BigTv News
November 18, 2022
Breaking News
‘ಅಕೋಲಾ (ಮಹಾರಾಷ್ಟ್ರ): ಇಲ್ಲಿಗೆ ಆಗಮಿಸಿದ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ನಟಿ ರಿಯಾ ಸೇನ್ ಪಾಲ್ಗೊಂಡಿದ್ದಾರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಈ ತಿಂಗಳ ಆರಂಭದಲ್ಲಿ ನಟಿ ಹಾಗೂ ನಿರ್ದೇಶಕಿ ಪೂಜಾ ಭಟ್ ಹೈದರಾಬಾದ್‌ನಲ್ಲಿ ‘ಭಾರತ್ ಜೊಡೊ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದರು. 71ನೇ ದಿನದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ರಿಯಾ ಸೇನ್ ಪಾಲ್ಗೊಂಡಿರುವ ಚಿತ್ರಗಳ ಸರಣಿಯನ್ನು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ. ”ನಟಿ …
Read More »
BigTv News
November 18, 2022
Breaking News
ಮುಂಬೈ: ಭಾರತ್ ಜೋಡೊ ಯಾತ್ರೆಯಲ್ಲಿ ಭಾರತದ ರಾಷ್ಟ್ರಗೀತೆ ಬದಲಿಗೆ ನೇಪಾಳದ ರಾಷ್ಟ್ರಗೀತೆ ಕೇಳಿಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅನ್ನು ಬಿಜೆಪಿ ಮುಖಂಡರು ಟೀಕಿಸಿದ್ದಾರೆ. ಮಹಾರಾಷ್ಟ್ರದ ವಾಶಿಮ್‌ನಲ್ಲಿ ರಾಹುಲ್ ಗಾಂಧಿ ಅವರ ಭಾಷಣ ಇತ್ತು.ಭಾಷಣ ಮುಗಿದ ಬಳಿಕ, ರಾಹುಲ್ ಅವರು ‘ಈಗ ರಾಷ್ಟ್ರಗೀತೆ ಹಾಕಲಿದ್ದಾರೆ’ ಎಂದು ವೇದಿಕೆಯಲ್ಲಿ ನಿಂತುಕೊಂಡರು. ಆದರೆ, ಭಾರತದ ರಾಷ್ಟ್ರಗೀತೆ ಬದಲಿಗೆ, ನೇಪಾಳದ ರಾಷ್ಟ್ರಗೀತೆ ಕೇಳಿಬಂದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು ಎಂದು ವರದಿ ಮಾಡಿದೆ. ವೇದಿಕೆಯಲ್ಲಿ ನಿಂತಿದ್ದ …
Read More »
BigTv News
November 17, 2022
Breaking News, ಧಾರವಾಡ
ಧಾರವಾಡ: ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಈ ಬಾರಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಒಳ್ಳೆಯ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ …
Read More »
BigTv News
November 17, 2022
Breaking News, ತುಮಕೂರು
ತುಮಕೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆದುಕೊಂಡು ಬಂದು ಅಲ್ಲಿನ ಕಾಂಗ್ರೆಸ್ ಮುಖಂಡರು ಬಲಿ ಕೊಡಲು ಮುಂದಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲೇವಡಿ ಮಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಾಕಷ್ಟು ಕಾಂಗ್ರೆಸ್ ನಾಯಕರು ಇದ್ದರೂ ಸಹ ಬುಡ ಅಲಗಾಡುತ್ತಿರವ ಹಿನ್ನೆಲೆಯಲ್ಲಿ ಅದನ್ನು ಸರಿ ಮಾಡಲು ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದ್ದಿದಾರೆ. ನಗರದಲ್ಲಿ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವು ಪ್ರಕರಣದಲ್ಲಿ ಏಕಪಕ್ಷೀಯ ಕ್ರಮವಾಗಿದೆ …
Read More »
BigTv News
November 17, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ‘ ಸಿದ್ದರಾಮಯ್ಯ 75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯದವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಕುರಿತು ಅವಹೇಳನ ಹೇಳಿಕೆ ನೀಡಲಾಗಿದೆ., ಬ್ರಾಹ್ಮಣ ಸಮುದಾಯದವರನ್ನೇ ಗುರಿಯಾಗಿಸಿಕೊಂಡು ಮಾತನಾಡಲಾಗಿದೆ ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನ.17 ರಂದು ( ನಾಳೆ) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿದ್ದರಾಮಯ್ಯ-75 ಪುಸ್ತಕ …
Read More »
BigTv News
November 17, 2022
Breaking News, ಚಿತ್ರದುರ್ಗ
ಚಿತ್ರದುರ್ಗ : ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದ್ದು, ಸದ್ಯ ಮುರುಘಾ ಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ನಡುವೆ ಮೈಸೂರಿನ ಒಡನಾಡಿ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ತಂದೆ, ಚಿಕ್ಕಪ್ಪನಿಂದ ಬಾಲಕಿ ಮೇಲೆ ಒತ್ತಡ ಹೇರಲಾಗಿತ್ತು ಎಂದು ಆರೋಪಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುರುಘಾ ಶ್ರೀಗಳು ನಮಗೆ ಹಣದ ಸಹಾಯ ಮಾಡಿ ನಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ, ಅವರ ವಿರುದ್ಧ ಕೇಸ್ …
Read More »
BigTv News
November 17, 2022
Breaking News
ವಾಡಿ: ಸಾರ್ವಜನಿಕವಾಗಿ ಭಾಷಣ ಮಾಡುತ್ತ ಕಲಬುರಗಿ ಜಿಲ್ಲೆಯ ಬಿಜೆಪಿ ನಾಯಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ. ಈ ಕುರಿತು ತಮ್ಮ ಕಾರ್ಯಕರ್ತರೊಂದಿಗೆ ಚಿತ್ತಾಪುರ ತಾಲೂಕಿನ ವಾಡಿ ಪೋಲಿಸ್ ಠಾಣೆಗೆ ಆಗಮಿಸಿದ ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಠಾಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ನ.10 ರಂದು ವಾಡಿಯಲ್ಲಿ ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ …
Read More »
BigTv News
November 17, 2022
Breaking News, ಬೆಂಗಳೂರು
ಬೆಂಗಳೂರು: ಜ್ಞಾನ ಮತ್ತು ಮಾಹಿತಿ-ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ ಉತ್ತೇಜಿಸಲು ರಾಜ್ಯದಲ್ಲಿ 6 ಹೊಸ ‘ಟೆಕ್ ಸಿಟಿ’ಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಂಗಳೂರಿನ ಅರಮನೆಯಲ್ಲಿ ಆಯೋಜಿಸಿರುವ ಮೂರು ದಿನಗಳ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ನವೀನ ತಂತ್ರಜ್ಞಾನ ಬಳಸಿಕೊಂಡು ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಮೈಸೂರು, ಬೆಂಗಳೂರಿನ ಪಕ್ಕದಲ್ಲಿ ‘ತಂತ್ರಜ್ಞಾನ ನಗರ’ಗಳನ್ನು ನಿರ್ಮಿಸಲಾಗುವುದು’ ಎಂದರು. …
Read More »
BigTv News
November 17, 2022
Breaking News
ಹೊಸಪೇಟೆ : ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಂಡನಾಯಕನ ಹಳ್ಳಿಯಲ್ಲಿ ನಡೆದಿದೆ. ಹರಪನಹಳ್ಳಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸರಕಾರಿ ಬಸ್ ಮತ್ತು ಕಮಲಾಪುರದ ಕಡೆಯಿಂದ ಹೊಸಪೇಟೆಗೆ ಹೊರಟಿದ್ದ ಕಾರು ಕೊಂಡ ನಾಯಕನ ಹಳ್ಳಿಯಲ್ಲಿ ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.ಡಿಕ್ಕಿಯ ರಭಸಕ್ಕೆ ಕಾರು ಗುರುತೇ ಹಿಡಿಯಲಾಗದಂತೆ ನಜ್ಜುಗುಜ್ಜಾಗಿದೆ. ಕಾರು ಚಾಲಕ ಮದೀನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೊಸಪೇಟೆಯ ಸಂಚಾರಿ ಪೊಲೀಸರು ಸ್ಥಳಕ್ಕೆ …
Read More »
BigTv News
November 17, 2022
Breaking News
ಕೋಲಾರ: ಅಪಘಾತಕ್ಕೀಡಾಗಿದ್ದ ಯೋಧಯೊಬ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಲಹಂಕ ಕಮಾಂಡೋ ಆಸ್ಪತ್ರೆಯಲ್ಲಿ ನಡೆದಿದೆ. 22 ವರ್ಷದ ಚೇತನ್ ಎನ್ನುವವರೇ ಮೃತ ಯೋಧರಾಗಿದ್ದಾರೆ. ನ.7 ರಂದು ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಬಳಿ ಅಪಘಾತ ಸಂಭವಿಸಿತ್ತು. ಯೋಧ ಚೇಯನ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದರು. ಮೂಲತಃ ಚೇತನ್ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದವರಾಗಿದ್ದು, ಇಂದು ಯಲಹಂಕ ಬಳಿಯ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. …
Read More »