BigTv News
November 28, 2022
Breaking News
ಹೈದರಾಬಾದ್: ತೆಲಂಗಾಣದ ವಾರಂಗಲ್ ಪಟ್ಟಣದಲ್ಲಿ ತನ್ನ ತಂದೆ ವಿದೇಶದಿಂದ ತಂದಿದ್ದ ಚಾಕೋಲೇಟ್ ತಿಂದು ಎಂಟು ವರ್ಷದ ಬಾಲಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ ವಾರಂಗಲ್ ಪಟ್ಟಣದಲ್ಲಿ ನಡೆದಿದೆ. ಚಾಕೊಲೇಟ್ ಸಂದೀಪ್ ಸಿಂಗ್ ಅವರ ಗಂಟಲಲ್ಲಿ ಸಿಲುಕಿಕೊಂಡಿತು. ಅವರನ್ನು ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಕೊನೆಯುಸಿರೆಳೆದರು. ಪೊಲೀಸರ ಪ್ರಕಾರ, ಪಟ್ಟಣದಲ್ಲಿ ಅಂಗಡಿಯನ್ನು ನಡೆಸುತ್ತಿರುವ ಕಂಘನ್ ಸಿಂಗ್ ಅವರ ಕುಟುಂಬಕ್ಕೆ ದುರಂತ ಸಂಭವಿಸಿದೆ. ರಾಜಸ್ಥಾನ ಮೂಲದ ಕಂಘನ್ ಸಿಂಗ್ ಸುಮಾರು …
Read More »
BigTv News
November 28, 2022
Breaking News, ಗದಗ, ಜಿಲ್ಲೆ
ಗದಗ : ನಗರದ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ಬಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಗದಗನ ಸಣ್ಣಮಕ್ಕಳ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಮಗುವಿಗೆ …
Read More »
BigTv News
November 28, 2022
Breaking News, ಬೆಳಗಾವಿ
ಬೆಳಗಾವಿ: ತಾಲ್ಲೂಕಿನ ಹೊಸವಂಟಮುರಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ‘ಬೆಳಗಾವಿಯಿಂದ ಸಂಕೇಶ್ವರ ಕಡೆ ಹೋಗುತ್ತಿದ್ದ ಎರಡು ಲಾರಿ, ಎರಡು ಕಾರು ಮತ್ತು ಒಂದು ಟಂಟಂ ವಾಹನದ ಮಧ್ಯೆ ಅಪಘಾತವಾಗಿದೆ. ಗಾಯಗೊಂಡ 6 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಕಾಕತಿ ಠಾಣೆ ಪಿಎಸ್‌ಐ ಮಂಜುನಾಥ ಹುಲಕುಂದ ತಿಳಿಸಿದರು. ಈ ಅಪಘಾತದಿಂದಾಗಿ ಹೆದ್ದಾರಿ ಮೇಲೆ 2 ಕಿ.ಮೀ.ವರೆಗೆ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. …
Read More »
BigTv News
November 28, 2022
Breaking News
ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಿಜೆಪಿ ನಾಯಕರು ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬೆಲೆ ಮತ್ತು ಐಟಿ ಮುಖ್ಯಸ್ಥ ಅಭಯ್ ತಿವಾರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿಯ ಮಧ್ಯಪ್ರದೇಶದ ರಾಜ್ಯ ವಕ್ತಾರ ಪಂಕಜ್ ಚತುರ್ವೇದಿ ಮತ್ತು ರಾಜ್ಯ ಸಹ ಮಾಧ್ಯಮ ಉಸ್ತುವಾರಿ ನರೇಂದ್ರ ಶಿವಾಜಿ ಪಟೇಲ್ ಅವರು ಅಪರಾಧ ವಿಭಾಗಕ್ಕೆ ನೀಡಿದ ದೂರಿನಲ್ಲಿ ಭಾರತ್ …
Read More »
BigTv News
November 27, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಎದುರು ಇದ್ದ ಬಸ್ ಶೆಲ್ಟರ್ ಮೇಲಿದ್ದ ಗುಂಬಜ್ ಸ್ಥಳೀಯ ಬಿಜೆಪಿ ಶಾಸಕರ ಹಾಗೂ ಬಿಜೆಪಿ ಸಂಸದರ ವಾಕ್ಸಮರಕ್ಕೆ ಕಾರಣವಾಗಿತ್ತು. ಇದಲ್ಲದೇ ಸಂಸದ ಪ್ರತಾಪ್ ಸಿಂಹ ಇದನ್ನು ಹೊಡೆದು ಹಾಕುವ ಬೆದರಿಕೆಯನ್ನು ಕೂಡ ಹಾಕಿದ್ದರು. ಈ ನಡುವೆ ಬಸ್ ನಿಲ್ದಾಣದ ಮೇಲೆ ನಿರ್ಮಾಣವಾಗಿದ್ದ ಮೂರು ಗುಂಬಜ್ ಪೈಕಿ ಎರಡನ್ನು ತೆರವು ಮಾಡಲಾಗಿದೆ ಅಂಥ ಸ್ಥಳೀಯ ಶಾಸಕ ರಾಮದಾಸ್ ಅವರು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.
Read More »
BigTv News
November 27, 2022
Breaking News, ಉಡುಪಿ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಂಬಂಧಿಸಿದಂತೆ ಪಕ್ಷ ಸಂಘಟನೆಯ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯತಂತ್ರಗಳು ಆರಂಭಿಸಿದ್ದೇವೆ. ಟಿಕೆಟ್ ನೀಡುವುದು ಪಕ್ಷದ ತೀರ್ಮಾನ. ಪಕ್ಷ ನನಗೆ ಟಿಕೆಟ್ ನೀಡಿದರೆ ಪ್ರಮೋದ್ ಮಧ್ವರಾಜ್ ಅವರು ನನ್ನ ಪರವಾಗಿ ಚುನಾವಣ ಪ್ರಚಾರ ಮಾಡಲಿದ್ದಾರೆ. ಹಾಗೆಯೇ ಪ್ರಮೋದ್ ಮಧ್ವರಾಜ್ ಅವರಿಗೆ ಪಕ್ಷ ಟಿಕೆಟ್ ನೀಡಿದರೆ ನಾನು ಅವರ ಪರವಾಗಿ ಪ್ರಚಾರ ಮಾಡಲಿದ್ದೇನೆ ಅಎಂದು ಶಾಸಕ ಕೆ.ರಘುಪತಿ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. …
Read More »
BigTv News
November 27, 2022
Breaking News, ಚಾಮರಾಜನಗರ
ಚಾಮರಾಜನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ.24 ರಿಂದ 26ರವರೆಗೆ ದಾವಣಗೆರೆಯಲ್ಲಿ ನಡೆಯಲಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕ ಪ್ರಸನ್ನ, ‘ಮೂರು ದಿನಗಳ ಕಾಲ ನಡೆಯುವ ಅಧಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು. ‘ಮಹಾ ಅಧಿವೇಶನದಲ್ಲಿ ಮೂರು …
Read More »
BigTv News
November 27, 2022
Breaking News
ಮಡಿಕೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಪ್ರಧಾನಿಯಾಗಿ ಕೈಗೊಂಡ ಕೆಲವೊಂದು ನಿರ್ಧಾರಗಳ ಬಗ್ಗೆ ಆಕ್ಷೇಪವಿದೆ. ಕೆಲವು ವಿಚಾರಗಳಲ್ಲಿ ದಿಟ್ಟ ಹೆಜ್ಜೆ ಇಡುತ್ತಿಲ್ಲವೆಂದು ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ. ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವು ವಿಚಾರಗಳ ಬಗ್ಗೆ ಬಿಗಿ ನಿರ್ಧಾರಗಳನ್ನು ಮೋದಿ ಕೈಗೊಂಡಿಲ್ಲ ಎಂಬ ಅಸಮಾಧಾನವಿದೆ. ಹೀಗಿದ್ದರೂ ದೇಶದ ಹಿಂದೂ ಸಂಘಟನೆಗಳ ಕಾರ್ಯಕರ್ತರ …
Read More »
BigTv News
November 27, 2022
Breaking News
ಖಾರ್ಗೋನ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯ ಬರ್ವಾಹಾ ಬಳಿ ಶನಿವಾರ ನೆಲಕ್ಕೆ ಬಿದ್ದ ಘಟನೆ ನಡೆದಿದ್ದು, ರಸ್ತೆಯ ದುಸ್ಥಿತಿ ವಿರೋಧ ಪಕ್ಷ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ ಯಾತ್ರೆಯ ನಡುವೆ ಚಹಾ ವಿರಾಮದ ವೇಳೆ ರಸ್ತೆಬದಿಯ ರೆಸ್ಟೋರೆಂಟ್ಗೆ ಹೋಗುತ್ತಿದ್ದಾಗ ಸಿಂಗ್ ಕುಸಿದು ಬಿದ್ದಿರು. ತಕ್ಷಣವೇ ಅವರನ್ನು ಸುತ್ತುವರೆದ …
Read More »
BigTv News
November 27, 2022
Breaking News
ಬೀಜಿಂಗ್: ಸತತ 3ನೇ ದಿನವೂ ಚೀನದಲ್ಲಿ ದಾಖಲೆಯ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಶನಿವಾರ 35 ಸಾವಿರ ಮಂದಿಗೆ ಸೋಂಕು ತಗುಲಿದೆ. ಇನ್ನು ದೊಡ್ಡಮಟ್ಟದಲ್ಲಿ ಲಾಕ್‌ಡೌನ್‌ನಂಥ ಪ್ರತಿಬಂಧಕ ಕ್ರಮಗಳನ್ನು ಕೈಗೊಂಡಿರುವ ಸರ್ಕಾರದ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ. ಹಲವೆಡೆ ಪ್ರತಿಭಟನೆಗಳು ನಡೆದಿದ್ದು, ಚೀನದಲ್ಲಿ ಅಪರೂಪವೆಂಬಂತೆ ಜನರು ಮತ್ತು ಪೊಲೀಸರ ನಡುವೆ ಘರ್ಷಣೆಯೂ ಏರ್ಪಟ್ಟಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಸಕ್ತ ತಿಂಗಳು ಚೀನದಲ್ಲಿ 6 ಮಂದಿ ಸೋಂಕಿಗೆ …
Read More »