BigTv News
November 26, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದರ್ಬಿನ್ ದಾಸ್ ಹಾಗೂ ಧನುಷ್ಯಾ ಬಂಧಿತ ದಂಪತಿ. ಗಂಡ ದರ್ಬಿನ್ ದಾಸ್ ತಾನೂ KIALನಲ್ಲಿ ಕಸ್ಟಮ್ಸ್ ಅಧಿಕಾರಿ, ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ. ಇತ್ತ ದರ್ಬಿನ್ ಪತ್ನಿ ಧನುಷ್ಯಾ ಸಹ ತನ್ನ ಗಂಡ ಕಸ್ಟಮ್ಸ್ ಅಧಿಕಾರಿ, ಕಡಿಮೆ ಬೆಲೆಗೆ ಸೀಜ್ ಮಾಡಿದ ಚಿನ್ನಾಭರಣ ಸಿಗುತ್ತೆ ಎಂದು ಹಣ …
Read More »
BigTv News
November 26, 2022
Breaking News, ಬಳ್ಳಾರಿ
ಬಳ್ಳಾರಿ: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗದಗಿನ ಸಂಜಯ ಬಸಪ್ಪ ಕೊಪ್ಪದ (25) ಹಾಗೂ ಬಳ್ಳಾರಿಯ ನಂದೀಶ್ (24) ಬಂಧಿತ ಆರೋಪಿಗಳು.ಇವರು ಸಾರ್ವಜನಿಕರಿಂದ ನಾಲ್ಕು ತೊಲೆ ಬಂಗಾರ, 1,500 ರೂ. ನಗದು ಹಾಗೂ ಎರಡು ಬೈಕ್ ಸುಲಿಗೆ ಮಾಡಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಬಂಧನಕ್ಕೆ ಡಿಎಸ್‌ಪಿ ಸತ್ಯನಾರಾಯಣರಾವ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ನಿರಂಜನ, ಶಾರದಾ ಅವರನ್ನೊಳಗೊಂಡ ವಿಶೇಷ ತಂಡ …
Read More »
BigTv News
November 26, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ರಾಜ್ಯದಲ್ಲಿ ಗೋವುಗಳ ರಕ್ಷಣೆಗಾಗಿ ಈಗಾಗಲೇ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ನೀಡಲಾಗಿದೆ. ಇದರಿಂದ 100 ಸರ್ಕಾರಿ ಗೋಶಾಲೆಗಳನ್ನು ಆರಂಭಿಸಲು ತಯಾರಿ ನಡೆದಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅದರಂತೆ ಇದೀಗ ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಎನ್ನುವ ಉದ್ದೇಶದಿಂದ ‘ಪುಣ್ಯದತ್ತು’ …
Read More »
BigTv News
November 26, 2022
Breaking News, ಬೆಂಗಳೂರು
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಯಾಣಿಕರು ಒಂದೇ ಒಂದು ಟಿಕೆಟ್ ನಲ್ಲಿ ಕುಟುಂಬ ಸಮೇತ ಪ್ರಯಾಣಿಸಬಹುದು.ಇಂದಿನ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಿಕೊಳ್ಳುವ ಸಲುವಾಗಿ ಮೆಟ್ರೋದಲ್ಲೇ ಜನರು ಓಡಾಡುತ್ತಾರೆ. ಆದರೆ ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು. ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ …
Read More »
BigTv News
November 26, 2022
Breaking News
ಹಗರಿಬೊಮ್ಮನಹಳ್ಳಿ : ತಾಲೂಕಿನ ಬೆಣಕಲ್ ಗ್ರಾಮದ ಬಿ.ಆರ್. ಕೊಟ್ರಗೌಡ ಮೃತ ಶಿಕ್ಷಕ. ಸಾಲದ ಬಾಧೆ ತಾಳಲಾರದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತಾಂಡದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರು ಪಟ್ಟಣದ ಹೊರವಲಯದ ಕೆಚ್ಚಿನಬಂಡಿ ರಸ್ತೆಯ ಬದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಕೆಳಗೆ, ಮೇ 31ರಂದು ಅವರು ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು. ನಿವೃತ್ತಿ …
Read More »
BigTv News
November 25, 2022
Breaking News, ಧಾರವಾಡ
ಧಾರವಾಡ : ಪಿಎಸ್ಐ ಪರೀಕ್ಷೆ ಅಕ್ರಮ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಇನ್ನೂ ಪ್ರಕರಣ ಕುರಿತು ಬಗೆದಷ್ಟು ಅಕ್ರಮಗಳು ಹೊರಗೆ ಬರುತ್ತಿವೆ. ಅಕ್ರಮದಿಂದ ಪಿಎಸ್ಐ ಪರೀಕ್ಷೆ ಬರೆದು ಈಗ ಸಿಕ್ಕು ಬಿದ್ದಿದ್ದಾರೆ. ಆದರೆ, ನಿಯತ್ತಿನಿಂದ ಹಗಲು ರಾತ್ರಿ ಸತತ ಪ್ರಯತ್ನ ಪಟ್ಟು ಓದಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ. ಅಕ್ರಮ ಹೊರಬೀಳುತ್ತಿದ್ದಂತೆ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸುವುದಕ್ಕಾಗಿ ಹೇಳಿತ್ತು. ಇದರಿಂದ ಸಕ್ರಮವಾಗಿ ಕಷ್ಟ ಪಟ್ಟು ಓದಿದ ಅಭ್ಯರ್ಥಿಗಳಿಗೆ ಅನ್ಯಾಯವಾದಂತಾಗಿದ್ದು …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಗುರುವಾರ 61 ಹೊಸ ಕೊರೋನ ಪ್ರಕರಣಗಳು ದೃಢವಾಗಿದೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,70,990ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,261ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,543ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಒಬ್ಬರ ಸಾವು: ಕೋವಿಡ್ ಸೋಂಕಿನಿಂದಾಗಿ ಹಾಸನ …
Read More »
BigTv News
November 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ವಿರುದ್ಧ ಮಾನನಷ್ಟ ಆರೋಪ ಕೇಸ್ ನಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಎಂಬುವರು ಮಾನ ಹಾನಿಕರ ಹೇಳಿಕೆ ಕೇಸ್ ದಾಖಲಿಸಿದ್ದರು. ಇದಷ್ಟೇ ಅಲ್ಲದೇ ಈ ಸಂಬಂಧದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ …
Read More »
BigTv News
November 25, 2022
Breaking News, ಬೆಳಗಾವಿ
ಬೆಳಗಾವಿ: ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಚರ್ಚಿಸಿದರು. ಪಾಟೀಲ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಹಾರ, ಸಾರಿಗೆ, ಆರೋಗ್ಯ ಮತ್ತು ಇತರ ಸೌಲಭ್ಯಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಧಿವೇಶನ …
Read More »
BigTv News
November 25, 2022
Breaking News, ಮಂಡ್ಯ
ಮಂಡ್ಯ: ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಾ.ರಾಜ್ ಕುಮಾರ್ ಅಪ್ಪಟ ಅಭಿಮಾನಿಯೂ ಆಗಿರುವ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಸಂಜೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ನ ಹಲವು ನಟ ಮತ್ತು ನಟಿಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ , ಗಾಯಕ ವಿಜಯ ಪ್ರಕಾಶ್ …
Read More »