Breaking News

Breaking News

40 ಗಣ್ಯರಿಂದ ಗುಜರಾತ್‌ ಚುನಾವಣಾ ಪ್ರಚಾರ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ 40 ಗಣ್ಯರ ಹೆಸರನ್ನು ಗುಜರಾತ್‌ ಚುನಾವಣಾ ತಾರಾ ಪ್ರಚಾರಕರಾಗಿ ಕಾಂಗ್ರೆಸ್‌ ಘೋಷಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್, ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೂ ತಾರಾ ಪ್ರಚಾರಕರಾಗಿದ್ದಾರೆ. ಗುಜರಾತ್‌ ವಿಧಾನಸಭೆಗೆ ಡಿಸೆಂಬರ್‌ 1 ಮತ್ತು 5ರಂದು ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ ಬಿಜೆಪಿ 27 ವರ್ಷಗಳಿಂದ ಅಧಿಕಾರಲ್ಲಿದೆ. …

Read More »

ಮನೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ. ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕವನ್ನು …

Read More »

ಬಸ್‌ ಹಾಗೂ ಲಾರಿ ನಡುವೆ ಅಪಘಾತ : ಚಾಲಕ ಸಾವು

ಸುಳ್ಯ: ಬಸ್‌ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.ಲಾರಿ ಚಾಲಕ ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ. ತಕ್ಷಣವೇ ಸ್ಥಳೀಯರು ಸೇರಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನ ಹೊರತೆಗೆದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. …

Read More »

ಲಂಚ ಪ್ರಕರಣ : ಕೆಎಎಸ್‌ ಅಧಿಕಾರಿ ಬಂಧನ

ಬೆಂಗಳೂರು: ಜಮೀನಿನ ಖಾತೆ ಬದಲಾವಣೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬುವ ವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್‌ ಕುಮಾರ್‌ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ …

Read More »

ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು …

Read More »

ಸೂಪರ್​ ಸ್ಟಾರ್​ ಕೃಷ್ಣ ನಿಧನ : ಮೋದಿ ಸಂತಾಪ

ದೆಹಲಿ : ತೆಲುಗು ಮತ್ತು ಇಂಗ್ಲಿಷ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ. ಕೃಷ್ಣ ಅವರ ಪ್ರತಿಭೆ ಮತ್ತು ವ್ಯಕ್ತಿತ್ವವನ್ನು ಮೋದಿ ಸ್ಮರಿಸಿದ್ದಾರೆ.ತೆಲುಗು ನಟ ಮಹೇಶ್​ ಬಾಬು ಅವರ ತಂದೆ ಸೂಪರ್​ ಸ್ಟಾರ್​ ಕೃಷ್ಣ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. 5 ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಕೃಷ್ಣ ಘಟ್ಟಮನೇನಿ ಅವರ ಸಾಧನೆಯನ್ನು ಸ್ಮರಿಸಲಾಗುತ್ತಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಕೃಷ್ಣ ಆತ್ಮಕ್ಕೆ ಶಾಂತಿ ಕೋರಿದ್ದಾರೆ. …

Read More »

ಹೊಟ್ಟೆ ನೋವು ತಾಳಲಾರದೆ ವಿಷ ಸೇವಿಸಿ ಬಾಲಕಿ ಸಾವು

ಹುಬ್ಬಳ್ಳಿ: ಹೊಟ್ಟೆ ನೋವು ತಾಳಲಾರದೆ ಜಿಗುಪ್ಪೆಗೊಂಡ ಬಾಲಕಿಯೊಬ್ಬಳು ವಿಷಕಾರಕ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನ ರಸ್ತೆಯ ಶೈಲಾ ಗುರುಸಿದ್ದಪ್ಪ ಇಮಾಪುರ (15) ಮೃತಪಟ್ಟ ಬಾಲಕಿ. ಇವಳು ಶನಿವಾರ ರಾತ್ರಿ ಮನೆಯಲ್ಲಿ ವಿಷಕಾರಕ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾಗ ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾಳೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ …

Read More »

ಧಾರವಾಡದಲ್ಲಿ ಗಮನಸೆಳೆದ ಎಮ್ಮೆ ಓಡಿಸುವ ಸ್ಪರ್ಧೆ

ಧಾರವಾಡ: ಮನರಂಜನೆಗಾಗಿ ಟಗರಿನ ಕಾಳಗ, ಚಕ್ಕಡಿ ಓಡಿಸುವ ಸ್ಪರ್ಧೆ ಹೀಗೆ ಅನೇಕ ಸ್ಪರ್ಧೆಗಳನ್ನು ಅಲ್ಲಲ್ಲಿ ಆಯೋಜನೆ ಮಾಡಲಾಗಿರುತ್ತದೆ. ಆದರೆ ಧಾರವಾಡದಲ್ಲಿ ವಿಭಿನ್ನವಾದ ಸ್ಪರ್ಧೆಯೊಂದನ್ನು ಆಯೋಜನೆ ಮಾಡಲಾಗಿತ್ತು. ಅದುವೇ ಎಮ್ಮೆ ಓಡಿಸುವ ಸ್ಪರ್ಧೆ. ಎಮ್ಮೆ ಎಂದರೆ ಕೇವಲ ಎಮ್ಮೆ ಓಡಿಸುವ ಸ್ಪರ್ಧೆಯಲ್ಲ. ಬೈಕ್ ಹಿಂದೆ ಎಮ್ಮೆ ಬೆನ್ನಟ್ಟಿಸಿಕೊಂಡು ಓಡಿಸುವ ಸ್ಪರ್ಧೆಯನ್ನು ಧಾರವಾಡದ ಗೌಳಿಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಗೌಳಿಗಲ್ಲಿಯ ಸಾಯಿ ನಗರ ಹನುಮಂತನಗರದ ಹತ್ತಿರ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಅನೇಕರು ತಮ್ಮ ಎಮ್ಮೆಗಳ ಸಮೇತ …

Read More »

ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ : ಎಂ. ವೀರಪ್ಪ ಮೊಯಿಲಿ

ಬೆಂಗಳೂರು: ‘ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ಜವಾಹರಲಾಲ್ ನೆಹರೂ ಹೇಳಿದ್ದರು. ಅದರಂತೆ ಮೋದಿ ಸರ್ಕಾರ ಇಂದು ಇಡೀ ದೇಶವನ್ನೇ ನಾಶ ಮಾಡುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ಎಂ. ವೀರಪ್ಪ ಮೊಯಿಲಿ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ನೆಹರೂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರು. ದೇಶದ ಬಡತನ, …

Read More »

4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ : ಸಿಎಂ

ಕಲ್ಬುರ್ಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ, 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಪನೆ ನೆರವೇರಿಸಿ ಮಾತನಾಡಿ, ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಶಾಲಾಕೊಠಡಿಗಳಂತೆ ಒಟ್ಟು 2000 ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ …

Read More »