BigTv News
July 19, 2026
Breaking News
ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಾಗೂ ವರದಕ್ಷಿಣೆ ಕಿರುಕುಳದಿಂದ ಬೇಸತ್ತ 25 ವರ್ಷದ ಕಾವ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾವ್ಯ ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನವರಾಗಿದ್ದು, ಮೂರು ವರ್ಷಗಳ ಹಿಂದೆ ನವೀನ್ ಜೊತೆ ವಿವಾಹವಾಗಿದ್ದರು. ವಿವಾಹವಾಗಿ ಮೂರು ವರ್ಷ ಕಳೆದರೂ ಮಕ್ಕಳಾಗದ ಕಾರಣ ಪತಿ ಹಾಗೂ ಕುಟುಂಬಸ್ಥರು ಜಗಳವಾಡುತ್ತಿದ್ದು, ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ …
Read More »
BigTv News
July 19, 2026
Breaking News
ಬೆಂಗಳೂರಿನ ಎಚ್‌ಎಎಲ್ ಠಾಣೆ ವ್ಯಾಪ್ತಿಯ ಚಿನ್ನಪ್ಪನಹಳ್ಳಿಯಲ್ಲಿ ನೇಪಾಳ ಮೂಲದ ಯುವಕ ಗಜೇಂದ್ರ ವಿಶ್ವಕರ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 13ರಂದು ವಾಲಿಬಾಲ್ ಆಡುತ್ತಿದ್ದ ವೇಳೆ ಆರೋಪಿಗಳು ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದು, ಬಳಿಕ ರಾತ್ರಿ ಮನೆ ಬಳಿ ಮಾರಕಾಸ್ತ್ರಗಳಿಂದ ಮತ್ತೆ ಹಲ್ಲೆ ನಡೆಸಿದ್ದರು. ತೀವ್ರ ಗಾಯಗೊಂಡ ಗಜೇಂದ್ರ ಚಿಕಿತ್ಸೆ ಫಲಕಾರಿಯಾಗದೆ ಜುಲೈ 15ರಂದು ಮೃತಪಟ್ಟಿದ್ದರು. ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಪರೋಕ್ಷವಾಗಿ ಸಹಕಾರ …
Read More »
BigTv News
July 19, 2026
Breaking News
ಉಡುಪಿಯಲ್ಲಿ ಸೈಬರ್ ವಂಚಕರು ಪೊಲೀಸ್, ಇಡಿ ಹಾಗೂ ಸಿಬಿಐ ಅಧಿಕಾರಿಗಳೆಂದು ನಂಬಿಸಿ 76 ವರ್ಷದ ನಿವೃತ್ತ ಬ್ಯಾಂಕ್ ನೌಕರನಿಂದ ₹22 ಲಕ್ಷ ವಂಚಿಸಿದ್ದಾರೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ವಿಡಿಯೋ ಕರೆ ಮಾಡಿ, ಅವರ ಹೆಸರಿನಲ್ಲಿ ಮನಿ ಲಾಂಡರಿಂಗ್ ಪ್ರಕರಣವಿದೆ ಎಂದು ಸುಳ್ಳು ಹೇಳಿ ಭಯ ಹುಟ್ಟಿಸಿದ್ದಾರೆ. ಬಳಿಕ ಹಣ ಪರಿಶೀಲನೆ ಹೆಸರಿನಲ್ಲಿ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ನಂಬಿಸಿದ್ದಾರೆ. ಆರೋಪಿಗಳ ಸೂಚನೆಯಂತೆ ನಿವೃತ್ತ …
Read More »
BigTv News
July 19, 2026
Breaking News
ನೆಲಮಂಗಲ: ಮುಸ್ಲಿಂ ಯುವತಿಯೊಂದಿಗೆ ಹಿಂದೂ ಯುವಕ ಓಡಾಡಿದ್ದಕ್ಕೆ ತಾಲೂಕಿನ ಸೋಂಪುರ ಹೋಬಳಿಯ ಲಕ್ಕೂರು ಗ್ರಾಮದ ಯುವಕನನ್ನು ಮೇಲೆ ಹಲ್ಲೆ ನಡೆಸಿ ವಿಡಿಯೋ ಮಾಡಿ ವೈರಲ್ ಮಾಡಿರುವ ಘಟನೆ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ಯುವತಿ ವಿಷ ಸೇವನೆ ಮಾಡಿದ್ದು, ಗ್ರಾಮದ ತಹರೀಕ್ ಪಾಷ, ಸಯ್ಯದ್ ಕರೀಂ, ಸೋಹೇಲ್ ಪಾಷ ವಿರುದ್ಧ ಯುವತಿ ದೂರು ನೀಡಿದ್ದಾಳೆ. ಹಿರಿಯರ ಸಮ್ಮುಖ ದಲ್ಲಿ ಠಾಣೆಯಲ್ಲಿ ರಾಜಿಸಂಧಾನ ನಡೆಸಲಾಗಿದೆ …
Read More »
BigTv News
July 19, 2026
Breaking News
ಬೆಂಗಳೂರಿನಲ್ಲಿ ಬುದ್ಧಿವಾದ ಹೇಳಿದ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದ ಪುತ್ರ ರಘುಗೆ 68ನೇ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. ಮದ್ಯದ ಚಟಕ್ಕೆ ಹಣ ನೀಡುವಂತೆ ಪೋಷಕರನ್ನು ಪೀಡಿಸುತ್ತಿದ್ದ ರಘುಗೆ, ಕೆಲಸಕ್ಕೆ ಹೋಗಿ ದುಡಿಯುವಂತೆ ತಂದೆ ರಾಮಚಂದ್ರ ಬುದ್ಧಿವಾದ ಹೇಳಿದ್ದರು. ಇದರಿಂದ ಕೋಪಗೊಂಡ ಆರೋಪಿ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ …
Read More »
BigTv News
July 19, 2026
Breaking News
ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು 31 ವರ್ಷದ ಮೈಮೋನಿಸ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಗಂಡ ಜುನೈದ್ ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮದುವೆ ವೇಳೆ 45 ಗ್ರಾಂ ಚಿನ್ನ ಹಾಗೂ ಬೈಕ್ ನೀಡಿದ್ದರೂ, ಇನ್ನಷ್ಟು ಚಿನ್ನ ಮತ್ತು ಹಣ ತರುವಂತೆ ಗಂಡ ಹಾಗೂ ಮಾವ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ನಿರಂತರ ಮಾನಸಿಕ ಕಿರುಕುಳ ಮತ್ತು …
Read More »
BigTv News
July 19, 2026
Breaking News
ಶಿವಮೊಗ್ಗದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಯನ್ನು ಉಪನಗರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರ ಮಾಹಿತಿ ನೆರವಾಗಿದೆ. ಮಾಂಸದ ಮೂಲ ಮತ್ತು ಸಾಗಣೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇನ್ನೊಂದೆಡೆ, ರಿಪ್ಪನ್‌ಪೇಟೆ ಭಾಗದಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ವಶಪಡಿಸಿಕೊಂಡು ಪೊಲೀಸರು …
Read More »
BigTv News
July 19, 2026
Breaking News
ಶಿವಮೊಗ್ಗ: ನಗರದ ಕೀರ್ತಿನಗರದ 1ನೇ ಕ್ರಾಸ್‌ನಲ್ಲಿ ಯುವತಿಯೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ (22) ಮೃತರು. ಮನೆಯ ಕೊಠಡಿಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ. ತಾಯಿ ಜೊತೆಗಿನ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ವಿನೋಬನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
July 19, 2026
Breaking News
ಕಲಬುರಗಿಯಲ್ಲಿ 12 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಮೂವರು ಸ್ನೇಹಿತರಿಗೆ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಮುಖ ಆರೋಪಿ ನಾಗೇಶ ಅಲಿಯಾಸ್ ಬಾಬು ರಾಠೋಡಗೆ 25 ವರ್ಷ ಜೈಲು ಶಿಕ್ಷೆ ಮತ್ತು ₹45 ಸಾವಿರ ದಂಡ ವಿಧಿಸಲಾಗಿದೆ. ಆರೋಪಿ ನಾಗೇಶ ಪ್ರೀತಿಸುವುದಾಗಿ ನಂಬಿಸಿ ಬಾಲಕಿಯ ಮೇಲೆ ಮೂರು ಬಾರಿ ಅತ್ಯಾಚಾರ ಎಸಗಿದ್ದ. ಬಳಿಕ ಸ್ನೇಹಿತ ಶಿವರಾಜನೂ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದರೆ, …
Read More »
BigTv News
July 19, 2026
Breaking News
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ನುಗ್ಗಾನಟ್ಟಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆ ನಡೆದ ದ್ವಿಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅತ್ತಿಗೆ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಪೊಲೀಸರ ಮಾಹಿತಿ ಪ್ರಕಾರ, ಮಗನಿಗೆ ಆಸ್ತಿಯಲ್ಲಿ ಪಾಲು ನೀಡುವ ವಿಚಾರವಾಗಿ ಉಂಟಾದ ಕೌಟುಂಬಿಕ ಕಲಹವೇ ಕೊಲೆಗೆ ಕಾರಣವಾಗಿದೆ. ಗ್ರಾಮದ ಅಪರಾಧ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಮೂರು ತಿಂಗಳೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಎಸ್‌ಪಿ ಕೆ. ರಾಮರಾಜನ್ …
Read More »