Breaking News

Breaking News

ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ : ನಾಲ್ವರ ಮೇಲೆ ಬ್ಲೇಡ್​ನಿಂದ ಮಾರಣಾಂತಿಕ ಹಲ್ಲೆ

ಅಥಣಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆದು, ಕೆಲವು ಕಿಡಿಗೇಡಿಗಳು ನಾಲ್ವರ ಮೇಲೆ ಬ್ಲೇಡ್​ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.‌ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಚೇತನ ಹಡಪದ, ಪ್ರಸಾದ ಅಶೋಕ ಸಿಂದೂರೆ ಹಾಗು ವಿಕಾಸ ಸುಭಾಶ ಸುಣಗಾರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಹುಲ ಈರಪ್ಪ ಪಾಟೀಲ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಬೆಳಗಾವಿ ವಿಮ್ಸ್​ಗೆ ರವಾನಿಸಲಾಗಿದೆ. ಪ್ರತಿ ವರ್ಷದಂತೆ ಅದ್ದೂರಿಯಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತಿತ್ತು. ಕಿಡಿಗೇಡಿಗಳ …

Read More »

ಕಾಂತಾರ ಚಲನಚಿತ್ರ ಕುರಿತು ಟ್ವೀಟ್ : ಚೇತನ್ ಅರ್ಜಿ ವಜಾ

ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್‌ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ  ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಚೇತನ್‌, ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದರಿಂದ ಯಾರಿಗೂ …

Read More »

ಟಿಕೆಟ್‌ ಆಕಾಂಕ್ಷಿಗಳಿಂದ ಪ್ರಮಾಣ ಮಾಡಿಸಿದ ಸಿಎಂ

ಹರಿಹರ (ದಾವಣಗೆರೆ ಜಿಲ್ಲೆ): ಇಲ್ಲಿ  ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರು ತಮ್ಮ ನಾಯಕರ ಫೋಟೊ ತೋರಿಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರಿಂದ ಸಿಟ್ಟಿಗೆದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹರಿಹರ ಕ್ಷೇತ್ರದ ಮೂವರು ಆಕಾಂಕ್ಷಿಗಳಿಂದ ‘ಒಗ್ಗಟ್ಟು ಪ್ರದರ್ಶಿಸುತ್ತೇವೆ’ ಎಂದು ಪ್ರಮಾಣ ಮಾಡಿಸಿದರು. ಬಿಜೆಪಿಯ ಮಾಜಿ ಶಾಸಕ ಬಿ.ಪಿ. ಹರೀಶ್‌ ಹಾಗೂ ಮುಖಂಡ ಚಂದ್ರಶೇಖರ ಪೂಜಾರ್‌ ಬೆಂಬಲಿಗರು ಶಕ್ತಿ ಪ್ರದರ್ಶಿಸಲು ಪೈಪೋಟಿಗೆ ಇಳಿದಿದ್ದರಿಂದ ಮುಖ್ಯಮಂತ್ರಿ ವೇದಿಕೆಗೆ ಬರುತ್ತಿದ್ದಂತೆ ಮುಜುಗರಕ್ಕೆ …

Read More »

ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಜನ ಜಾಗೃತಿ ಸಮಾವೇಶ

ಬೆಂಗಳೂರು: ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ನಿಂದ ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪರೇಶ್ ಮೇಸ್ತಾ ಸಾವಿನ ಕುರಿತು ಬೃಹತ್ ಜನಜಾಗೃತಿ ಸಮಾವೇಶ ನಡೆಯಲಿದೆ.ಮೇಸ್ತಾ ಸಾವಿನ ಪ್ರಕರಣದ ಸಿಬಿಐ ಬಿ ರಿಪೋರ್ಟ್ ಮುಂದಿಟ್ಟು ಸಮಾವೇಶ ನಡೆಸಲಾಗುವುದು. ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ. ಜಾಗೃತಿ ಸಮಾವೇಶದಲ್ಲಿ ಮಾಜಿ …

Read More »

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಮೈಸೂರು : ಜಿಲ್ಲೆ ಹೆಚ್​​.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದ ರೈತ ಲಿಂಗೇಗೌಡ(72) ಎಂಬುವವರು ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ. 4 ಎಕರೆ 13 ಗುಂಟೆ ಜಮೀನು‌ ಹೊಂದಿದ್ದ ರೈತ ಲಿಂಗೇಗೌಡ, ₹2 ಲಕ್ಷ ಸಾಲಕ್ಕೆ ಕಾವೇರಿ ಗ್ರಾಮೀಣ ಬ್ಯಾಂಕ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪಡೆದ ಸಾಲ ತೀರಿಸಿಲ್ಲ ಎಂದು ಬ್ಯಾಂಕ್ ಸಾಲ ನಿರಾಕರಿಸಿತ್ತು. ಇದರಿಂದ ಮನನೊಂದು ಬ್ಯಾಂಕ್​​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡ ರೈತ ಲಿಂಗೇಗೌಡನನ್ನು ಕೆ.ಆರ್​.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …

Read More »

ಒಂದೇ ಗುಡಿಯಲ್ಲಿ ಮೇರು ಕನ್ನಡಿಗರ ಪುತ್ಥಳಿ ಸ್ಥಾಪನೆ : ನಾಳೆ ಉದ್ಘಾಟನೆ

ಮಂಡ್ಯ : ರೆಬಲ್‌ ಸ್ಟಾರ್‌ ಅಂಬರೀಶ್‌ ಮತ್ತು ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರು ದೈಹಿಕವಾಗಿ ದೂರವಾಗಿದ್ದರೂ ಸಹ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಅವರು ಸದಾ ಅಮರ. ಇದೀಗ ಪುನೀತ್‌ ರಾಜ್‌ಕುಮಾರ್‌ ಮತ್ತು ಅಂಬರೀಷ್‌ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ. ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದ ಅಪ್ಪು ಮತ್ತು ಅಂಬಿ ಫ್ಯಾನ್ಸ್ ಇಂತಹ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಒಂದೇ …

Read More »

ಇಂದು ಅಂಬರೀಷ್ ಅವರ ನಾಲ್ಕು ನೇ ವರ್ಷ ಪುಣ್ಯತಿಥಿ

ಬೆಂಗಳೂರು : ದಾನಶೂರ ಕರ್ಣ ಖ್ಯಾತಿಯ ಹಿರಿಯ ನಟ ಅಂಬರೀಷ್ ಇಂದಿಗೆ ನಮ್ಮನ್ನಗಲಿ ನಾಲ್ಕು ವರ್ಷ ಕಳೆದಿದೆ. ಅಂಬಿ ಪುಣ್ಯತಿಥಿಯ ಅಂಗವಾಗಿ ಸುಮಲತಾ ಹಾಗೂ ಅಭಿಷೇಕ್ ಅಂಬರೀಷ್, ಅಂಬಿ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಅಂಬರೀಷ್​ ಸಮಾಧಿಗೆ ಇವರು ಭೇಟಿ ನೀಡುವ ಸಾಧ್ಯತೆ ಇದೆ. ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಲಿದ್ದಾರೆ. ಅಭಿಮಾನಿಗಳು ಅಂಬಿ ಹೆಸರಲ್ಲಿ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಈ ಮೂಲಕ ಅಂಬರೀಷ್​ ಅವರನ್ನು …

Read More »

ಅಪರಿಚಿತ ವಾಹನ ಡಿಕ್ಕಿ : ಗರ್ಭಿಣಿ ಹಸು ಸಾವು

ಶಿವಮೊಗ್ಗ: ಇಂದು ಬೆಳಿಗ್ಗೆ ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಮ್‌ ಬಳಿ ಅಪರಿಚಿತ ವಾಹನವೊಂದು ತುಂಬು ಗರ್ಭಿಣಿ ಹಸುವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಹಸು ಸ್ಥಳದಲ್ಲೆ ಒದ್ದಾಡಿ ಮೃತಪಟ್ಟಿದೆ. ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದು ಪಾಲಿಕೆ ವತಿಯಿಂದ ಹಸುವಿನ ಅಂತ್ಯಸಂಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ವಾಹನ ಚಾಲಕನ ಅಮಾನವೀಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ರಸ್ತೆ ಅಪಘಾತ : ಓರ್ವ ಸಾವು, ಏಳು ಮಂದಿ ಗಂಭೀರ ಗಾಯ

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಹತ್ತು ಜನರನ್ನೊಳಗೊಂಡ ಮಂಡ್ಯ ಜಿಲ್ಲೆಯ ಕುಟುಂಬವೊಂದು ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೆರೊ ವಾಹನವನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ, ಇಳಿದು ಅಂಗಡಿಗೆ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್​ಟಿಸಿ ಬಸ್, ಬೊಲೆರೊ ವಾಹನಕ್ಕೆ …

Read More »

ದೇವೇಂದ್ರ ಫಡ್ನವಿಸ್ ಸರಣಿ ಟ್ವೀಟ್​​ಗೆ ಕರ್ನಾಟಕ ಸಿಎಂ ತಿರುಗೇಟು

ಬೆಂಗಳೂರು : ಮಹಾರಾಷ್ಟ್ರದ ಒಂದೇ ಒಂದು ಗ್ರಾಮ, ಪಟ್ಟಣವನ್ನು ಕರ್ನಾಟಕದಲ್ಲಿ ವಿಲೀನಗೊಳಿಸುವುದಿಲ್ಲ ಎಂಬ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸರಣಿ ಟ್ವೀಟ್​​ಗೆ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ. …

Read More »