BigTv News
December 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ ಬಹುತೇಕವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ವಾರಕ್ಕೆ ಒಮ್ಮೆ ಬಿಡುತ್ತಿದ್ದ ನೀರು, ಈಗ ೧೫ ದಿನಗಳಾದರೂ ನೀರು ಬರುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಭೂತ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಒಂದು ಸಾವಿರ ಪ್ರದರ್ಶನ ಮಾಡುವ ಮೂಲಕ ಮಹಾನಗರ ಪಾಲಿಕೆಗೆ ಹಿಡಿ ಶಾಪ …
Read More »
BigTv News
December 31, 2022
Breaking News, ದಾವಣಗೆರೆ
ದಾವಣಗೆರೆ : ಬಿಜೆಪಿಯವರು ನಾಟಕ, ಗಿಮಿಕ್ ಮಾಡುವುದನ್ನು ಬಿಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಮಾಯ, ಮಂತ್ರ ಮಾಡ್ತಾರಾ. ಅವರೇನೂ ಮಾಯಮಂತ್ರದ ತಂಡ ಇಟ್ಟುಕೊಂಡಿದ್ದಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದ ಬಾಪೂಜಿ ಕಾಲೇಜಿನ ಎಂಬಿಎ ಗ್ರೌಂಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮಂತ್ರಿಯಾಗಿರುವ ಕಾರಣಕ್ಕೆ ಆಹ್ವಾನ ನೀಡಿರುವುದಕ್ಕೆ ರಾಜ್ಯಕ್ಕೆ ಬಂದಿದ್ದಾರೆ. …
Read More »
BigTv News
December 31, 2022
Breaking News
ಗದಗ: ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ತಾಯಿ, ಮಗ ಸಾವಿನಲ್ಲೂ ಒಂದಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಶಿವರುದ್ರಯ್ಯ ಅಂದಾನಯ್ಯ ಪೂಜಾರ್ (38) ಮೃತಪಟ್ಟಿದ್ದರು. ಮಗನ ಸಾವಿನ ಸುದ್ದಿ ಕೇಳಿ, ಬಸಮ್ಮ ಅಂದಾನಯ್ಯ ಪೂಜಾರ್ (68) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಮಗನ ಸಾವಿನಿಂದ ಇಡೀ …
Read More »
BigTv News
December 31, 2022
Breaking News, ದೆಹಲಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಾಯಿ ಹೀರಾಬೆನ್ ಎಂದರೆ ಪಂಚಪ್ರಾಣ. ವಿನಮ್ರ ಕುಟುಂಬದ ಹಿನ್ನೆಲೆಯಿಂದ ಬಂದಿರುವ ತಮ್ಮನ್ನು ಭಾರತದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ತಾಯಿ ಹೀರಾಬೆನ್ ನೀಡಿದ ಕೊಡುಗೆಯನ್ನು ಆಗಾಗ್ಗೆ ಎತ್ತಿ ತೋರಿಸಿದ್ದರು. ಶುಕ್ರವಾರ ನಿಧನರಾದ ಹೀರಾಬೆನ್ ಅವರು ಈ ವರ್ಷ ಜೂನ್ 18ರಂದು 99 ವರ್ಷ ಪೂರೈಸಿ ತಮ್ಮ ಜೀವನದ 100ನೇ ವರ್ಷಕ್ಕೆ ಕಾಲಿಟ್ಟಿದ್ದರು. ಆಗ ಮೋದಿ ಅವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ತಾಯಿಯ ಬಗ್ಗೆ …
Read More »
BigTv News
December 31, 2022
Breaking News
ಅಜೆಕಾರು: ಕಾರು ಹಾಗೂ ಬೈಕ್ ಮುಖಾಮುಖೀ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಡಿ. 30ರಂದು ಸಂಭವಿಸಿದೆ. ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್ (32) ಹಾಗೂ ಅವರ ಸಹೋದರಿಯ ಎಂಟು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ.ಸವಾರ ನಿತ್ಯಾನಂದ ತನ್ನ ಪತ್ನಿಯನ್ನು ಕಾರ್ಕಳಕ್ಕೆ ಬಿಟ್ಟು ಮತ್ತೆ ಅಂಡಾರು ಕಡೆ ಸಹೋದರಿಯ ಮಗುವನ್ನು ಬೈಕ್‌ನಲ್ಲಿ ಕೂರಿಸಿಕೊಂಡು …
Read More »
BigTv News
December 31, 2022
Breaking News
ಬೀಜಿಂಗ್: ಕೋವಿಡ್ ಸಾಂಕ್ರಾಮಿಕತೆಯಿಂದ ತತ್ತರಿಸುತ್ತಿರುವ ಚೀನಾದಲ್ಲಿ ಜನವರಿ ಕೊನೆ ಹೊತ್ತಿಗೆ ಪ್ರತಿ ದಿನ ಸುಮಾರು 25,000 ಜನರು ರೋಗಕ್ಕೆ ಬಲಿಯಾಗಬಹುದು ಎಂಬ ಭೀತಿ ಉಂಟಾಗಿದೆ. ಏಪ್ರಿಲ್ ವೇಳೆಗೆ ದೇಶದಲ್ಲಿ 17 ಲಕ್ಷ ಜನರು ಸಾಯುವ ಆತಂಕ ಸೃಷ್ಟಿಯಾಗಿದೆ. ಕರೊನಾ ನಿಯಂತ್ರಣ ನಿಯಮಗಳಿಲ್ಲದೆ ಮೊದಲ ಚಾಂದ್ರಮಾನ ಹೊಸ ವರ್ಷದ ಹಬ್ಬದ ಆಚರಣೆ ನಡೆಯಲಿದ್ದು ಆಗ ಸಾಂಕ್ರಾಮಿಕತೆ ಭಾರಿ ಪ್ರಮಾಣದಲ್ಲಿ ಸ್ಪೋಟಗೊಳ್ಳಬಹುದು ಎಂಬ ಭಯ ಕಾಡತೊಡಗಿದೆ. 140 ಕೋಟಿ ಜನಸಂಖ್ಯೆಯ ದೇಶದಲ್ಲಿ ವಾರ್ಷಿಕ …
Read More »
BigTv News
December 31, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ : ಬಿಜೆಪಿಯ ಗಾಳಿ ಎಲ್ಲೆಡೆ ಬೀಸುತ್ತಿದೆ. ಅಮಿತ್ ಶಾ ಕಾಲಿಟ್ಟಮೇಲೆ ಸುನಾಮಿಯಾಗಿ ಪರಿವರ್ತನೆಯಾಗಿದೆ. ಅಮಿತ್ ಶಾ ಅವರ ತಂತ್ರಗಳಿಗೆಲ್ಲಾ ಯಶಸ್ಸು ಸಿಗುತ್ತಿದ್ದು, 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ‍್ಯ ಚಂದ್ರರಿರುವಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿವಿ ಆವರಣದಲ್ಲಿ ಶುಕ್ರವಾರ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್, ಜೆಡಿಎಸ್ ಆಡಳಿತದಿಂದ ಈ ಭಾಗದ ಜನರು ಬೇಸತ್ತಿದ್ದಾರೆ. ಈ …
Read More »
BigTv News
December 31, 2022
Breaking News, ದೆಹಲಿ
ನವದೆಹಲಿ: ಮಾತೃ ವಿಯೋಗದ ನೋವಿನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಪಘಾತಕ್ಕೀಡಾಗಿರುವ ಕ್ರಿಕೆಟಿಗ ರಿಷಭ್ ಪಂತ್ ಅವರ ಯೋಗಕ್ಷೇಮ ಕೋರಿದ್ದಾರೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಕ್ರಿಕೆಟಿಗ ರಿಷಬ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ.ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಪ್ರಕಟಿಸಿದ್ದಾರೆ.ಉತ್ತರಾಖಂಡದ ರೂರ್ಕಿ ಬಳಿ ಶುಕ್ರವಾರ ಮುಂಜಾನೆ ಕಾರು ಅಪಘಾತಕ್ಕೀಡಾಗಿ ವಿಕೆಟ್ ಕೀಪರ್-ಬ್ಯಾಟರ್ ತೀವ್ರವಾಗಿ ಗಾಯಗೊಂಡಿದ್ದಾರೆ. 25 …
Read More »
BigTv News
December 31, 2022
Breaking News, ಬೆಂಗಳೂರು
ಬೆಂಗಳೂರು: ಮಂಡ್ಯದಲ್ಲಿಂದು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ರಣ ಕಹಳೆ ಊದಿದ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ, ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಅವರ ಅತಿಯಾದ ಉತ್ಸಾಹ ಒಳ್ಳೆಯದಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 2023 ವಿಧಾನಸಭಾ ಚುನಾವಣೆಗೆ ಅಮಿತ್ ಶಾ ರಣ ಕಹಳೆ! ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪಂಚರತ್ನ ರಥಯಾತ್ರೆಯ ಯಶಸ್ಸು …
Read More »
BigTv News
December 31, 2022
Breaking News
ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ವಿಚಾರವಾಗಿ ಕೆಲ ದಿನಗಳ ಹಿಂದೆ ವದಂತಿಗಳು ಕೇಳಿಬಂದಿದ್ದವು. ಬಳಿಕ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿಬರುತ್ತಿದ್ದಂತೆ ಸಾವಿರಾರು ಭಕ್ತರಲ್ಲಿ ಆತಂಕ ಉಂಟಾಗಿತ್ತು. ಹೀಗಾಗಿ ಸ್ವಾಮೀಜಿಯವರನ್ನು ನೋಡಲು ಬೇರೆ ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಶ್ರೀಗಳ ದರ್ಶನಕ್ಕೆ ಅಪಾರ ಪ್ರಮಾಣದ ಜನರು ಹರಿದು ಬರುತ್ತಿದ್ದಾರೆ. ಜೊತೆಗೆ ಹಾಲಿ, …
Read More »