Breaking News

Breaking News

ಬೆಂಗಳೂರಲ್ಲಿ ಸೂಟ್​ಕೇಸ್​ನಲ್ಲಿ​ ಶವ ಪತ್ತೆ! ಕೆರೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಿರುವಾಗಲೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ನಡೆದಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ರಾಮೋಹಳ್ಳಿಯಲ್ಲಿ ಕಿಡಿಗೇಡಿಗಳು ಮಹಿಳೆಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವ …

Read More »

ನಾಗಮಂಗಲ ಒಂದರಲ್ಲೇ 2000 ಅಕ್ರಮ ಬಾಂಗ್ಲಾ ವಲಸಿಗರು? ಚುನಾವಣಾ ಆಯೋಗಕ್ಕೆ ದೂರು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರು ವಾಸವಿದ್ದು, ಕೋಳಿ ಫಾರಂ, ಫೀಡ್ಸ್ ಕಾರ್ಖಾನೆ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್. ರವೀಂದ್ರ ಆರೋಪಿಸಿದ್ದಾರೆ. ಈ ಕುರಿತು ಅವರು ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಲಸಿಗರ ಜನನ ಪ್ರಮಾಣಪತ್ರ, ಶಾಲಾ ದಾಖಲೆ ಹಾಗೂ …

Read More »

ಬೆಂಗಳೂರಲ್ಲಿ ಖೋಟಾ ನೋಟು ಜಾಲ ಪತ್ತೆ: ಇಬ್ಬರ ಸೆರೆ

ಬೆಂಗಳೂರು: ಖೋಟಾ ₹500 ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಕುಂಬಳಗೋಡು ಠಾಣೆ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 338 ಖೋಟಾ ನೋಟುಗಳು, ಜೆರಾಕ್ಸ್ ಯಂತ್ರ, ಲ್ಯಾಪ್‌ಟಾಪ್‌, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಮೈಸೂರು ಮೂಲದ ಆರೋಪಿ ಖೋಟಾ ನೋಟುಗಳನ್ನು ತಯಾರಿಸಿ ತಮಿಳುನಾಡಿನ ಸಹಚರನಿಗೆ ಕಳುಹಿಸುತ್ತಿದ್ದ. ಆತ ಅವುಗಳನ್ನು ಚಲಾವಣೆ ಮಾಡುತ್ತಿದ್ದ ಎನ್ನಲಾಗಿದೆ. ಸಾರ್ವಜನಿಕರು ₹500 ನೋಟುಗಳನ್ನು ಸ್ವೀಕರಿಸುವಾಗ ಸುರಕ್ಷತಾ ಚಿಹ್ನೆಗಳನ್ನು ಪರಿಶೀಲಿಸಿ, …

Read More »

ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಇಂಡಿ (ವಿಜಯಪುರ): ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಮಂಗಳವಾರ (ಜು.21) ನಡೆದಿದೆ. ತಾಲೂಕಿನ ಮಾವಿನಹಳ್ಳಿ ಗ್ರಾಮದ ಬಾಲಕ ಅಭಿಜಿತ ಭೀಮಪ್ಪಾ ಸಮಗಾರ (16) ಎಂಬಾತಬೇ ನೇಣು ಸಾವಿಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯು ಓದುತ್ತಿದ್ದ. …

Read More »

ದೇವನಹಳ್ಳಿಯಲ್ಲಿ ಭಯಾನಕ ಘಟನೆ: ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಮದ್ಯ ಕುಡಿಸಿದ ಪಾಪಿಗಳು

ಬೆಂಗಳೂರು: ದೇವನಹಳ್ಳಿಯಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ಬಾಲಕಿಯನ್ನು ಮನೆಯಿಂದ ಹೊರಗೆ ಕರೆತಂದು, ಬಳಿಕ ಇಬ್ಬರು ಆರೋಪಿಗಳು ಆಕೆಯನ್ನು ಬೇರೆ ಸ್ಥಳಕ್ಕೆ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮರುದಿನ ಬೆಳಗ್ಗೆ ಬಾಲಕಿಯನ್ನು ಮನೆಯ ಬಳಿ ಬಿಟ್ಟು, ವಿಷಯ ತಿಳಿಸಿದರೆ ಕೊಲ್ಲುವುದಾಗಿ …

Read More »

ಪತ್ನಿ, ಮಕ್ಕಳ ಬಾಯಿಗೆ ಪ್ಲಾಸ್ಟರ್‌ ಹಚ್ಚಿ ಕೊಂದ ಪತಿ.. ಮೈಸೂರಲ್ಲಿ ಪಾಪದ ಕೃತ್ಯ

ಮೈಸೂರು: ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ನಿಶ್ಚಿತಾ (36), ನೆಕ್ಸಾ (13) ಮತ್ತು ರಕ್ಷಾ (6) ಎಂದು ಗುರುತಿಸಲಾಗಿದ್ದು, ಹರೀಶ್ (40) ಕೃತ್ಯ ಎಸಗಿದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಹರೀಶ್ ತನ್ನ ತಾಯಿಯನ್ನು ಕೆಲವು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಕಳುಹಿಸಿದ್ದ. ಬಳಿಕ …

Read More »

ನೀಟ್ ಅಕ್ರಮದ ಕುರಿತು ಕೊನೆಗೂ ಮೌನಮುರಿದ ಮೋದಿ; ತಪ್ಪಿತಸ್ಥರಿಗೆ ಜೈಲು ಖಚಿತ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಜೈಲಿಗೆ ಕಳುಹಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುವ ಅಕ್ರಮಗಳನ್ನು ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪೇಪರ್ …

Read More »

ಜಿಪ್‌ಲೈನ್ ದುರಂತ : ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ದಾಂಡೇಲಿ : ತಾಲೂಕಿನ ಕೋಗಿಲಬನ – ಬಡಕಾನಶಿರಡಾ ಗ್ರಾ.ಪಂ ವ್ಯಾಪ್ತಿಯ ಬಡಕಾನಶಿರಡಾದಲ್ಲಿರುವ ಸ್ಟಾರ್ಲಿಂಗ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಅಪಘಾತದಲ್ಲಿ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ಜುಲೈ 3ರಂದು ನಡೆದ ಈ ಘಟನೆಯಲ್ಲಿ ಕುಬೇರ ಸುರುಪುರ (40) ಎಂಬ ಪ್ರವಾಸಿಗ ಜಿಪ್‌ಲೈನ್ ಚಟುವಟಿಕೆಯಲ್ಲಿ ಭಾಗವಹಿಸಿದ್ದ ವೇಳೆ ಸುರಕ್ಷತಾ ಬೆಲ್ಟ್ (ಹಾರ್ನೆಸ್) ತುಂಡಾಗಿ ಸುಮಾರು 40 …

Read More »

ಬೆಂಗಳೂರಿಗೆ ಪ್ರವಾಸಿಗಳಂತೆ ಬಂದು ಶ್ರೀಗಂಧ ಕಳ್ಳ ಸಾಗಣೆ ಮಾಡುವ ಕೇರಳ ಸ್ಮಗ್ಲರ್ಸ್; ಭರ್ಜರಿ 82 ಕೆಜಿ ಗಂಧ ಜಪ್ತಿ!

ಬೆಂಗಳೂರು: ರಾಜ್ಯದ ಗಡಿ ದಾಟಿ ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧ ಕಳ್ಳಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ ಅಬ್ದುಲ್ ರೆಹಮಾನ್, ಮೊಹಮದ್ ಶಾನ್, ವಿನು ಅಂತೋಣಿ ಹಾಗೂ ಜಾಫರ್ ಎಂಬ ನಾಲ್ವರನ್ನು ಬಂಧಿಸಿ, 82 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ಅನುಮಾನ ಬಾರದಂತೆ ಪ್ರವಾಸಿಗರಂತೆ ಬಸ್‌ನಲ್ಲಿ ಪ್ರಯಾಣಿಸಿ, ಟ್ರಾಲಿ ಬ್ಯಾಗ್‌ಗಳಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದರು. ಬಳಿಕ ಬೆಂಗಳೂರಿನಲ್ಲಿ ತಮ್ಮ ಕಾಯಂ ಗ್ರಾಹಕರಿಗೆ ಹೆಚ್ಚಿನ …

Read More »

ಬೆಂಗಳೂರಲ್ಲಿ ಫುಟ್ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ; ಮಹಿಳಾ ಎಂಜಿನಿಯರ್‌ಗೆ ಪೆಪ್ಪರ್ ಸ್ಪ್ರೇ!

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಮಹಿಳಾ ಎಂಜಿನಿಯರ್ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್, ಎಇ ಗೌತಮ್ ಹಾಗೂ ಎಇ ರುಚಿತಾ ಅವರ ಮೇಲೆ ಹಲ್ಲೆ ನಡೆದಿದೆ. ರುಚಿತಾ …

Read More »