Breaking News

Breaking News

ಸುಳ್ಳು ಸುದ್ದಿ’ಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್ : ‘ಸಮನ್ವಯ ಸಮಿತಿ’ ರಚಿಸಿ ರಾಜ್ಯ ಸರ್ಕಾರ ಆದೇಶ..

ಬೆಂಗಳೂರು ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್ಲೈನ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಸೈಬರ್ ವಿಭಾಗದ (ಸಿ ಆಯಂಡ್ ಎನ್) ಎಡಿಜಿಪಿ, ಗೃಹ ಇಲಾಖೆ, ಐಟಿಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಮಾಹಿತಿ ಇಲಾಖೆಯ ಕಾರ್ಯದರ್ಶಿ, ಸರ್ಕಾರದ ನಾಮನಿರ್ದೇಶನ ಮಾಡಿದ ಕಾನೂನು ಸಲಹೆಗಾರ, ಐಟಿಬಿಟಿ …

Read More »

ಹಣಕಾಸಿನ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ…

ಹುಬ್ಬಳ್ಳಿ ಹಣಕಾಸಿನ ವಿಚಾರಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರೂರು ಗ್ರಾಮದ ಜಗದೀಶ ಢಾಬಾದಲ್ಲಿ ತಡರಾತ್ರಿ ನಡೆದಿದೆ.ವರೂರು ಗ್ರಾಮದ ಸುಧೀರ ಹುಲಗಣ್ಣವರ್ (31) ಕೊಲೆಯಾದ ಯುವಕನಾಗಿದ್ದಾನೆ. ಅದೇ ಗ್ರಾಮದ ಸಾಗರ ಮಹಾದೇವಪ್ಪ ಗಬ್ಬನ್ನವರ ಹಾಗೂ ಸುಧೀರ ಇಬ್ಬರೂ ಊಟ ಮಾಡುವ ವೇಳೆ ಹಣಕಾಸಿನ ವಿಚಾರಕ್ಕೆ ಜಗಳ ಆರಂಭವಾಗಿದೆ. ನೋಡು ನೋಡುತ್ತಿದ್ದಂತೆ ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ಮೇಲೆ ಸಾಗರ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಆಗ ಸುಧೀರ ಸ್ಥಳದಲ್ಲಿಯೇ …

Read More »

ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ‌

ಮಾರ್ಚ್‌ 15: ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ.ಲೋಕಸಭಾ ಚುನಾವಣೆಯ ತಯಾರಿ ಒಂದು ಕಡೆಯಾದ್ರೆ, ಇತ್ತ ತಮ್ಮ ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ಮಾಜಿ ಸಚಿವ ಹಾಗೂ ಗೋಕಾಕ್‌ ಸಾಹುಕಾರ್‌ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ …

Read More »

ಬೆಂಗಳೂರಿನ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿಗಾಗಿ ಅವಳಿನಗರದಲ್ಲಿ ಹುಡುಕಾಟ..!

ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿಗಾಗಿ ರಾಷ್ಟ್ರೀಯ ತನಿಖಾ ದಳದ (ಐಎನ್‌ಐ) ಸಿಬ್ಬಂದಿ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ ಕೈಗೊಂಡಿದೆ.ಶಂಕಿತ ಆರೋಪಿ ಬಳ್ಳಾರಿ, ಕಲಬುರಗಿ, ಹೊಸಪೇಟೆ ಸುತ್ತಾಡಿದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಐಎನ್‌ಐ ಸಿಬ್ಬಂದಿ ಅಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಶಂಕಿತ ಓಡಾಡಿದ ಸ್ಥಳಗಳನ್ನು ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಬಾಂಬ್‌ ಇಟ್ಟ ಆರೋಪಿ ಪತ್ತೆಯಾಗದ ಕಾರಣ ಐಎನ್‌ಐ ರಾಜ್ಯದಾದ್ಯಂತ ಸಿಸಿಟಿವಿ ಕ್ಯಾಮೆರಾ ಪರಿಶೀಲನೆಗೆ ಸೂಚಿಸಿದೆ …

Read More »
Featured Video Play Icon

3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ ಜನಪ್ರೀಯ ನಾಯಕರು. ಇಂದು 72 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. …

Read More »
Featured Video Play Icon

ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಸಚಿವ ಜೋಶಿ: ಏರ್ಪೋರ್ಟ್ ನಲ್ಲಿ ಅದ್ದೂರಿ ಸ್ವಾಗತ…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೌದು.. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಇನ್ನೂ …

Read More »

ಧಾರವಾಡ ಲೋಕಸಭೆ: ಟಿಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವ ಜೋಶಿ ಅಭಿನಂದನೆ

ಹುಬ್ಬಳ್ಳಿ: ಐದನೇ ಬಾರಿಗೆ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪರ್ಧಿಸುತ್ತಿದ್ದು, ಟಿಕೆಟ್ ನೀಡಿ ಮತ್ತೊಮ್ಮೆ ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಹಾಗೂ ಜಿಲ್ಲೆಯ ಜನರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ. ಹೌದು.. ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದಗಳನ್ನು ತಿಳಿಸಿರುವ ಪ್ರಹ್ಲಾದ ಜೋಶಿಯವರು ಐದನೇ ಬಾರಿಗೆ ಚುನಾವಣೆ ಅಖಾಡಕ್ಕೆ ಇಳಿಯುತ್ತಿರುವುದು ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಲ್ಲದೇ ಕಳೆದ ಇಪ್ಪತ್ತು ವರ್ಷಗಳಿಂದ ಧಾರವಾಡ ಲೋಕಸಭಾ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ದೆಹಲಿಯಲ್ಲಿ ಬಿಗಿ ಭದ್ರತೆ..

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಹಲವು ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಶಾನ್ಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗುವ ಮೂಲಕ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗೆ (ಸಿಎಎ) ಸಂಸತ್ತು 2019ರ ಡಿಸೆಂಬರ್‌ 11ರಂದು ಅಂಗೀಕಾರ ನೀಡಿತ್ತು. ಅದಕ್ಕೆ ರಾಷ್ಟ್ರಪತಿಯವರು ಮಾರನೆಯ ದಿನವೇ ಅಂಕಿತ ಹಾಕಿದ್ದರು. …

Read More »

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರನ್ ಕಾರ್ಯಕ್ರಮ: ಚಾಲನೆ ನೀಡಿದ ಸಿಎಂ..

ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read More »

ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು…? 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು…

ವರದಕ್ಷಿಣೆ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು. ವರದಕ್ಷಿಣೆ ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್‌ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.

Read More »