BigTv News
December 8, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಆಚರಣೆ ನಡಯುತ್ತಿದ್ದು, ಹಲವು ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದೆ. ಈ ಹಿನ್ನಲೆ ಹುಣಸೂರಿನಲ್ಲಿ ಮೂರು ದಿನಗಳ ಕಾಲ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ರಾಜ್ಯದ ಎಲ್ಲೆಡೆಯಲ್ಲಿ ಹನುಮ ಜಯಂತಿ ಆಚರಣೆಯನ್ನು ಆಚರಿಸುತ್ತಿದ್ದು, ಮೈಸೂರಿನ ಹುಣಸೂರಿನಲ್ಲೂ ಕೂಡ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಇಂದಿನಿಂದ ಮೂರು ದಿನಗಳವರೆಗೂ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು …
Read More »
BigTv News
December 8, 2022
Breaking News
ವಿಜಯನಗರ: ಸಚಿವ ಆನಂದ್ ಸಿಂಗ್ ಅವರ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಮಧ್ಯಪ್ರದೇಶ್ ಮೂಲದ ಉದ್ಯಮಿ ಯುವರಾಜ್ ಸಿಂಗ್ ಜಾದೂನ್ ಅವರ ವಿವಾಹ ಸಮಾರಂಭ ನಿನ್ನೆ ರಾಜಸ್ಥಾನದ ರಾಮ್ ಬಾಗ್ ಪ್ಯಾಲೇಸ್ ನಲ್ಲಿ ನಡೆಯಿತು. ಸಿಎಂ ಬಸವರಾಜ್ ಬೊಮ್ಮಾಯಿ, ಶ್ರೀರಾಮುಲು, ಆರ್ ಅಶೋಕ್, ಸೇರಿದಂತೆ ಹಲವು ಗಣ್ಯ ಮಾನ್ಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ನವ ವಧುವರರಿಗೆ ಆಶೀರ್ವದಿಸಿದರು. ಇದೇ ತಿಂಗಳು 9 ನೇ ತಾರೀಖಿನಂದು ಹೊಸಪೇಟೆಯಲ್ಲಿ ಅರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, …
Read More »
BigTv News
December 8, 2022
Breaking News, ತುಮಕೂರು
ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, …
Read More »
BigTv News
December 8, 2022
Breaking News, ತುಮಕೂರು
ತುಮಕೂರು : ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬುಧವಾರ ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು …
Read More »
Shaikh BigTv
December 7, 2022
Breaking News, SPECIAL NEWS, ಅಪರಾಧ, ಧಾರವಾಡ
ಧಾರವಾಡ ನವಲಗುಂದ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಖಾಸಗಿ ಲಾಡ್ಜ್‌ನಲ್ಲಿ ಯುವಕ, ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇವರು ಪ್ರೇಮಿಗಳು ಎಂಬ ಶಂಕೆ ವ್ಯಕ್ತವಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಹಾಗೂ ಯುವತಿಯ ಶವ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ದೇಹಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Read More »
Shaikh BigTv
December 5, 2022
Breaking News, ಅಪರಾಧ, ಹುಬ್ಬಳ್ಳಿ-ಧಾರವಾಡ
ಆತ ಹುಬ್ಬಳ್ಳಿಯ ದೊಡ್ಡ ಉದ್ಯಮಿ. ಇತ್ತೀಚೆಗೆ ತನ್ನಮಗ ನಾಪತ್ತೆ ಆಗಿದ್ದಾನೆಂದು ದೂರು ನೀಡಿದ್ದ. ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡು ಫೀಲ್ಡ್‌ಗೆ ಇಳಿದ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ತಂದೆಯೇ ಮಗನ ಹತ್ಯೆಗೆ ಸುಪಾರಿ ಕೊಟ್ಟಿರುವ ವಿಷಯ ಕೇಳಿ ಶಾಕ್ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಭರತ್ ಜೈನ್ ಅವರ ಪುತ್ರ ಮಿಸ್ಸಿಂಗ್ ಆಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಮಗನನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಉದ್ಯಮಿ ಭರತ್‌ನನ್ನು ವಶಕ್ಕೆ …
Read More »
BigTv News
December 5, 2022
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ಟೀವ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದಾರೆ. ಆಖಾಡ ತಯಾರಾಗಿದೆ. ನಾವು ತಯಾರಿದ್ದೇವೆ, ನೀವು ಧುಮುಕಿ. ಚುನಾವಣೆ ಗೆದ್ದ ಮರುದಿನದಿಂದಲೇ ನಾನು ತಯಾರಿ ನಡೆಸಿದ್ದೇನೆ. ಚುನಾವಣೆಗೆ 90 ದಿನ ಇದೆ ಎಂದು ನಾನು ತಯಾರಿ ನಡೆಸಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪರಾಭವಗೊಳಿಸಲು ರಮೇಶ್ ಜಾರಕಿಹೊಳಿ …
Read More »
BigTv News
December 5, 2022
Breaking News, ಬೆಂಗಳೂರು
ಬೆಂಗಳೂರು; ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ …
Read More »
BigTv News
December 5, 2022
Breaking News
ಕೊಪ್ಪಳ : ಡಿಸೆಂಬರ್ 5 ರ ಇಂದು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪಿ ಆನೆಗುಂದಿಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ.ಈ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »
BigTv News
December 5, 2022
Breaking News
ಹೊಸದಿಲ್ಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾಯಿಸಲಿದ್ದಾರೆ. ಮತದಾನಕ್ಕೆ ರವಿವಾರವೇ ಹುಟ್ಟೂರಿಗೆ ಆಗಮಿಸಿದ ಮೋದಿ 99 ವರ್ಷದ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಎಂದು ವರದಿ ಮಾಡಿದೆ. ಗುಜರಾತ್‍ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 51 ಹಾಗೂ ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದಿದ್ದವು. …
Read More »