಬೆಟಾಲಿಯನ್ ತಂಡವನ್ನು ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲಾಗಿತ್ತು. ಈ ವೇಳೆ ಭಯೋತ್ಪಾದಕ ದಾಳಿ ನಡೆಸಿದ್ದಾನೆ. ಚೆಕ್ ಪೋಸ್ಟ್‌ನಲ್ಲಿ …

Read More »

ಪಾಕಿಸ್ತಾನದ (CHG) ಯಿಂದ ಪ್ರಧಾನಿಗೆ ಆಹ್ವಾನ

ನವದೆಹಲಿ: ಈ ವರ್ಷದ ಅಕ್ಟೋಬರ್‌ನಲ್ಲಿ ಆಯೋಜಿಸಲಿರುವ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್(CHG) ವೈಯಕ್ತಿಕ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಶಾಂಫೈ ಸಹಕಾರ ಸಂಸ್ಥೆ (SCO) ನಾಯಕರನ್ನು ಪಾಕಿಸ್ತಾನ ಆಹ್ವಾನಿಸಿದೆ. ಮೋದಿ ಇಸ್ಲಾಮಾಬಾದ್‌ಗೆ ಪ್ರಯಾಣಿಸುವ ಪ್ರಶ್ನೆಯೇ ಇಲ್ಲವಾದರೂ ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಅವರು ಈ ಹಿಂದೆ ಮಾಡಿದಂತೆ ಈ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಲು ಸಚಿವರನ್ನು ನಿಯೋಜಿಸುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ. ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ನಂತರ …

Read More »

ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ದಸರಾ ಆನೆಗಳು ವಾಕಿಂಗ್ ಮಾಡುತ್ತವೆ. ಮೊದಲ ಹಂತದಲ್ಲಿ ಕಾಡಿನಿಂದ ಅರಮನೆಗೆ 9 ಆನೆಗಳು ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ …

Read More »

ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ಆರೋಪ

ಮಂಡ್ಯ: ನಮ್ಮ 50 ಶಾಸಕರ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಒಬ್ಬೊಬ್ಬರಿಗೆ 100 ಕೋಟಿಯ ಆಫರ್ ಮಾಡಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಗಣಿಗ ರವಿಕುಮಾರ್.. ಬಿಜೆಪಿಯ ಬೋಕರ್‌ಗಳು ಪ್ರತಿನಿತ್ಯ ನಮ್ಮ ಶಾಸಕರನ್ನ ಸಂಪರ್ಕಿಸುತ್ತಿದ್ದಾರೆ. ಮೊದಲು 50 ಕೋಟಿಯಿಂದ 100 ಕೋಟಿಗೆ ಆಫರ್ ಏರಿಕೆ ಆಗಿದೆ. ಮೊನ್ನೆಯೂ ಕೆಲ ಕಾಂಗ್ರೆಸ್ ಶಾಸಕರಿಗೆ ಕರೆಗಳು ಬಂದಿವೆ. 100 ಕೋಟಿ ರೆಡಿ.. …

Read More »

ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು, ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ …

Read More »

ಆಸ್ತಿಗಾಗಿ ನಿವೃತ್ತ ಶಿಕ್ಷಕನ ಕೊಲೆ

ಮಂಗಳೂರು: ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಗಳಿಗೆ ಆಸ್ತಿ- ಜಾಗ ಪಾಲು ಮಾಡಿ ಕೊಡದೇ ಇರುವ ಕಾರಣದಿಂದ ಅಳಿಯ ಮತ್ತು ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಂತಕರಿಬ್ಬರನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಹೆಡೆಮುರಿ ಕಟ್ಟಿದ್ದಾರೆ. ಧರ್ಮಸ್ಥಳ ಪೊಲೀಸರು ಮೊಬೈಲ್, ಸಿಸಿ ಕ್ಯಾಮರ ಹಾಗೂ ವಿವಿಧ ಟೆಕ್ನಿಕಲ್ ಅಧಾರದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಕೊಲೆಯಾದ ಬಾಲಕೃಷ್ಣ ಭಟ್(83) ಅವರ …

Read More »

ಇಂದು & ನಾಳೆ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಉತ್ತರ ಕನ್ನಡ & ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಟ್ಟಿದ್ದು ಬೆಳಗಾವಿ,ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿನ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸೋ ಸಾಧ್ಯತೆ ಇದ್ದು ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ಕೊಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವ ಇರಲಿದ್ದು ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

Read More »