BigTv News
December 10, 2022
Breaking News, ಕಲಬುರಗಿ
ಕಲಬುರಗಿ: ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ(ಡಿ.9) ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ. ಈತ ಮಾಲಗತ್ತಿಯ ಎಂ.ಎಂ.ಗಾರ್ಡನ್ ಬಳಿಯಲ್ಲಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ಹತನಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »
BigTv News
December 10, 2022
Breaking News, ದೆಹಲಿ
ಹೊಸದಿಲ್ಲಿ: ಮಾಂಡೌಸ್ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಉತ್ತರ ತಮಿಳುನಾಡು ಮತ್ತು ಪುದುಚೇರಿ ನಡುವೆ 70 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿಯೊಂದಿಗೆ ಚೆನ್ನೈನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ ಸಂಜೆಯಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಮಿಳುನಾಡಿನ ಕೆಲವು ಭಾಗಗಳು ಜಲಾವೃತಗೊಂಡಿವೆ. ಕೆಟ್ಟ ಹವಾಮಾನದ ಕಾರಣ ದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 16 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ …
Read More »
BigTv News
December 10, 2022
Breaking News, ಜಿಲ್ಲೆ, ಹಾಸನ
ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆಯಲ್ಲಿ ಒಂಟಿ ಸಲಗ ಓಡಾಡುತ್ತಿದ್ದು. ಕಾಡಾನೆ ಓಡಾಟದ ವಿಡಿಯೋ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರು ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಗೆ …
Read More »
BigTv News
December 10, 2022
Breaking News, ಜಿಲ್ಲೆ, ಮೈಸೂರು
ಮೈಸೂರು; ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಡ್ಯದ ಬಾರ್ ಅಸೋಸಿಯೇಷನ್ ಸದಸ್ಯರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ವಕೀಲರು ಮಾನವ ಸರಪಳಿ ರಚಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ವಕೀಲ್, ವಕೀಲರ ವಿರುದ್ಧ …
Read More »
BigTv News
December 10, 2022
Breaking News
ಬಂಟ್ವಾಳ: ವಿಟ್ಲದ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಧಕ್ಕೆ ತಂದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಚಿಂತನ್, ಹೊನ್ನಯ್ಯ, ಯತಿರಾಜ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಖಾಸಗಿ ಬಸ್ಸ್ ನಿಲ್ದಾಣದಲ್ಲಿದ್ದ ಮೂವರು ಬಸ್ ಚಾಲಕರನ್ನು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ …
Read More »
BigTv News
December 10, 2022
Breaking News
ಕೊಲ್ಲಾಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲಿದೆ. ಈ ಸಂಬಂಧ ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸುವ ಸಾಧ್ಯತೆಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭಾಗಿಯಾಗಲಿದ್ದು, ಎರಡು ರಾಜ್ಯಗಳ ನಡುವೆ ಸೌಹಾರ್ದ ಮೂಡಿಸುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೇಂದ್ರ …
Read More »
BigTv News
December 10, 2022
Breaking News, ಬೆಂಗಳೂರು
ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧ ಪೊಲೀಸರು ಸರ್ಕಾರೇತರ ಸಂಸ್ಥೆ ಚಿಲುಮೆಗೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಗೆ ಮೊದಲು ಸಮನ್ಸ್ ನೀಡಲಾಗಿತ್ತು. ಅದೇ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೆ. …
Read More »
BigTv News
December 10, 2022
Breaking News, ಬೆಂಗಳೂರು
ಬೆಂಗಳೂರು: ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ. 2009ರಲ್ಲಿ ಬೇನಾಮಿ ಆಸ್ತಿ ಗಳಿಕೆ ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್ ದಾಖಲಿಸಿತ್ತು, ಆದ್ರೆ, 2016ರ …
Read More »
BigTv News
December 10, 2022
Breaking News, ಬೆಂಗಳೂರು
ಬೆಂಗಳೂರು : ತಮಿಳುನಾಡು-ಆಂಧ್ರಪ್ರದೇಶದ ಕಡಲ ತೀರದಲ್ಲಿ ಚಂಡಮಾರುತ ಎದ್ದಿರುವ ಕಾರಣ ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಮಾಂಡೌಸ್ ಚೆಂಡಮಾರುತವು ಉತ್ತರ ತಮಿಳುನಾಡು, ಪಾಂಡಿಚೆರಿ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಕಡಲ ತೀರಗಳಲ್ಲಿ ಚೆಂಡಮಾರುತ ಹಾದು ಹೋಗಲಿದೆ ಎಂದು ಹೇಳಲಾಗಿದೆ. ಚೆಂಡಮಾರುತದ ಪರಿಣಾಮ ಡಿಸೆಂಬರ್ 12ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು …
Read More »
BigTv News
December 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ;ವಿಜಯಲಕ್ಷ್ಮಿ ಕಂಬೈನ್ಸ್ ಬೆಂಗಳೂರು ಕಾಕ್ಟೇಲ್ ಚಲನಚಿತ್ರವು ಜನೆವರಿ ೬ ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ. ಶಿವಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕ್ಟೈಲ್ ಒಂದು ವಿಭಿನ್ನ ಕಥಾಹಂದರ ಹೊಂದಿರುವ ಒಂದು ಅದ್ಭುತ ಕಥೆಯಾಗಿದ್ದು, ಚಿತ್ರದಲ್ಲಿ ೨ ಹಾಡುಗಳು ಇವೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆದಿದೆ.ಇನ್ನೂ ಚಿತ್ರದಲ್ಲಿ ಬಿರೇನ್ ಕೇಶನ್, ಚರಿಷ್ಮಾ, ಶೋಭರಾಜ್ ಸೇರಿದಂತೆ ಮುಂತಾದ ಗಣ್ಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು. …
Read More »