BigTv News
December 14, 2022
Breaking News, ಚಾಮರಾಜನಗರ
ಚಾಮರಾಜನಗರ: ಯಾರೂ ಏನೇ ಟೀಕೆ ಮಾಡಿದರೂ ನಾನು ಅಂಜಲ್ಲ, ಅಳುಕಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 1100 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಟೀಕೆಗಳಿಗೆ ನಮ್ಮ ಸರ್ಕಾರ ಅಳುಕಲ್ಲ. ಸತ್ಯ ಮೇವ ಜಯತೆ ನುಡಿ ಮೇಲೆ ಸತ್ಯ ಹಾಗೂ ಆತ್ಮಸಾಕ್ಷಿ ಮೇಲೆ ಸರ್ಕಾರ ನಡೆಸುತ್ತಿದೆ. ಜನಪರವಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಚಾಮರಾಜನಗರಕ್ಕೆ …
Read More »
BigTv News
December 14, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ …
Read More »
BigTv News
December 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳಾದ ಗೋಂಧಳಿ, ಬುಡಬುಡಕಿ, ಜೋಶಿ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಾದೇಶ ನೀಡಲು ಶೀಘ್ರವಾಗಿ ಅನುಮತಿ ನೀಡಬೇಕು ನೀಡದಿದ್ದರೇ ಡಿಸೆಂಬರ್ ೧೯ ರಂದು ಬೆಳಗಾವಿಯಲ್ಲಿ ಧರಣಿ ಕೈಗೊಳ್ಳಲಾಗುವುದು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜದ ಸಂಘದ ರಾಜ್ಯಧ್ಯಕ್ಷರಾದ ವಿಠ್ಠಲ ಗಣಚಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಗೋಂಧಳಿ, ಬುಡ ಬುಡಕಿ, ಜೋಶಿ ಸಮುದಾಯಗಳಿಗೆ ನೀಡುತ್ತಿರುವ ಜಾತಿ ಪ್ರಮಾಣ ಪತ್ರದಲ್ಲಿ …
Read More »
BigTv News
December 13, 2022
Breaking News, ಧಾರವಾಡ
ಧಾರವಾಡ: ತಾಲೂಕಿನ ತಡಕೋಡ ಗ್ರಾಮದಲ್ಲಿ ಬಸ್ಸಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲೇ ಟೈರ್‌ಗೆ ಬೆಂಕಿ ಹಚ್ಚಿ ಕೆಎಸ್‌ಆರ್‌ಟಿಸಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ದಿನನಿತ್ಯ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್ಸಿನ ಸೌಕರ್ಯವಿಲ್ಲದೇ ಪರದಾಡುವಂತಾಗಿದೆ. ಬಸ್ಸುಗಳಿದ್ದರೂ ಅವುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಈ ಸಮಸ್ಯೆಯನ್ನು ಹಲವು ಬಾರಿ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಕ್ಯಾರೆ ಎಂದಿಲ್ಲ ಎಂದು ಆಕ್ರೋಶಗೊಂಡ ಸ್ಥಳೀಯರು ಟೈರ್‌ಗೆ …
Read More »
BigTv News
December 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜಲಮಂಡಳಿ ನೌಕರರು ಹಾಗೂ ಎಲ್ & ಟಿ ಕಂಪನಿ ನಡುವಿನ ಕಿತ್ತಾಟದಿಂದಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಭೀಕರಗೊಂಡಿದೆ. ಕಳೆದ 10 ದಿನಗಳಿಂದ ನೀರು ಪೂರೈಕೆಯಾಗದ ಕಾರಣ ಇಂದು ಬೆಳಗ್ಗೆ ನವನಗರ, ಗಾಮನಗಟ್ಟಿ, ಪ್ರಜಾನಗರ ಹಾಗೂ ಸಿಟಿಪಾರ್ಕ್ ನಿವಾಸಿಗಳು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಜಲಮಂಡಳಿಯ ಕೆಲವು ವಾಲ್ವಮನ್‌ಗಳು ಉದ್ದೇಶ ಪೂರ್ವಕವಾಗಿ ನೀರು ವಿತರಣೆ ವ್ಯವಸ್ಥೆ ಹದಗಡಿಸುತ್ತಿದ್ದಾರೆ. ಮಧ್ಯರಾತ್ರಿ …
Read More »
BigTv News
December 12, 2022
Breaking News, ಹುಬ್ಬಳ್ಳಿ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಸಾಕಷ್ಟು ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್ಎಸ್‌ಯುಐ ಸಂಘಟನೆ ಕಾರ್ಯಕರ್ತರು ಡಿ.17 ರಂದು ರಾಜ್ಯದಾದ್ಯಂತ ಎಲ್ಲಾ ಕಾಲೇಜುಗಳಿಗೆ ಬಂದ್ ಕರೆ ಕೊಟ್ಟಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖ್ಯಸ್ಥ ಹಾಗೂ ಕವಿವಿ ಸಿಂಡಿಕೇಟ್ ಸದಸ್ಯ ರವಿ ಮಾಳಗೇರ, ಯುಯುಸಿಎಸ್ ಎಂಬ ಪದ್ಧತಿ ಜಾರಿಗೆ ತಂದ ಮೇಲೆ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸಾಕಷ್ಟು ವಿಳಂಬವಾಗುತ್ತಿದೆ. ವಿದ್ಯಾರ್ಥಿಗಳು ಮೂರನೇ ಸೆಮಿಸ್ಟರ್‌ಗೆ ಹೋದರೂ ಅವರಿಗೆ ಇನ್ನೂ ಮೊದಲ …
Read More »
BigTv News
December 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಲಕ ಅಮರಗೋಳದಿಂದ ಹುಬ್ಬಳ್ಳಿಯತ್ತ ಅತಿವೇಗವಾಗಿ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ರೋಡ್ ಡಿವೈಡರ್‌ಗೆ ರಭಸವಾಗಿ ಗುದ್ದಿದ್ದರಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಈ ಘಟನೆ ಸಂಬಂಧವಾಗಿ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
December 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಅಭಿನಯದ ೧೨೫ ನೇ ಬಹುನಿರೀಕ್ಷಿತ ‘ವೇದ’ ಚಲನಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ ರಂದು ನವೀನ್ ಮೀಡಿಯಾ ಸೊಲ್ಯೂಷನ್ಸ್ ನ ಜಿ.ಜಿ. ದ್ಯಾವನಗೌಡ್ರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ೧೪ ರಂದು ಸಂಜೆ ೫ .೩೦ ಕ್ಕೆ ನಗರದ ರೈಲ್ವೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, …
Read More »
BigTv News
December 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೈಕ್ ಸವಾರನೊಬ್ಬ ಆಯ ತಪ್ಪಿ ಪಾದಚಾರಿಗೆ ಗುದ್ದಿ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಕಲಘಟಗಿ ರಸ್ತೆಯಲ್ಲಿ ನಡೆದಿದ್ದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪಶು ಸಂಗೋಪನಾ ಇಲಾಖೆಯ ನೌಕರ ಶ್ರೀಕಾಂತ ನಿಂಬಾಳ್ಕರ್ (37) ಮೃತ ಬೈಕ್ ಸವಾರನಾಗಿದ್ದು, ನೌಕರಿಗೆಂದು ಹೋಗುತ್ತಿರುವಾಗ ಬೈಕ್ ಸ್ಕಿಡ್ ಆಗಿ ಪಾದಾಚಾರಿಗೆ ಗುದ್ದಿದ್ದಾನೆ.ತಲೆಗೆ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಶ್ರೀಕಾಂತ ಮೃತಪಟ್ಟ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಪಾದಚಾರಿ ಸಿದ್ದು ಎಮ್ಮೆಟ್ಟಿಗೆ ಗಂಭೀರ ಗಾಯ, …
Read More »
BigTv News
December 12, 2022
Breaking News, ವಿಜಯಪುರ
ವಿಜಯಪುರ: ವ್ಯಕ್ತಿಯೊಬ್ಬರನ್ನು ನಡು ರಸ್ತೆಯಲ್ಲಿ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಬೆಳಗ್ಗೆ ವಿಜಯಪುರ ತಾಲ್ಲೂಕಿನ ಅತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜು ಗರುಡ್ಕರ ಹತ್ಯೆಯಾಗಿರುವ ವ್ಯಕ್ತಿ. ರಾಜು ಗರುಡ್ಕರ ಅವರು ಎಲ್ಲಿಗೆ ಹೋಗುತ್ತಿದ್ದರು ಎಂದು ತಿಳಿದುಬಂದಿಲ್ಲ. ರಸ್ತೆಯಲ್ಲಿ ಸಾಗುತ್ತಿದ್ದಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ. ಏಕಾಏಕಿ ಬಿದ್ದ ಹೊಡೆತದಿಂದ ತತ್ತರಿಸಿದ ರಾಜು ಅಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ, …
Read More »