BigTv News
October 23, 2022
Breaking News, ಬೆಂಗಳೂರು
ಬೆಂಗಳೂರು: ವಹಿವಾಟು ಸಮಯ ಮೀರಿ ತಡರಾತ್ರಿಯವರೆಗೂ ತೆರೆದಿದ್ದ ಬಾರ್ ಆಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆ.ಆರ್. ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಟಾನಿಕ್ ಬಾರ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು, ದಾಳಿ ಮಾಡಿ ಮಾಲೀಕರ ವಿರುದ್ಧ ಪ್ರಕರಣ …
Read More »
BigTv News
October 23, 2022
Breaking News, ಜಿಲ್ಲೆ, ಹಾಸನ
ಹಾಸನ : ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ. ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು, ರಾಜ ಬೀದಿಯೂ ಇರಬಹುದು ಎಂದು ಹೇಳಿದರು. …
Read More »
BigTv News
October 23, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ನಗರದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ. ಶನಿವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಕವಿತಾ ಎಸ್. ಮನ್ನಿಕೇರಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ದಿವ್ಯ ಪ್ರಭು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ದಿವ್ಯ ಪ್ರಭು ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು …
Read More »
BigTv News
October 23, 2022
Breaking News, ಬೆಂಗಳೂರು
ಬೆಂಗಳೂರು : ಪುನೀತ್ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಪುನೀತ ಪರ್ವ ಕಾರ್ಯಕ್ರಮವನ್ನು ಟಿವಿಯಲ್ಲಿ ನೋಡುವಾಗಲೇ ಅಭಿಮಾನಿ ಹೃದಯಾಘಾತಕ್ಕೊಳಗಾಗಿದ್ದಾರೆ. ನಿನ್ನೆ ಮನೆಯಲ್ಲಿ ಪುನೀತ ಪರ್ವ ಕಾರ್ಯಕ್ರಮ ನೋಡುವಾಗಲೇ ಹೃದಯಾಘಾತದಿಂದ ಸಾವು ಸಂಭವಿಸಿದೆ. ಪುನೀತ್ ಪರ್ವ ಕಾರ್ಯಕ್ರಮ ನೋಡುವಾಗ ಎಂಥ ಮನುಷ್ಯ ಸತ್ತು ಹೋದ್ರು ಎಂದು ಅಭಿಮಾನಿ ಕಣ್ಣೀರಿಟ್ಟಿದ್ದರು. ಮಲ್ಲೇಶ್ವರಂನ ಲಿಂಕ್ ರೋಡ್ ನಲ್ಲಿ ಇರುವ ಪುನೀತ್ ಅಭಿಮಾನಿಯನ್ನು ಹೃದಯಾಘಾತವಾದ ತಕ್ಷಣವೇ ಕೆ.ಸಿ.ಜನರಲ್ ಆಸ್ಪತ್ರೆಗೆ …
Read More »
BigTv News
October 23, 2022
Breaking News, ರಾಯಚೂರು
ರಾಯಚೂರು: ಸ್ಯಾಂಡಲ್ ವುಡ್ ಮತ್ತು ರಾಜಕಾರಣದಿಂದ ದೂರ ಸರಿದಿದ್ದ ಮೋಹಕ ತಾರೆ ರಮ್ಯಾ ಮತ್ತೆ ಸುದ್ದಿ ಮಾಡುತ್ತಿದ್ದಾರೆ. ಇತ್ತೀಚಿಗೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಹಾಜರ್ ಆಗಿದ್ದ ರಮ್ಯಾ, ಇದೀಗ ರಾಜಕೀಯದಲ್ಲೂ ಶೈನ್ ಆಗುತ್ತಿದ್ದಾರೆ. ನಟಿ ರಮ್ಯಾ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ …
Read More »
BigTv News
October 23, 2022
Breaking News, ರಾಯಚೂರು
ರಾಯಚೂರು- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಕರ್ನಾಟಕದ ವ್ಯಾಪ್ತಿಯಲ್ಲಿನ ಸಂಚಾರವನ್ನು ನಾಳೆಗೆ ಪೂರ್ಣಗೊಳಿಸಲಿದೆ. ಇಂದು ಬೆಳಗ್ಗೆ ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದಿಂದ ಪಾದಯಾತ್ರೆ ಆರಂಭವಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸ್ಥಳೀಯ ನಾಯಕರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಡವಾಗಿ ಯಾತ್ರೆಗೆ ಜೊತೆಗೂಡಿದರು. ಸಂಜೆ ರಾಯಚೂರು ನಗರ ಭಾಗದಿಂದ ಯಾತ್ರೆ ಪುನರಾಂಭವಾಗಲಿದ್ದು, ಗುಂಜ್ ವೃತ್ತದಲ್ಲಿ ಅಂತ್ಯವಾಗಲಿದೆ. ರಾತ್ರಿ …
Read More »
BigTv News
October 23, 2022
Breaking News, ದಾವಣಗೆರೆ
ದಾವಣಗೆರೆ : ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ(63) ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿ. ರಾಜಕುಮಾರ ಅವರಿಗೆ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ನಗರದ ಜೆಎಚ್ ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸ್ವಗ್ರಾಮ ದ್ವಾರನಕುಂಟೆ ಗ್ರಾಮದಲ್ಲಿ …
Read More »
BigTv News
October 23, 2022
Breaking News, ಬೆಳಗಾವಿ
ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ ರಾಜಾ …
Read More »
BigTv News
October 23, 2022
Breaking News, ಬೆಳಗಾವಿ
ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, …
Read More »
BigTv News
October 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ದೇವರ ಮತ್ತೊಂದು ರೂಪವೇ ಜನ್ಮ ಕೊಡುವ ತಾಯಿ ನಮ್ಮನ್ನು ಪ್ರೀತಿಸಿ ಸರಿದಾರಿಯಲ್ಲಿ ನಡೆಸುವಂತಹ ನಮ್ಮ ಜೀವನದ ಮೊದಲ ಗುರುವೇ ತಾಯಿ ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಎಂದು ದೇವರೇ ತಾಯಿಯನ್ನು ಸೃಷ್ಟಿಸಿದ ಎಂಬ ಮಾತುಗಳಿವೆ ಅದರಲ್ಲಿ ಕೆಲವು ಪ್ರಮುಖ ಕ್ಷಣಗಳನ್ನು ನಾವು ವಿವರಿಸಬಹುದು ತನ್ನ ಮಕ್ಕಳ ಹಸಿವನ್ನ ನೀಗಿ ಕಷ್ಟಗಳನ್ನ ದೂರ ಮಾಡಿ ಪ್ರೀತಿ ಮತ್ತು ರಕ್ಷಣೆಯನ್ನ ನೀಡುವ ತಾಯಿ ಈ ಪ್ರಪಂಚದಲ್ಲಿ ವಿಭಿನ್ನ ಸ್ಥಾನವನ್ನ ಪಡೆದು …
Read More »