Breaking News

Breaking News

ಮಾಜಿ ಸಿಎಂ ಹಟ್ಟುಹಬ್ಬ ದಿನವೇ ಐತಿಹಾಸಿಕ ಶ್ರೀನಿವಾಸ ಕಲ್ಯಾಣೋತ್ಸವ

ರಾಮನಗರ: ರಾಜ್ಯದ ಅಭಿವೃದ್ಧಿ ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ಒಳಿತಾಗಲಿ ಎಂಬ ಕಾರಣಕ್ಕೆ ಡಿ.16ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಆಯೋಜಿಸಲಾಗಿದೆ ಎಂದು ಜೆಡಿಎಸ್​ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ. ಅಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವೂ ಆಗಿದೆ. ಕಾರ್ಯಕ್ರಮ ಪಕ್ಷಾತೀತವಾಗಿರಲಿದ್ದು, ಎಲ್ಲರನ್ನೂ ಆಹ್ವಾನಿಸಲಿದ್ದೇವೆ. ಅತಿಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು ರಾಮನಗರ ಸೇರಿ ಪಕ್ಕದ ಮಂಡ್ಯ, ಮೈಸೂರು, ತುಮಕೂರು, …

Read More »

ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಇರುವುದಿಲ್ಲ :
ನಿತೀಶ್‌ ಕುಮಾರ್‌

ಪಾಟ್ನಾ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಇರುವುದಿಲ್ಲ. ಪ್ರಧಾನ ರಂಗವೇ ಇರುತ್ತದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಪಾಟ್ನಾದಲ್ಲಿ ಭಾನುವಾರ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿದಾಗ ಮಾತ್ರ ಬಹುಮತ ಸಾಧ್ಯ ಎಂದರು.ಪ್ರತಿಪಕ್ಷಗಳ ಒಕ್ಕೂಟ ರಚನಗೆ ತಾವೂ ಕೂಡ ಶ್ರಮಿಸುವುದಾಗಿ ಹೇಳಿದ್ದಾರೆ. 2020ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಯು ವಿರುದ್ಧ ಕೆಲಸ ಮಾಡಿತ್ತು ಎಂದು ಆರೋಪಿಸಿದ್ದಾರೆ. ಬಿಹಾರಕ್ಕೆ ವಿಶೇಷ ಸ್ಥಾನಮಾನ …

Read More »


ಮಾಂಡೌಸ್ ಚಂಡಮಾರುತ ಅಬ್ಬರ : ಶಾಲೆ, ಕಾಲೇಜು ರಜೆ

ಬೆಂಗಳೂರು : ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದ್ದು, ಇದರ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ಬಗ್ಗೆ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಡಳಿತ ಸೋಮವಾರವಾದ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.ವ್ಯಾಪಕವಾಗಿ ಮಳೆ ಆಗುತ್ತಿರುವ ಕಾರಣ ವಿದ್ಯಾರ್ಥಿಗಳು ಬರುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ …

Read More »


ಎರಡು ಬಸ್​ಗಳ ನಡುವೆ ಅಪಘಾತ : ಓರ್ವ ಸಾವು

ಬಳ್ಳಾರಿ: ಆಂಧ್ರಪ್ರದೇಶ ಗಡಿಭಾಗದ ಹೀರೆಹಾಳ್ ಗ್ರಾಮದ ಬಳಿ ಇಂದು ಬೆಳಗ್ಗೆ ಎರಡು ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ. ರಸ್ತೆ ಉಬ್ಬಿನಲ್ಲಿ ಮುಂದಿನ ಬಸ್ ನಿಧಾನಿಸಿದಾಗ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಡಿಕ್ಕಿಯಾಗಿದೆ. ಜೊತೆಗೆ ರೋಡ್‌ ಡಿವೈಡರ್‌ಗೂ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ನಾಲ್ಕೈದು ಜನ ಗಾಯಗೊಂಡಿದ್ದಾರೆ. ಗಾಯಾಳುಗಳು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More »

ರಾಜಕೀಯ ಕಾರ್ಯಕರ್ತ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲು

ಸರ್ಕಾರಿ ಅಧಿಕಾರಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯಕರ್ತ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕುಂಕುವ್ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್. ಪ್ರಶಾಂತ್ ಕುಮಾರ್ ಅವರ ದೂರಿನ ಆಧಾರದ ಮೇಲೆ ನ್ಯಾಮತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ಅಕ್ಟೋಬರ್ ೩೦ರಂದು ಪ್ರಶಾಂತ್ ಕುಮಾರ್ ದೂರು ದಾಖಲಿಸಿದ್ದು, ಕೆಲವೇ ದಿನದಲ್ಲಿ ಅವರನ್ನು ಚನ್ನಗಿರಿ ವೃತ್ತದ ನಲ್ಲೂರಿಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ನ್ಯಾಮತಿ ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾದ …

Read More »


ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

ನವದೆಹಲಿ : ನೀವು ರೈಲಿನಲ್ಲಿ ಪ್ರಯಾಣಿಸಿದ್ರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹಿರಿಯ ನಾಗರಿಕರಿಗೆ ನೀಡಿದ ವಿನಾಯಿತಿಯ ಬಗ್ಗೆ ದೊಡ್ಡ ಮಾಹಿತಿಯನ್ನ ನೀಡಿದ್ದಾರೆ. ಹಿರಿಯ ನಾಗರಿಕರಿಗೆ ನೀಡಲಾದ ವಿನಾಯಿತಿಯನ್ನ ರೈಲ್ವೆ ಪುನಃಸ್ಥಾಪಿಸಲಿದೆ. ಮಾಧ್ಯಮ ವರದಿಗಳ ಪ್ರಕಾರ, ರೈಲ್ವೆ ಮಂಡಳಿಯು ಹಿರಿಯ ನಾಗರಿಕರ ವಯಸ್ಸಿನ ಮಿತಿಯನ್ನ ಬದಲಾಯಿಸಲು ಯೋಜಿಸುತ್ತಿದೆ. ಇದರೊಂದಿಗೆ, ಟಿಕೆಟ್’ನಲ್ಲಿ ರಿಯಾಯಿತಿ ಲಭ್ಯವಿದೆ. ಆ ರಿಯಾಯಿತಿಗಳು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿರುತ್ತವೆ. ಅದೇ …

Read More »


ಎಲ್ಲಾ ಕಡೆಯೂ ಗುಜರಾತ್‌ ಮಾದರಿ ಅನ್ವಯಿಸಲು ಆಗಲ್ಲ : ಶೆಟ್ಟರ್

ಬಾಗಲಕೋಟೆ: ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿ ಚುನಾವಣೆ ತಂತ್ರಗಾರಿಕೆ ನಡೆಯುತ್ತವೆ. ಎಲ್ಲಾ ಕಡೆಯೂ ಗುಜರಾತ್‌ ಮಾದರಿ ಅನ್ವಯಿಸಲು ಆಗಲ್ಲ. ಕರ್ನಾಟಕದಲ್ಲೂ ಅದೇ ಮಾದರಿ ಅನ್ವಯಿಸುತ್ತೇವೆಂದು ಮೋದಿ ಆಗಲಿ ಅಥವಾ ಅಮಿತ್‌ ಶಾ ಅವರಾಗಲಿ ಎಲ್ಲೂ ಹೇಳಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಹಂತದಲ್ಲೂ ಒಂದೊಂದು ಪ್ರಯೋಗ ನಡೆಯುತ್ತವೆ. ಗುಜರಾತ್‌ನಲ್ಲಿ ಸ್ಥಳೀಯ ವ್ಯವಸ್ಥೆ ಹಿನ್ನೆಲೆಯಲ್ಲಿ ಅಮಿತ್‌ ಶಾ ಮತ್ತು ಮೋದಿ ಅವರು …

Read More »

ಸಿದ್ದರಾಮಯ್ಯ ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧ : ಬಿ.ವೈ.ವಿಜಯೇಂದ್ರ

ಮೈಸೂರು: ‘ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ  ಬಿ.ವೈ.ವಿಜಯೇಂದ್ರ ಭಾನುವಾರ ಹೇಳಿದರು. ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ.‌ ಪಕ್ಷದ ತೀರ್ಮಾನವೇ ಅಂತಿಮ’ ಎಂದರು. ‘ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಡುತ್ತಿದ್ದೇವೆ, ಸಂಘಟನೆ …

Read More »

ಲೆಫ್ಟಿನೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ವಿ.ಎಂ. ಪಾಟೀಲ್​  ನಿಧನ

ಬೆಂಗಳೂರು: ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ,​ ಅತಿ ವಿಶಿಷ್ಟ ಸೇವಾ ಪದಕ ಮತ್ತು ಪರಮ ವಿಶಿಷ್ಟ ಸೇವಾ ಪದಕಗಳಿಂದ ಪುರಸ್ಕೃತರಾಗಿದ್ದ ವಿ.ಎಂ. ಪಾಟೀಲ್​ ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು. ಲೆಫ್ಟಿನೆಂಟ್​ ಜನರಲ್​ ವಿ.ಎಂ.ಪಾಟೀಲ್​ ಅವರು 1962ರ ಭಾರತ-ಚೀನಾ ಯುದ್ಧ ಮತ್ತು 1965ರ ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಎರಡೂ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಿಯೆಟ್ನಾಂ, ಲಾವೋಸ್, ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರಿ …

Read More »

ಇಂದು ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಮಾಡೆಲ್ ಅವಿವಾ ಬಿದ್ದಪ್ಪಾ ಇಂದು ವಿವಾಹ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಖ್ಯಾತ ಫ್ಯಾಶನ್ ಡಿಸೈನರ್ ಪ್ರಕಾಶ್ ಬಿಡ್ಡಪ್ಪಾ ಪುತ್ರಿಯಾಗಿರುವ ಅವಿವಾ ಜೊತೆ ಅಭಿಷೇಕ್ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದಕ್ಕೆ ಎಲ್ಲಾ ತಯಾರಿಗಳೂ ನಡೆದಿವೆ.ಕೇವಲ ಆಪ್ತರ ಬಳಗದವರಿಗೆ ಮಾತ್ರ ಸುಮಲತಾ ಅಂಬರೀಶ್ ಆಹ್ವಾನ ನೀಡಿದ್ದಾರೆ. ಇಂದು ವಿವಾಹ ದಿನಾಂಕವೂ ಘೋಷಣೆಯಾಗುವ ಸಾಧ‍್ಯತೆಯಿದೆ.

Read More »