Breaking News

Breaking News


ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ :
ಡಿ.ಕೆ. ಶಿವಕುಮಾರ್

ಬೆಳಗಾವಿ: ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು.ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ …

Read More »

ಕೊರೋನಾ ಸೋಂಕು ಹೆಚ್ಚಳ ಪ್ರಧಾನಿ ಮಹತ್ವದ ಸಭೆ

ನವದೆಹಲಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆಗೆ ಅವರು ಸಮಾಲೋಚನೆ ನಡೆಸಲಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್ ಓಮಿಕ್ರಾನ್ ಉಪ ತಳಿ ಬಿಎಫ್.7 ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಚೀನಾ, ಜಪಾನ್ ಮೊದಲಾದ ದೇಶಗಳಲ್ಲಿ …

Read More »

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ ನಿಧನ

ಯಲ್ಲಾಪುರ: ತಾಲ್ಲೂಕಿನ ಹಿರಿಯ ಸಾಮಾಜಿಕ, ಧಾರ್ಮಿಕ, ಸಹಕಾರಿ, ರಾಜಕೀಯ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ (90) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಅವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ತಾಲ್ಲೂಕಿನ ಕುಂದರ್ಗಿಯವರಾದ ಇವರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು. ಕುಂದರ್ಗಿಯ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದರು. 5- 6 …

Read More »

ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ  :  ಬಸವರಾಜ ಬೊಮ್ಮಾಯಿ

ಬೆಳಗಾವಿ : ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಸಾಲೆ ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ ನಿರ್ಮಿಸಲಾಗಿದ್ದು, ಈ ವರ್ಷವೇ ಆರಂಭವಾಗಲಿದೆ ನಂದಗಡದ ವೀರಭೂಮಿಯಲ್ಲಿ 75 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ …

Read More »

ಕೋವಿಡ್ ಕುರಿತು ಕೆಲವು ನಿಯಮಗಳು ಜಾರಿಗೆ : ಡಾ.ಕೆ.ಸುಧಾಕರ್‌

ಬೆಳಗಾವಿ, ; ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್‌ …

Read More »

ಕೋವಿಡ್ ಕುರಿತು ಸಿಎಂ ಇಂದು ಮಹತ್ವದ ಸಭೆ

ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ …

Read More »

ಗಮಕ ಕಲೆಯಿಂದಲೇ ಪ್ರಸಿದ್ಧಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ನಿಧನಶಿ

ಶಿವಮೊಗ್ಗ: ಗಮಕ ಕಲೆಯಿಂದಲೇ ದೇಶದಲ್ಲೇ ಪ್ರಸಿದ್ಧಿ ಪಡೆದಿದ್ದ ಎಚ್.ಆರ್.ಕೇಶವಮೂರ್ತಿ ಅವರು (88)  ನಿಧನರಾದರು. ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. 1934ರ ಫೆ.22 ರಂದು ಹೊಸಹಳ್ಳಿ ರಾಮಸ್ವಾಮಿ ಶಾಸ್ತ್ರಿ ಮತ್ತು ಲಕ್ಷ್ಮೀದೇವಮ್ಮ ದಂಪತಿಯ ಪುತ್ರರಾಗಿ ಜನಿಸಿದ ಇವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ-ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾಗಿ, 16 ನೇ ವಯಸ್ಸಿನಿಂದ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ …

Read More »

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜನರ ನಿರ್ಲಕ್ಷ್ಯ: ಖಾಕಿಗೆ ದೊಡ್ಡ ಸವಾಲು

ಹುಬ್ಬಳ್ಳಿ : ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಐಪಿಸಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಿದ್ದರೂ ಕೂಡ ಜನರು ಮಾತ್ರ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಕಮೀಷನರೇಟ್ ನಿಂದ ನಿಷೇಧಾಜ್ಞೆ ಜಾರಿ ಮಾಡಿದ್ದರೂ ಕೂಡ ಜನರು ಗುಂಪು ಕಟ್ಟಿಕೊಂಡು ಓಡಾಡುತ್ತಿದ್ದು, ಪೊಲೀಸ್ ಸಿಬ್ಬಂದಿಗಳಿಗೆ ಜನರನ್ನು ಚದರಿಸುವುದೇ ದೊಡ್ಡ ಸವಾಲಾಗಿದೆ. …

Read More »

ತೆರುವು ಕಾರ್ಯಾಚರಣೆಯಲ್ಲಿ ಸಹ ತಾರತಮ್ಯ- ಹಿರಿಯ ವಕೀಲ

ಹುಬ್ಬಳ್ಳಿ : ಇಂದು ರಾಜ್ಯ ಸರ್ಕಾರ ಹಾಗೂ ಬಿಆರಟಿಎಸ್ ಅವರು ದರ್ಗಾ ತೆರವು ಮಾಡಿದ್ದಾರೆ. ಇಲ್ಲಿನ ದರ್ಗಾಕ್ಕೆ ಮಾತ್ರ ೪೪ ಮೀಟರ್ ಜಾಗವನ್ನು ಒತ್ತುವರಿ ಮಾಡುತ್ತಿದ್ದಾರೆ. ಬೇರೆ ಸ್ಥಳಗಳಲ್ಲಿ ೩೫ ಮೀಟರ್ ಮಾತ್ರ ಇದೆ. ದರ್ಗಾ ಮುಂಭಾಗದಲ್ಲಿ ಶಾಸಕ ಬೆಲ್ಲದ ಅವರ ಜಾಗವಿದೆ. ಈ ದರ್ಗಾ ಉಳಿಸಿ ಬೆಲ್ಲದ ಅವರ ಜಾಗವನ್ನು ಯಾಕೆ ಒತ್ತುವರಿ ಮಾಡಲಿಲ್ಲ. ರಾಜಕೀಯ ಪ್ರಯತ್ನದಿಂದ ಅವರ ಜಾಗವನ್ನು ಬಿಟ್ಟು ನಮ್ಮ ದರ್ಗಾವನ್ನು ತೆರವು ಮಾಡಿದ್ದಾರೆ ಎಂದು …

Read More »

ಅಲ್ಪಸಂಖ್ಯಾತರಿಗೆ ಕಷ್ಟ ಕೊಡುವುದು ಬಿಜೆಪಿ ಉದ್ದೇಶ: ಅನೀಲಕುಮಾರ್ ಪಾಟೀಲ

ಹುಬ್ಬಳ್ಳಿ: ಆಡಳಿತಾರೂಢ ಬಿಜೆಪಿ ಸರ್ಕಾರ ಜಾತಿ ಜಾತಿಗಳ ನಡುವೆ ವೈಷಮ್ಯ ಹುಟ್ಟು ಹಾಕುತ್ತಿದೆ. ಲಕ್ಷಾಂತರ ಜನರ ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡುವುದು ಮಾತ್ರವಲ್ಲದೆ ಕೋಮುವಾದ ಸೃಷ್ಟಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ದರ್ಗಾ, ಮಸೀದಿ, ದೇಗುಲ, ಚರ್ಚ್ ಯಾವುದೇ ಇದ್ದರೂ ಉಳಿಸುವ ಕಾರ್ಯವನ್ನು ಮಾಡಬೇಕು ಎಂದು ಹುಬ್ಬಳ್ಳಿ-ಧಾರವಾಡ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಅನೀಲಕುಮಾರ್ ಪಾಟೀಲ ಹೇಳಿದರು. ಭೈರಿದೇವರಕೊಪ್ಪದ ದರ್ಗಾ ತೆರವು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, …

Read More »