BigTv News
October 28, 2026
Breaking News
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.15ರಂದು ವಿದ್ಯಾರ್ಥಿಗಳನ್ನು ಹೊಟೇಲ್‌ನ ಕೊಠಡಿಯಲ್ಲಿ ಕೂಡಿ ಹಾಕಿ ಬಲವಂತವಾಗಿ ಹಾಡು ಹಾಡಿಸಿ, ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಇತರರಿಗೆ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ರಾಗಿಂಗ್ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೈಕಾಲು ಮುರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ಅಕ್ಷಯ ವಿ.ಎಸ್. …
Read More »
BigTv News
October 28, 2026
Breaking News
ಮಂಗಳೂರು: ಯುವ ಜೋಡಿಗೆ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದ ಹೊಸಬೆಟ್ಟು ನಿವಾಸಿ ಸೋಮನಾಥ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಪೊಲೀಸರ ದೌರ್ಜನ್ಯ ಹಾಗೂ ಸುಳ್ಳು ದೂರಿನಿಂದಲೇ ಸೋಮನಾಥ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಎದುರಿಟ್ಟು ಬೃಹತ್ ಪ್ರತಿಭಟನೆ ನಡೆಸಿದರು. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಶಾಸಕ ಡಾ. ವೈ. ಭರತ್ …
Read More »
BigTv News
October 28, 2026
Breaking News
ಉಡುಪಿ: ಬ್ರಹ್ಮಾವರದಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ರೌಡಿಶೀಟರ್ ಸುಜಿತ್ ಪಿಂಟೊ (43) ಹತ್ಯೆಯಲ್ಲಿ ಅಂತ್ಯಗೊಂಡಿದೆ. ಮದ್ಯದ ಅಮಲಿನಲ್ಲಿ ಸುಜಿತ್ ಹಾಗೂ ರಿಕ್ಷಾ ಚಾಲಕ ಪ್ರಮೋದ್ ನಡುವೆ ಜಗಳ ನಡೆದಿದ್ದು, ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸುಜಿತ್‌ನಿಂದ ಪ್ರಮೋದ್‌ಗೆ ಹಣ ಪಾವತಿ ಬಾಕಿ ಇದ್ದುದೇ ಗಲಾಟೆಗೆ ಕಾರಣ ಎನ್ನಲಾಗಿದೆ. ಹಲ್ಲೆಯಿಂದ ಸುಜಿತ್ ರಸ್ತೆಯಲ್ಲೇ ಮೃತಪಟ್ಟಿದ್ದು, ಆರೋಪಿ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಸುಜಿತ್ 2018ರ …
Read More »
BigTv News
October 27, 2026
Breaking News
ತುಮಕೂರು: ಚಿಕ್ಕನಾಯಕನಹಳ್ಳಿಯಲ್ಲಿ ಬೀಡಿ ಕೇಳಿದ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಬಜಾರ್ ರಸ್ತೆಯ ಅಂಗಡಿ ಹಿಂಭಾಗ ಶಿವರಾಜ್ ಎಂಬವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ದಾದಾಪೀರ್ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 13ರ ರಾತ್ರಿ ಮದ್ಯದ ಅಮಲಿನಲ್ಲಿದ್ದ ಶಿವರಾಜ್, ದಾದಾಪೀರ್‌ನನ್ನು ಬೀಡಿ ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಶಿವರಾಜ್ ತನ್ನ ತಾಯಿಯನ್ನು ನಿಂದಿಸಿದ್ದರಿಂದ ಆಕ್ರೋಶಗೊಂಡ ದಾದಾಪೀರ್ ಬಂಡೆಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ …
Read More »
BigTv News
October 27, 2026
Breaking News
ತುಮಕೂರು: ದಿಬ್ಬೂರು ಸಮೀಪದ ವಿದೇಶಿ ಪ್ರಜೆಗಳ ಬಂಧನ ಕೇಂದ್ರದಿಂದ ನೈಜೀರಿಯಾ ಮೂಲದ ಮಹಿಳೆಯೊಬ್ಬರು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 20ರಂದು ಕಿಟಕಿಯ ಕಬ್ಬಿಣದ ಸರಳು ಕತ್ತರಿಸಿ 33 ವರ್ಷದ ಅಡೆವೋಲೆ ಅಡೆತು ಅನು ಅಲಿಯಾಸ್ ರೆಜಿನಾ ಜಾರಾ ಪರಾರಿಯಾಗಿದ್ದಾರೆ. ಬಂಧನ ಕೇಂದ್ರದಲ್ಲಿ ಎತ್ತರದ ಕಾಂಪೌಂಡ್ ಗೋಡೆ, ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಇರುವ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಕೇಂದ್ರದಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು …
Read More »
BigTv News
October 27, 2026
Breaking News
ಮಣಿಪಾಲ: ಗರುಡ ಗ್ಯಾಂಗ್ ಮೇಲೆ ದಾಳಿ ನಡೆಸಲು ಮಾರಕಾಸ್ತ್ರಗಳೊಂದಿಗೆ ಸಂಚು ರೂಪಿಸುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಅ.24ರಂದು ವಿದ್ಯಾರತ್ನ ನಗರ ಸಮೀಪ ಬಂಧಿಸಿದ್ದಾರೆ. ಕಿನ್ನಿಮುಲ್ಕಿಯ ಪರ್ವೇಝ್ (26) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯಿಂದ ಕಬ್ಬಿಣದ ಲಾಂಗ್ ಹಾಗೂ ಚಾಕು ವಶಪಡಿಸಿಕೊಂಡಿದ್ದಾರೆ. ಗರುಡ ಗ್ಯಾಂಗ್‌ನ ದಾವೂದ್, ಇಸಾಕ್ ಸೇರಿದಂತೆ ಕೆಲವರ ಮೇಲಿನ ವೈಮನಸ್ಸಿನಿಂದ ದಾಳಿಗೆ ಸಂಚು ರೂಪಿಸಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ವಿರುದ್ಧ ಈಗಾಗಲೇ …
Read More »
BigTv News
October 27, 2026
Breaking News
ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ಕೆಲಕಾಲ ವಕೀಲರೊಂದಿಗೆ ಮಾತುಕತೆ ನಡೆಸಿ, ಬಳಿಕ ಏಕಾಏಕಿ ಚಾಕುವಿನಿಂದ ಕತ್ತು ಕೊಯ್ದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ವೆಂಕಟರಮಣಪ್ಪ ಅವರನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಯ ಪತ್ತೆಗೆ …
Read More »
Shaikh BigTv
October 27, 2026
Breaking News, Crime, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ ಎಚ್ಚರಿಕೆ! 10 ದಿನ ಸರ್ಕಾರಕ್ಕೆ ಗಡುವು ನೀಡಿದ ಗುಣಧರನಂದಿ ಸ್ವಾಮೀಜಿ… ಹುಬ್ಬಳ್ಳಿ ಜಮಖಂಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ; ಡಿಸೆಂಬರ್‌ನಲ್ಲಿ ಸಲ್ಲೇಖನ ವ್ರತ ಆರಂಭಿಸುವುದಾಗಿ ಎಚ್ಚರಿಕೆ… ಜೈನ ಸಮುದಾಯದ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು. ಜೈನ ನಿಗಮ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 10 ದಿನಗಳ …
Read More »
BigTv News
October 27, 2026
Breaking News
ಬೆಂಗಳೂರು: ಪ್ರೀತಿಸುತ್ತಿದ್ದ ಯುವತಿ ತನ್ನಿಂದ ದೂರಾದಳು ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಆಕೆಯ ಸಂಬಂಧಿಕರ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಘಟನೆ ಕೋಣನಕುಂಟೆಯ ಬೀರೇಶ್ವರ ನಗರದಲ್ಲಿ ನಡೆದಿದೆ. ನಂದನ್ ಎಂಬಾತ ಈ ಕೃತ್ಯ ಎಸಗಿದ ಆರೋಪಿ. ಯುವತಿ ಮಾತನಾಡಲು ನಿರಾಕರಿಸಿದ್ದರಿಂದ ಭಾನುವಾರ ರಾತ್ರಿ ಆಕೆಯ ಮನೆ ಬಳಿ ತೆರಳಿ ಗಲಾಟೆ ನಡೆಸಿದ್ದಾನೆ. ಮನೆಯವರು ಬಾಗಿಲು ತೆರೆಯದಿದ್ದಾಗ ಕೋಪಗೊಂಡು ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ …
Read More »
BigTv News
October 27, 2026
Breaking News
ಕಾಸರಗೋಡು: ಅಪ್ರಾಪ್ತ ಮಗನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 49 ವರ್ಷದ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ಕೊಡಗಿನ ಅಯ್ಯಪ್ಪ ವೈ.ಎಸ್. (23) ಎಂಬಾತನನ್ನು ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ನಿಲ್ದಾಣದ ಬಳಿಕ ಮಹಿಳೆ ಮತ್ತು ಮಗ ಮಾತ್ರ ಬೋಗಿಯಲ್ಲಿದ್ದ ವೇಳೆ ಆರೋಪಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮಹಿಳೆಯ ಮುಖ ಹಾಗೂ ಕುತ್ತಿಗೆಗೆ ಗಾಯಗಳಾಗಿದ್ದು, ತಕ್ಷಣ ರೈಲಿನ ತುರ್ತು ಸರಪಳಿ ಎಳೆದು ರೈಲು ನಿಲ್ಲಿಸುವ ಮೂಲಕ ತಪ್ಪಿಸಿಕೊಂಡಿದ್ದಾರೆ. …
Read More »