Breaking News

Breaking News

ಮತದಾರರ ಮಾಹಿತಿ ಕಳವು ಆರೋಪ  : ನಿರೀಕ್ಷಣಾ ಜಾಮೀನು ನಿರಾಕರಣೆ

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮೀ ಮತ್ತು ಕೆಂಪೇಗೌಡ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ …

Read More »

ಆದಾಯ ಮೀರಿ ಆಸ್ತಿ  : ಠಾಕ್ರೆ, ಪುತ್ರನ ವಿರುದ್ಧ ತನಿಖೆ

ಮುಂಬೈ: ಆದಾಯ ಮೀರಿದ ಆಸ್ತಿ ಹೊಂದಿರುವ ದೂರಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರನ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಧೀರಜ್‌ ಠಾಕೂರ್ ಮತ್ತು ವಾಲ್ಮೀಕಿ ಮೆನೆಜೆಸ್‌ ಅವರಿದ್ದ ದ್ವಿಸದಸ್ಯ ಪೀಠಕ್ಕೆ ಸರ್ಕಾರಿ ಅಭಿಯೋಜಕ ಅರುಣಾ ಕಾಮತ್ ಪೈ ಈ ಮಾಹಿತಿ ನೀಡಿದರು. ಠಾಕ್ರೆ ಕುಟುಂಬದ ವಿರುದ್ಧ ಸಿಬಿಐ ಅಥವಾ ಇ.ಡಿ ತನಿಖೆ ಕೋರಿ …

Read More »

ಮಾನನಷ್ಟ ಮೊಕದ್ದಮೆ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗೆ ಜಾಮೀನು

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ (ಡಿ.6) ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ. ಸಚಿವ ಸುಧಾಕರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಡಾ.ಕೆ.ಸುಧಾಕರ್ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದರು. ಅವರ ನೇಮಕ ಪ್ರಶ್ನಿಸಿ ಆಂಜನೇಯರೆಡ್ಡಿ …

Read More »

ದುಶ್ಚಟಗಳ ದಾಸನಾದ ಮಗ – ಸುಪಾರಿ ಕೊಟ್ಟು ಕೊಲೆ ಮಾಡಿಸಿಯೇ ಬಿಟ್ಟ ತಂದೆ..!

ಹುಬ್ಬಳ್ಳಿ : ಒಂದು ಇರುವೆ ಸಹ ಸಾಯಿಸಲು ಸಹ ಬಿಡದ ವಿಶ್ವಕ್ಕೆ ಶಾಂತಿ ಮಂತ್ರ ಕೋರಿದ ಜೈನ್ ಸಮುದಾಯವೇ ತಲೆ ತಗ್ಗಿಸುವಂತೆ, ನಾಗರಿಕ ಸಮಾಜವೇ ನಾಚುವಂತೆ ಸ್ವತಃ ತಂದೆಯೇ ಹೆತ್ತ ಮಗನನ್ನು ಕೊಂದ ಪ್ರಕರಣ ಅಂತಿಮ ಘಟ್ಟ ತಲುಪಿದೆ. ಮಣ್ಣಿನಲ್ಲಿ ಮುಚ್ಚಿಟ್ಟ ಶವದ ಜೊತೆಗೆ ಸತ್ಯವನ್ನು ಹೊರೆಳೆದ ಪೊಲೀಸರು, ಅಂತಿಮ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಮಗನನ್ನು ಕಳೆದುಕೊಂಡ ತಾಯಿ ತನ್ನ ಗಂಡ ಹೇಳಿದ ಸುಳ್ಳನ್ನು ಸತ್ಯವೆಂದು ನಂಬಿ, ಇನ್ನೂ ಬಾರದ …

Read More »

ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್: ಶೆಟ್ಟರ್

ಹುಬ್ಬಳ್ಳಿ: ಗುಜರಾತ್ ರಾಜ್ಯದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಕುರಿತು ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, …

Read More »

ಜ.8ರಂದು ಚಿತ್ರದುರ್ಗದಲ್ಲಿ ಬೃಹತ್‌ ‘ಐಕ್ಯತಾ ಸಮಾವೇಶ’

ಬೆಂಗಳೂರು: ದಲಿತರ ಬಗ್ಗೆ ತೋರಿಕೆಯ ಪ್ರೀತಿ ತೋರುವ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಕರೆ ನೀಡಲು ಮತ್ತು ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ನೀಡಲು ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡಗಳ ಬೃಹತ್‌ ‘ಐಕ್ಯತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ  ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಮಾಜಿ ಸಚಿವರಾದ …

Read More »


ಕಾಂಗ್ರೆಸ್ ಅಧ್ಯಕ್ಷ ಚಂದು ಪೂಜಾರಿ ನಿಧನ

ಹೆಬ್ರಿ: ಮುದ್ರಾಡಿಯ ಬಾಚುಮಜಲ್ ಚಂದು ಪೂಜಾರಿ (95) ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉದ್ಯಮಿ ಮನೋಜ್ ಪೂಜಾರಿ ಸಹಿತ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.ಮಂಡಲ ಪಂಚಾಯತಿ ಸದಸ್ಯರಾಗಿ ಮುದ್ರಾಡಿಯ ಕಾಂಗ್ರೆಸ್ ಮುಖಂಡರಾಗಿ ಚಂದು ಪೂಜಾರಿ ಸಕ್ರಿಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅವರ ನಿಕಟವರ್ತಿಯಾಗಿದ್ದರು. ಡಾ.ಎಂ.ವೀರಪ್ಪ ಮೊಯಿಲಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಘಟಕದ …

Read More »

ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣು

ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ನಗರದ  ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ. ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ಧಾರವಾಡ   : ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದಲ್ಲಿ ನಡೆದಿದೆ. ಅಶೋಕ ಲಾಡ್ಜ್​ನಲ್ಲಿ ಮೂರು ದಿನಗಳಿಂದ ವಾಸವಾಗಿದ್ದ ಪ್ರೇಮಿಗಳಾದ ಕುಮಾರ ತಳವಾರ (22) ಮತ್ತು ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡವರು.ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಉಳಿದುಕೊಂಡಿದ್ದ ಪ್ರೇಮಿಗಳು ಬುಧವಾರ ಒಂದೇ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ …

Read More »