BigTv News
October 24, 2022
Breaking News, ಉಡುಪಿ
ಉಡುಪಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದೆ. ರಾಜ್ಯದ ಸುಮಾರು ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಕುಸುಮ್ ಯೋಜನೆಯಡಿ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. …
Read More »
BigTv News
October 24, 2022
Breaking News
ದಕ್ಷಿಣ ಸೊಮಾಲಿಯಾ: ಕಿಸ್ಮಾಯೊದಲ್ಲಿನ ಹೊಟೆಲ್ ನಲ್ಲಿ ಕಾರ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಹಾಗೂ 47 ಮಂದಿ ಗಾಯಗೊಂಡಿದ್ದಾರೆ ಎಂದು ಅಂತರಾಷ್ಟ್ರೀಯ ಸುದ್ದಿ ಮೂಲಗಳು ವರದಿ ಮಾಡಿವೆ. ಈ ಘಟನೆಯ ಹೊಣೆಯನ್ನು ಇಸ್ಲಾಮಿಸ್ಟ್ ಗುಂಪು ಅಲ್-ಶಬಾಬ್ ಹೊತ್ತುಕೊಂಡಿದೆ ಎನ್ನಲಾಗಿದೆ. ಅಲ್-ಖೈದಾ ಉಗ್ರ ಸಂಘಟನೆಯು ಮೊಗಾದಿಶು, ಹಾಗೂ ಮಧ್ಯ ಸೊಮಾಲಿಯಾವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಇದು ಇತ್ತೀಚಿನದಾಗಿದೆ. ಮಧ್ಯಾಹ್ನ 12.45ರ ಸುಮಾರಿಗೆ ಹೊಟೆಲ್ ತವಕಲ್ ಗೆ ಉಗ್ರ ದಾಳಿಕೋರರಿದ್ದ …
Read More »
BigTv News
October 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ …
Read More »
BigTv News
October 24, 2022
Breaking News
ರಾಯಚೂರು: ಮಾಜಿ ಸಚಿವ ಸುಧೀಂದ್ರರಾವ್ ಕಸ್ಬೆ (83) ಅವರು ಸ್ವಗ್ರಾಮ ತಾಲ್ಲೂಕಿನ ಗಿಲ್ಲೇಸುಗೂರಿನಲ್ಲಿ ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪತ್ನಿಯರು, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ. 1978ರಲ್ಲಿ ಕಲ್ಮಲಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಮುಜರಾಯಿ, ಕೃಷಿ ಖಾತೆ ಸಚಿವರಾಗಿದ್ದರು. 1983 ರಲ್ಲಿ ಅದೇ ಕ್ಷೇತ್ರದಿಂದ ಮರುಆಯ್ಕೆಯಾಗಿದ್ದರು.
Read More »
BigTv News
October 24, 2022
Breaking News
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ 14 ಲಕ್ಷ ದೀಪೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು. ಅಯೋಧ್ಯೆಯ ಹೊಸ ಘಾಟ್, ಸರಯೂ ನದಿಯಲ್ಲಿ ಪ್ರಧಾನಿ ಮೋದಿ ದೀಪ ಹಚ್ಚುವ ಮೂಲಕ ದೀಪೋತ್ಸವವನ್ನು ಉದ್ಘಾಟನೆ ಮಾಡಿದರು. ಅಯೋಧ್ಯೆಯ ಸರಯೂ ನದಿಯ ದಡದದುದ್ದಕ್ಕೂ ಮಣ್ಣಿನ ದೀಪಗಳು ಜಗಮಗಿಸಿದವು. ದೀಪಾವಳಿಯ ಮುನ್ನಾದಿನವೇ ಅಯೋಧ್ಯೆಯ ರಾಮಜನ್ಮಭೂಮಿ ದಿವ್ಯ ಬೆಳಕಿನಲ್ಲಿ ಹೊಳೆಯಿತು.
Read More »
BigTv News
October 24, 2022
Breaking News, ರಾಮನಗರ
ರಾಮನಗರ : ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
October 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆತ್ಮೀಯ ಸ್ನೇಹಿತ ಆನಂದ್ ಮಾಮನಿ ಅಂತ್ಯಕ್ರಿಯೆಗೆ ಹೋಗ್ತೀದಿನಿ. ಸಚಿವರು ನಾವೆಲ್ಲ ಅಂತ್ಯಕ್ರಿಯೆಯಲ್ಲಿ ಭಾಗೀಯಾಗ್ತೀವಿ. ಸರ್ಕಾರಿ ಗೌರವದ ಮೂಲಕ ಅಂತ್ಯಕ್ರಿಯೆ. ಆನಂದ್ ಮಾಮನಿ ಅತ್ಯಂತ ಕ್ರಿಯಾಶೀಲ ನಾಯಕರಾಗಿದ್ದರು. ಸಣ್ಣ ವಯಸ್ಸಿನಲ್ಲಿ ಅವರು ನಿಧನವಾಗಿದ್ದು ಬಹಳ ದುಃಖದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಮಾಮನಿ ಮೂರು ಬಾರಿ ಶಾಸಕರಾಗಿದ್ರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ದುಡದಿದ್ರು.ಆನಂದ್ ಮಾಮನಿ ರೈತರಿಗೆ ಅನೇಕ ಸಹಾಯ …
Read More »
BigTv News
October 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟ ಕಳೆದ ಸುಮಾರು ಆರು ದಶಕಗಳ ಹೋರಾಟ ಈಗ ಇದರ ಸ್ರರೂಪ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು ಈ ಯೋಜನೆ ಸ್ವರೂಪ ಬದಲಾವಣೆ ಸಾಧಕ ಬಾಧಕ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಒಮ್ಮಿತಾಭಿಪ್ರಾಯಕ್ಕೆ ಮಹದಾಯಿ ರೈತಪರ ಹೋರಾಟ ಸಮಿತಿ ತೀರ್ಮಾನ ತೆಗೆದುಕೊಳ್ಳಲಾಯಿತು. ಅನೇಕ ರೀತಿಯ ಹೋರಾಟ ಈ ಯೋಜನೆ ಜಾರಿಗಾಗಿ ನಡೆಸಲಾಯಿತು ಇದಕ್ಕೆ ಅನೇಕ ವಿಘ್ನಗಳು ಬಂದವು ಆದ್ದರಿಂದ ಈಗ ಅತ್ಯಂತ …
Read More »
BigTv News
October 23, 2022
Breaking News
ಮಧ್ಯಪ್ರದೇಶ: ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು 14 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಬಸ್ ತೆರಳುತ್ತಿತ್ತು. ಪ್ರಯಾಣಿಕರು ದೀಪಾವಳಿ ಆಚರಿಸಲು ತಮ್ಮ ಊರುಗಳಿಗೆ ತೆರಳುತ್ತಿದ್ದರು. ಅಪಘಾತ ಆದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಜಖಂಗೊಂಡ ಬಸ್‌ನೊಳಗೆ …
Read More »
BigTv News
October 23, 2022
Breaking News, ಬೆಂಗಳೂರು
ಬೆಂಗಳೂರು: ವಹಿವಾಟು ಸಮಯ ಮೀರಿ ತಡರಾತ್ರಿಯವರೆಗೂ ತೆರೆದಿದ್ದ ಬಾರ್ ಆಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆ.ಆರ್. ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಟಾನಿಕ್ ಬಾರ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು, ದಾಳಿ ಮಾಡಿ ಮಾಲೀಕರ ವಿರುದ್ಧ ಪ್ರಕರಣ …
Read More »