Breaking News

Breaking News

ರಾಯಚೂರು ಇತಿಹಾಸದಲ್ಲೇ ಅತಿದೊಡ್ಡ ಗಾಂಜಾ ಪ್ರಕರಣ ಪತ್ತೆ : ಇಬ್ಬರು ಆರೋಪಿಗಳು ಅರೆಸ್ಟ್.!

ರಾಯಚೂರು: ಜಿಲ್ಲೆಯ ಇತಿಹಾಸದಲ್ಲೇ ಅತಿದೊಡ್ಡ ಗಾಂಜಾ ಜಾಲವೊಂದನ್ನು ಭೇದಿಸಿರುವ ಬಳಗಾನೂರು ಠಾಣೆ ಪೊಲೀಸರು, ಕ್ಯೂಆರ್ ಕೋಡ್ ಆಧಾರಿತ ಗುಪ್ತ ವ್ಯವಹಾರ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ ನಿವಾಸಿ ದೀನಬಂಧು (53) ಹಾಗೂ ಬಸವರಾಜೇಶ್ವರ ಕ್ಯಾಂಪ್‌ನ ಶಂಭು ಸರ್ದಾರ್ (31) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 20 ಕೆಜಿ ತೂಕದ, ಅಂದಾಜು ₹20 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸೆಂಟ್ರಿಂಗ್ ಕೆಲಸಗಾರ ಹಾಗೂ ಕೂಲಿ …

Read More »

ಮಗನ ವಿರುದ್ಧ ಅತ್ಯಾಚಾರ ಪ್ರಕರಣ: ಮನನೊಂದ ತಾಯಿ ಆತ್ಮಹತ್ಯೆಗೆ ಯತ್ನ

ಸಿಂಧನೂರು: ತಾಲ್ಲೂಕಿನ ಬೋಗಾಪುರ ಗ್ರಾಮದ ವ್ಯಕ್ತಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿದ್ದಕ್ಕೆ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಗಮ್ಮ(60) ಆತ್ಮಹತ್ಯೆಗೆ ಯತ್ನಿಸಿದವರು. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಗಂಗಮ್ಮ ಅವರ ಮಗನ ವಿರುದ್ಧ ಅದೇ ಗ್ರಾಮದ ಮಹಿಳೆಯೊಬ್ಬರು ಅತ್ಯಾಚಾರ ಆರೋಪದಡಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ನಂತರ ದೂರುದಾರ ಮಹಿಳೆಯ ಕುಟುಂಬಸ್ಥರು ಗಂಗಮ್ಮ ಅವರ, ಮನೆಗೆ ನುಗ್ಗಿ ಆರೋಪಿ ಗಂಗಪ್ಪನನ್ನು ಹುಡುಕಿ ಒಪ್ಪಿಸಬೇಕು. ಇಲ್ಲದಿದ್ದರೆ ಗ್ರಾಮ ಬಿಟ್ಟು …

Read More »

ಚಿತ್ರದುರ್ಗ: ಕೋನಾಪುರ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್; ಚಾಲಕ ಸೇರಿ ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಬಳಿ ಖಾಸಗಿ ಬಸ್ಸೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಮೊಹಮ್ಮದ್ ಮತ್ತು ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದಲ್ಲಿ ಬಸ್ ನಲ್ಲಿದ್ದ 20ಕ್ಕೂ …

Read More »

ಪ್ರೀತಿಸಿ ಮದುವೆಯಾಗಿ ಮೂರೇ ತಿಂಗಳು – ನೇಣಿಗೆ ಶರಣಾದ ಟೀಚರ್!

ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ 25 ವರ್ಷದ ಖಾಸಗಿ ಶಾಲಾ ಶಿಕ್ಷಕಿ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ ಶ್ವೇತಾ ಅವರು ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನನ್ನು ವಿವಾಹವಾಗಿದ್ದು, ಪತಿಯೊಂದಿಗೆ ಸುಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ್ವೇತಾ ಅವರ ಮೃತದೇಹ ಪತ್ತೆಯಾಗಿದ್ದು, ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ …

Read More »

ಬೆಂಗಳೂರು: ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ

ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಅಟಲ್ ಬಿಹಾರಿ ವಾಜಪೇಯಿ ಉದ್ಯಾನದಲ್ಲಿ ಸ್ನೇಹಿತರ ನಡುವೆ ನಡೆದ ಜಗಳ 19 ವರ್ಷದ ರಾಕೇಶ್ ಉರ್ಫ್ ರಾಕಿ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಮದ್ಯಪಾನದ ವೇಳೆ ₹7,500 ಹಣ ವಾಪಸ್ ಕೇಳಿದ ವಿಚಾರಕ್ಕೆ ಜಗಳವಾಗಿದ್ದು, ಆರೋಪಿ ಮೊದಲು ಮುಷ್ಠಿಯಿಂದ ಹಲ್ಲೆ ನಡೆಸಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರು …

Read More »

8 ತಿಂಗಳ ಗರ್ಭಿಣಿ ಶಂಕಾಸ್ಪದ ಸಾವು: ಪತಿ ಕಿರುಕುಳ ಆರೋಪ

ಆನೇಕಲ್‌: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯ ಕಿರುಕುಳಕ್ಕೆ ಬೇಸತ್ತು 8 ತಿಂಗಳ ಗರ್ಭಿಣಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಳೆ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ನೇಪಾಳ ಮೂಲದ ಸವಿತಾ (28) ಎಂದು ಗುರುತಿಸಲಾಗಿದೆ. ಪತಿ ಹೇಮರಾಜು (32) ಮತ್ತು 2 ವರ್ಷದ ಗಂಡು ಮಗುವಿನೊಂದಿಗೆ ಕಳೆದ 4 ವರ್ಷಗಳಿಂದ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೇಮರಾಜ್‌ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದು, ಸವಿತಾ ಮನೆಗೆಲಸ ಮಾಡುತ್ತಿದ್ದರು. ಜಗಳದ ಬಳಿಕ …

Read More »

ನರಗುಂದ ಬಳಿ ಭೀಕರ ರಸ್ತೆ ಅಪಘಾತ: ಜೈಲು ವಾರ್ಡರ್ ಮಂಜಪ್ಪ ಮಜ್ಜಗಿ ಸ್ಥಳದಲ್ಲೇ ಸಾವು

ಗದಗ: ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಜಿಲ್ಲಾ ಕಾರಾಗೃಹದ ವಾರ್ಡರ್ ಮಂಜಪ್ಪ ಮಜ್ಜಗಿ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡದಿಂದ ಸ್ವಗ್ರಾಮ ನೀರಲಗಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಮಂಜಪ್ಪ ಅವರನ್ನು ಸ್ಥಳೀಯರು ಹಾಗೂ ಪೊಲೀಸರು ಹೊರತೆಗೆದಾಗಲೇ ಮೃತಪಟ್ಟಿರುವುದು ದೃಢಪಟ್ಟಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ …

Read More »

ದಂಪತಿಗೆ ಕರೆ ಮಾಡಿ ಜೀವ ಬೆದರಿಕೆ

ಪಡುಬಿದ್ರಿ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಖಂಡಿಸಿದ್ದ ಹಿನ್ನೆಲೆಯಲ್ಲಿ ಮೊಹಮ್ಮದ್ ಆಸೀಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಅವರ ಪತ್ನಿಗೂ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ರಸ್ತೆಯಲ್ಲಿ ಜಗಳವಾಡಿ ಶಾಂತಿಭಂಗ ಉಂಟುಮಾಡಿದ ಆರೋಪದಡಿ ನಿತಿನ್, ರಿತಿಕ್ ಹಾಗೂ ವಿನೋದ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದೇ …

Read More »

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಕುಟುಂಬ ಕಲಹ: ಎರಡು ತೊಲೆ ಬಂಗಾರಕ್ಕಾಗಿ ಅತ್ತೆಯ ಜೀವ ತೆಗೆದ ಅಳಿಯ

ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಿ ಅಗ್ರಹಾರದಲ್ಲಿ ಕೇವಲ ಎರಡು ತೊಲೆ ಚಿನ್ನದ ವಿಚಾರಕ್ಕೆ ಅಳಿಯ ಅಕ್ಬರ್, ಅತ್ತೆ ರೋಶನಬಿ (45) ಅವರ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂರು ತಿಂಗಳ ಹಿಂದೆ ಜನಿಸಿದ ಮಗುವಿನ ಸಂದರ್ಭದಲ್ಲಿ ಎರಡು ತೊಲೆ ಚಿನ್ನ ನೀಡುವುದಾಗಿ ಅತ್ತೆ ಹೇಳಿದ್ದರೂ, ನೀಡದ ಕಾರಣ ಇಬ್ಬರ ನಡುವೆ ಜಗಳ ನಡೆದಿದ್ದು, ಜುಲೈ 10ರಂದು ಕೋಪಗೊಂಡ ಅಕ್ಬರ್ …

Read More »

ಪತ್ನಿಯನ್ನು ಕರೆತರಲು ಹೋದ ಪತಿ ಕೊಲೆ: ಚಡಚಣ ತಾಲ್ಲೂಕಿನಲ್ಲಿ ಕೌಟುಂಬಿಕ ಕಲಹಕ್ಕೆ ರಕ್ತಪಾತ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಭೀಕರ ತಿರುವು ಪಡೆದು, ಪತ್ನಿಯನ್ನು ಕರೆತರಲು ಅತ್ತೆ ಮನೆಗೆ ಹೋದ 35 ವರ್ಷದ ಬಾಬುಸಾಬ್ ಜಮಾದಾರ್ ಹಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಸ್ನೇಹಿತ ಅಪ್ಪಾಲಾಲ ಮಕಾಸಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸೌಂದರ್ಯ, ಆಕೆಯ ತಾಯಿ, ಸೋದರ ಹಾಗೂ ಮತ್ತೊಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ …

Read More »