BigTv News
December 23, 2022
Breaking News, ಬೆಳಗಾವಿ
ಬೆಳಗಾವಿ, (ಸುವರ್ಣ ವಿಧಾನಸೌಧ) : ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನವು ನೂರು ದಿನಗಳನ್ನು ಪೂರ್ಣಗೊಳಿಸಿದ್ದು, 2006ರಲ್ಲಿ ಪ್ರಾರಂಭವಾದ ಅಧಿವೇಶನವು ಇಂದಿಗೆ(ಡಿ.22) ಶತಕದ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಪ್ರಾರಂಭಿಸಲಾಯಿತು. 12ನೆ ವಿಧಾನಸಭೆಯ ನಾಲ್ಕನೆಯ ಅಧಿವೇಶನವು 2006ರ ಸೆಪ್ಟಂಬರ್ 25ರಿಂದ 29ರವರೆಗೆ ಕೆಎಲ್‍ಇ ಸಂಸ್ಥೆಯಲ್ಲಿ 5 ದಿನಗಳ ಕಾಲ ನಡೆದಿತ್ತು. ಇದು ಬೆಳಗಾವಿಯಲ್ಲಿ ನಡೆದ ವಿಧಾನ …
Read More »
BigTv News
December 23, 2022
Breaking News, ಬೆಳಗಾವಿ
ಬೆಳಗಾವಿ : ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಿನ್ನೆ ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಚುನಾಯಿತ …
Read More »
BigTv News
December 23, 2022
Breaking News, ಬೆಳಗಾವಿ
ಬೆಳಗಾವಿ : ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ ವನ್ನು ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚೆ ನಡೆಸಲಾಗಿದೆ.ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ದೆಹಲಿಯ ಪ್ರಧಾನಿ ಕಚೇರಿಯಿಂದ ದೂರವಾಣಿ ಕರೆ ಬಂದಿದೆ ಎಂಬ ಮಾಹಿತಿ ಇದೆ. ಇದೆಲ್ಲವೂ ಚುನಾವಣೆ ಮುಂದೂಡುವ ಹುನ್ನಾರ. ಅವರು ಯಾವಾಗಲಾದರೂ ಚುನಾವಣೆ ಮಾಡಲಿ ನಮ್ಮ ಪಕ್ಷ ಸಿದ್ಧವಿದೆ ಎಂದರು. ಈ ಹಿಂದೆ …
Read More »
BigTv News
December 23, 2022
Breaking News, ಬೆಂಗಳೂರು
ಬೆಂಗಳೂರು: ಕೋವಿಡ್ ಸೋಂಕಿನಿಂದ ಮುಕ್ತವಾಗಿ ಸಹಜ ಸ್ಥಿತಿಗೆ ಮರುಳುತ್ತಿರುವ ಹೊತ್ತಿನಲ್ಲಿ ಮತ್ತೆ ಕೊರೊನಾ ಗುಮ್ಮ ವಾಪಸ್ ಆಗುತ್ತಿದೆ. ಚೀನಾ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈಗ ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಸಭೆ ಬಳಿಕ ಮತ್ತೆ ಫೇಸ್ ಮಾಸ್ಕ್ ಕಡ್ಡಾಯ ಮಾಡುವ ಸಾಧ್ಯತೆ ಇದೆ. ಕೊರೊನಾ ಸಂಬಂಧ ಈಗಾಗಲೇ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, …
Read More »
BigTv News
December 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಾಟ್ಯಾಂಜಲಿ ಕಲಾ ಮಂದಿರ ಹುಬ್ಬಳ್ಳಿ, ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ನೃತ್ಯಾರ್ಪಣ -೨೦೨೨ ಭರತನಾಟ್ಯ ಕಾರ್ಯಕ್ರಮವನ್ನು ಡಿ. ೨೪ ರಂದು ಸಂಜೆ ೫ ಗಂಟೆಗೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಟ್ಯ ವಿದೂಷಿ ಹಾಗೂ ಸೌಭಾಗ್ಯ ಮಹಾಲೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಣಿ ಅಬ್ಬಕ್ಕ ದೇವಿ ಎಂಬ ನೃತ್ಯ ರೂಪಕ ವಿದ್ವತ್ ಹಾಗೂ …
Read More »
BigTv News
December 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜನಾರ್ದನ ರೆಡ್ಡಿ ಜೊತೆಗಿನ ಸ್ನೇಹ ಯಾವತ್ತೂ ಶಾಶ್ವತ. BJP ನನಗೆ ರಾಜಕೀಯ ಸ್ಥಾನ ಮಾನ ಕೊಟ್ಟಿದೆ. ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನೂ ಬಿಡಲ್ಲ. ಕೇಂದ್ರದ ನಾಯಕರ ಜತೆ ಈ ಬಗ್ಗೆ ಮಾತನಾಡಿದ್ದೇನೆ ಎಂದು ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ವಿಚಾರ ಕುರಿತಂತೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ BJP ಯಲ್ಲಿ ಗೌರವ, ಸ್ಥಾನಮಾನ ಸಿಕ್ಕಿದೆ . ಜನಾರ್ಧನ ರೆಡ್ಡಿ ಹೊಸ ಪಕ್ಷ …
Read More »
BigTv News
December 22, 2022
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ ₹10 ಸಾವಿರ ನೀಡಲಾಗುತ್ತಿತ್ತು.ಆ ಮೊತ್ತವನ್ನು ₹20 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು …
Read More »
BigTv News
December 22, 2022
Breaking News, ದೆಹಲಿ
ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದೆ. ಹೊಸ ಉಪತಳಿ ಪತ್ತೆ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಚೀನಾದಲ್ಲಿ ಸೃಷ್ಟಿಯಾಗಿರುವ ಕೋವಿಡ್-19 ಭೀತಿಯ ಹಿಂದೆಯೇ ಭಾರತವು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ವಹಿಸುತ್ತಿದೆ. ಈ ಸಂಬಂಧ ಕೇಂದ್ರ ಆರೋಗ್ಯ …
Read More »
BigTv News
December 22, 2022
Breaking News, ಬೆಂಗಳೂರು
ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು -ಬೆಂಗಳೂರು ಅಪರಾಧ ವಿಭಾಗದ ಎಐಜಿಪಿ, ಎಂ.ಮುತ್ತರಾಜು -ಮೈಸೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ, ಬಾಬಾ ಸಾಬ್ ನೇಮಗೌಡ ಗದಗ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.
Read More »
BigTv News
December 22, 2022
Breaking News, ಬೆಳಗಾವಿ
ಬೆಳಗಾವಿ: ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು.ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ …
Read More »